ಕೇಂದ್ರದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ
Team Udayavani, Mar 18, 2017, 2:55 PM IST
ವಿಟ್ಲ: ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ವಿಟ್ಲ ವಲಯ ವತಿಯಿಂದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಸ್‌ಡಿಪಿಐ ಮುಖಂಡ ಮಹಮೂದ್ ಕಡಂಬು ಮಾತನಾಡಿ, “ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದರೆ 24 ಗಂಟೆಯೊಳಗೆ ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುತ್ತೇವೆ’ ಎಂದಿದ್ದರು. 240 ದಿನ ಕಳೆದರೂ ಬಂದಿಲ್ಲ. ನೋಟು ನಿಷೇಧಿಸಿ ಬಡವರ್ಗದವರನ್ನು ಸಂಕಷ್ಟಕ್ಕೀಡು ಮಾಡಿದರು. ಎಲ್ಲ ವಸ್ತುಗಳ ಬೆಲೆಯೇರಿಕೆ ಆಗುತ್ತಿದೆ ಎಂದು ಆರೋಪಿಸಿದರು.
ಶಾಕೀರ್ ಅಳಕೆಮಜಲು ಮಾತನಾಡಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಇಲ್ಲಿಯ ಜನತೆಗೆ ಅಪಾಯವಿದ್ದು, ಈ ಬಗ್ಗೆ ಜನರು ಜಾಗೃತರಾಗಬೇಕು ಎಂದರು.
ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಖಲಂದರ್ ಪರ್ತಿಪ್ಪಾಡಿ, ಮುಖಂಡರಾದ ಕಮರುದ್ದೀನ್ ಪುಣಚ, ಅಝೀಜ್ ಕಡಂಬು, ಅಬ್ದುಲ್‌ರಹಿಮಾನ್ ಒಕ್ಕೆತ್ತೂರು, ಹೆ„ದರ್‌ಅಲಿ ಕಡಂಬು, ಇಸ್ಮಾಯಿಲ್ ಒಕ್ಕೆತ್ತೂರು ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.