ಉಳ್ಳಾಲದಲ್ಲಿ ಸಮುದ್ರ ಕೊರೆತ ತೀವ್ರ
Team Udayavani, Jul 15, 2018, 11:58 AM IST
ಉಳ್ಳಾಲ: ಕಳೆದೆರಡು ದಿನಗಳಿಂದ ಬೀಸುತ್ತಿರುವ ಗಾಳಿಯ ಪರಿಣಾಮ ಸೋಮೇಶ್ವರ ಉಚ್ಚಿಲ ಬೀಚ್ ರೋಡ್‌ನಲ್ಲಿ ರಸ್ತೆವರೆಗೆ ಸಮುದ್ರದ ಕೊರೆತ ಸಂಭವಿಸಿದೆ. ಉಳ್ಳಾಲ ಕಿಲೆರಿಯಾ ನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಮನೆಗಳಿಗೆ ಸಮುದ್ರದ ಅಲೆಗಳು ನುಗ್ಗುತ್ತಿವೆ.
ಉಚ್ಚಿಲ ಬೀಚ್‌ನಿಂದ ಸೋಮೇಶ್ವರ ಸಂಪರ್ಕಿಸುವ ಪೆರಿಬೈಲು ಬಳಿ ಸಮುದ್ರ ಕೊರೆತದಿಂದ ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ. ಸಮುದ್ರ ಮತ್ತು ರಸ್ತೆ ನಡುವೆ ಇದ್ದ ಮರಗಳು ಧರಾಶಾಯಿಯಾಗಿವೆ. ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿದೆ. ಶನಿವಾರ ಮೆಸ್ಕಾಂ ಇಲಾಖೆ ಬೀಚ್ ರಸ್ತೆಯ ಪೆರಿಬೈಲ್ ಬಳಿ ವಿದ್ಯುತ್ ಕಂಬಗಳನ್ನು ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಿದ್ದು, ಕಂಬಗಳಿಗೆ ಅಡ್ಡಿಯಾಗುವ ಗಾಳಿಮರಗಳನ್ನು ಕಡಿದಿದ್ದು, ಮಧ್ಯಾಹ್ನ ವರೆಗೆ ಬೀಚ್ ರಸ್ತೆಯನ್ನು ಮುಚ್ಚಲಾಗಿತ್ತು.
ಮನೆಗಳಿಗೆ ನೀರು
ಕೈಕೋ ಮತ್ತು ಕಿಲೆರಿಯಾ ನಗರದಲ್ಲಿ ಶನಿವಾರ ಸಮುದ್ರದ ಅಲೆಗಳು ಬಿರುಸುಗೊಂಡು 25ಕ್ಕೂ ಹೆಚ್ಚು ಮನೆಗಳು ನೀರಿನಿಂದ ಆವೃತವಾಗಿವೆ. ಸ್ಥಳೀಯ ಕೌನ್ಸಿಲರ್ ಮಹಮ್ಮದ್ ಮುಕ್ಕಚ್ಚೇರಿ ಮತ್ತು ಉಳ್ಳಾಲ ನಗರಸಭಾ ಪೌರಾಯುಕ್ತ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳದ ಸಿಬಂದಿ ನೀರನ್ನು ಪಂಪ್ ಮೂಲಕ ತೆರವುಗೊಳಿಸಿದರು. ಉಳ್ಳಾಲದಾದ್ಯಂತ ಸಮುದ್ರದ ಅಲೆಗಳು ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಅಪ್ಪಳಿಸಿದ್ದು, ಓಖೀ ಚಂಡಮಾರುತ ಸಂದರ್ಭದಲ್ಲಿ ಶೇ. 75 ಕುಸಿದಿದ್ದ ಆಲಿಯಬ್ಬ ಅವರ ಮನೆ ಶನಿವಾರ ಸಂಪೂರ್ಣ ಕುಸಿತಗೊಂಡಿದೆ. ಮೊಗವೀರಪಟ್ಣ ಬೀಚ್‌ನಲ್ಲಿ ಸಮುದ್ರದ ಕೊರೆತದಿಂದ ಬಹಳಷ್ಟು ಹಾನಿಯಾಗಿದೆ.ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಾಣಿ ಆಳ್ವ, ಕೌನ್ಸಿಲರ್ ಮಹಮ್ಮದ್ ಮುಕ್ಕಚ್ಚೇರಿ, ಮೆಸ್ಕಾಂ ಎಡಬ್ಲೂ ದಯಾನಂದ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾ.ಪಂ. ಸದಸ್ಯ ರವಿಶಂಕರ್, ಸ್ಥಳಿಯಾಡಳಿತ ಸಂಸ್ಥೆಗಳ ಅಧಿಕಾರಿಗಳು ಭೇಟಿ ನೀಡಿದರು.
1.7 ಮೀ. ಎತ್ತರದ ಅಲೆಗಳ ಸಾಧ್ಯತೆ
ಕಂದಾಯ ಇಲಾಖೆಯ ಪ್ರೊಬೆಷನರಿ ಸಹಾಯಕ ಆಯುಕ್ತ ಸಂತೋಷ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾಡಳಿತದ ಸೂಚನೆಯಂತೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ 1.7 ಮೀ. ಎತ್ತರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಎರಡು ಹಿಟಾಚಿಗಳನ್ನು ಸ್ಥಳದಲ್ಲೇ ಕಾರ್ಯಾಚರಣೆಗೆ ಇರಿಸಲಾಗಿದೆ. ಮನೆಗಳಿರುವ ಪ್ರದೇಶಗಳಲ್ಲಿ ಕಲ್ಲುಗಳನ್ನು ಹಾಕಲಾಗಿದೆ. ಒಂದು ಹಂತದ ಕಾಮಗಾರಿ ಮುಗಿದ ತತ್‌ಕ್ಷಣವೇ ಎಂಜಿನಿಯರುಗಳ ಸಲೆಹಯಂತೆ ರಸ್ತೆಯ ಭಾಗದಲ್ಲಿಯೂ ಕಲ್ಲುಗಳನ್ನು ಹಾಕುವ ಕೆಲಸ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.