ವಿಜ್ಞಾನ ಮೇಳ ಉದ್ಘಾಟನೆ
Team Udayavani, Jan 13, 2018, 12:41 PM IST
ಪುತ್ತೂರು: ಯುವಶಕ್ತಿ ಸದಾ ಜ್ಞಾನದಾಹ ಹೊಂದಿರಬೇಕು. ದಿನ ನಿತ್ಯದ ಎಲ್ಲ ಚಟುವಟಿಕೆಗಳಲ್ಲಿ ವೈಜ್ಞಾನಿಕ ತತ್ವ ಸಿದ್ಧಾಂತಗಳು ಅಡಗಿವೆ. ತತ್ವಜ್ಞಾನವನ್ನು ಒಳಗೊಂಡ ತಂತ್ರಜ್ಞಾನ ಮತ್ತು ಸುಜ್ಞಾನದೊಂದಿಗೆ ಇರುವ ವಿಜ್ಞಾನವು ದೇಶದ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿ ಪರಿಣಮಿಸುತ್ತದೆ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಹೇಳಿದರು.
ದರ್ಬೆ ಸಂತ ಫಿಲೋಮಿನಾ ಕಾಲೇಜಿನ ವಜ್ರಮಹೋತ್ಸವ ಆಚರಣೆ ಅಂಗವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಕಾರದಲ್ಲಿ ಅಭಿವೃದ್ಧಿಗಾಗಿ ವಿಜ್ಞಾನ ಎಂಬ ಧ್ಯೇಯದೊಂದಿಗೆ ಶುಕ್ರವಾರ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೈನಂದಿನ ಜೀವನದಲ್ಲಿ ಬಳಸಲ್ಪಡುವ ನಾನಾ ರೀತಿಯ ವಸ್ತುಗಳಿಗೆ ವೈಜ್ಞಾನಿಕ ಆವಿಷ್ಕಾರಗಳೇ ಕಾರಣ. ಹಿಂದೆ ಹಳ್ಳಿಯ ಮಕ್ಕಳು ತೆಂಗಿನ ಸೋಗೆಯನ್ನು ಬಳಸಿ ಗಿರಿಗಿಟ್ ಎನ್ನುವ ವಸ್ತು ತಯಾರಿಸುತ್ತಿದ್ದರು. ಇದೀಗ ವಿದ್ಯುತ್ತಿನ ಅನ್ವೇಷಣೆಯಿಂದಾಗಿ ಅದನ್ನೇ ನಾವು ಇಂದು ಫ್ಯಾನ್ ರೂಪದಲ್ಲಿ ಬಳಸುತ್ತಿದ್ದೇವೆ.
ನಮ್ಮ ಆವಿಷ್ಕಾರಗಳಲ್ಲಿ ಕೆಡುಕು ಕಡಿಮೆಯಿದ್ದು, ಸಮಾಜದ ಬೆಳವಣಿಗೆಗೆ ಪೂರಕವಾಗಿರಬೇಕು. ವಿವೇಕಾನಂದರು ದೇಶದ ಒಳಿತಿಗೆ ಯುವಶಕ್ತಿಯು ಅನಿವಾರ್ಯವಾಗಿದೆ ಎಂದಂತೆ, ದೇಶವು ಯುವ ವಿಜ್ಞಾನಿಗಳನ್ನು ಹೊಂದಿದಾಗ ವಿಶ್ವ ಮಟ್ಟದಲ್ಲಿಯೇ ಅಗ್ರಮಾನ್ಯ ಶಕ್ತಿಶಾಲಿ ರಾಷ್ಟ್ರ ಎನಿಸಿಕೊಳ್ಳುವುದು ಎಂದರು.
ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ನಾವು ಮಾಡುವ ಪ್ರತಿಯೊಂದು ಚಟುವಟಿಕೆಗಳೂ ನರಾವರ್ತನೆಗೊಂಡಾಗ ಅನ್ವೇ‚ಷಣೆಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಯೊಂದಿಗೆ ಕ್ರಿಯಾಶೀಲತೆ, ಸಂವಹನ ಕಲೆ, ವೈಜ್ಞಾನಿಕ ದೃಷ್ಟಿಕೋನ ಮುಂತಾದವನ್ನು ಅಳವಡಿಸಿಕೊಂಡಾಗ ಅಭಿವೃದ್ಧಿ ಕಡೆ ಸಾಗಬಹುದು ಎಂದರು.
ಬೆಳವಣಿಗೆ ಸಾಧಿಸಬಹುದು
ಕಾಲೇಜಿನ ಪ್ರಾಚಾರ್ಯ ಪ್ರೊ| ಲಿಯೋ ನೊರೊನ್ಹಾ ಮಾತನಾಡಿ, ಇಂದು ನಮ್ಮ ಎಲ್ಲ ಚಟುವಟಿಕೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಹಾಸುಹೊಕ್ಕಾಗಿ ನಿಂತಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಿಂದ ರಚನಾತ್ಮಕ ರೀತಿಯಲ್ಲಿ ಕೆಲಸ ಮಾಡುವ ವಿಜ್ಞಾನಿಗಳು, ವೈದ್ಯರು, ಎಂಜಿನಿಯರ್‌ಗಳು ಹುಟ್ಟುತ್ತಾ ಸಾಗಿದಾಗ ದೇಶವು ಸಮಗ್ರ ಬೆಳವಣಿಗೆಯನ್ನು ಸಾಧಿಸಬಹುದು ಎಂದರು.
ಗುಣಶ್ರೀ ಮತ್ತು ತಂಡ ಪ್ರಾರ್ಥಿಸಿದರು. ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ವಿಜ್ಞಾನ ಮೇಳದ ಸಂಯೋಜಕ ಚಂದ್ರಶೇಖರ್ ಕೆ. ಸ್ವಾಗತಿಸಿದರು. ವಿಜ್ಞಾನ ವಿಭಾಗದ ಡೀನ್ ಪ್ರೊ| ಉದಯ ಕೆ. ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಡ್ವಿನ್ ಎಸ್. ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಸ್ಪರ್ಧೆಗಳು
ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಕಾಲೇಜಿನ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಪ್ರಬಂಧ ಸ್ಪರ್ಧೆ, ಸಮಾಜದ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಮಾದರಿಗಳ ಸ್ಪರ್ಧೆ ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು. 9 ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಾನವನು ಸಮಾಜಜೀವಿ
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಆಲ್ಫ್ರೆಡ್ ಜೆ. ಪಿಂಟೊ ಅವರು ಮಾತನಾಡಿ, ಮಾನವನು ಸಮಾಜಜೀವಿ. ಸಮಾಜದ ಎಲ್ಲ ಆಗುಹೋಗುಗಳಿಗೆ ಮೂಲಕಾರಣ. ಆತನಲ್ಲಿ ಸಾಧಿಸುವ ಛಲ, ಅನ್ವೇಷಣಾಶೀಲತೆ ಮತ್ತು ಪ್ರಶ್ನಿಸುವ ಮನೋಭಾವನೆ ಇರಬೇಕು. ಹಾಗೆಯೇ, ಇತರರೊಂದಿಗೆ ಉತ್ತಮ ಬಾಂಧವ್ಯ, ನೈತಿಕ ಮತ್ತು ಆಧ್ಯಾತ್ಮಿಕ ಗುಣಗಳಿದ್ದಾಗ ಸಮಾಜದಲ್ಲಿ ಬೆಳವಣಿಗೆ ಸಾಧಿಸಬಹುದು ಎಂದು ಹೇಳಿದರು.
ವಿಶೇಷ ಉಪನ್ಯಾಸ
ವಿಜ್ಞಾನ ಮೇಳದಲ್ಲಿ ಎರಡು ವಿಶೇಷ ಉಪನ್ಯಾಸಗಳು ನಡೆದವು. ಮಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ಸ್ನಾತಕೋತ್ತರ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ| ಗಣೇಶ್ ಸಂಜೀವ್ ಅವರು ‘ಕೃತಕ ವಿಕಿರಣ ವಸ್ತುಗಳು ಮತ್ತು ಅವುಗಳ ಉಪಯೋಗ’ ಕುರಿತು ಉಪನ್ಯಾಸ ನೀಡಿದರು. ಪುತ್ತೂರಿನ ಐಸಿಎಆರ್- ಗೇರು ಸಂಶೋಧನ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಡಾ| ಜೆ. ದಿನಕರ ಅಡಿಗ ಅವರು ‘ತೋಟಗಾರಿಕಾ ಅಧ್ಯಯನದಲ್ಲಿ ಸಂಶೋಧನೆಗಳಿಗೆ ಅವಕಾಶಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.