ಒಲ್ಲದ ಮನಸ್ಸಿನಿಂದಲೇ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರ್‌ 


Team Udayavani, May 3, 2018, 10:32 AM IST

3-May-3.jpg

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ದ್ವಿತೀಯ ಪಿಯುಸಿ ತರಗತಿಗಳು ಪುನರಾರಂಭವಾಗುತ್ತವೆ ಎಂಬ ಬಗ್ಗೆ ಬೇಸಗೆ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಇಲಾಖೆಯು ದಿಢೀರ್‌ ಶಾಕ್‌ ನೀಡಿತ್ತು. ಅದರಂತೆ, ಬುಧವಾರದಿಂದ ತರಗತಿಗಳು ಪ್ರಾರಂಭಗೊಂಡಿವೆ. ಈ ರೀತಿಯ ಬದಲಾವಣೆಯಿಂದ ಮೊದಲ ದಿನ ಹೇಗಿತ್ತು, ವಿದ್ಯಾರ್ಥಿಗಳು/ಶಿಕ್ಷಕರು ಈ ಬಗ್ಗೆ ಏನಂತಾರೆ? ಈ ಕುರಿತು ನಗರದ ನಾಲ್ಕು ಕಾಲೇಜುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ- ಧನ್ಯಾ ಬಾಳೆಕಜೆ

ಮಹಾನಗರ: ಒಂದೆಡೆ ಚುನಾವಣ ಕರ್ತವ್ಯ, ಇನ್ನೊಂದೆಡೆ ಎಸೆಸೆಲ್ಸಿ ಫಲಿತಾಂಶ ಪ್ರಕಟವಾದಂತೆಯೇ ಪ್ರವೇಶಾತಿ ಪ್ರಕ್ರಿಯೆ ನಿರ್ವಹಣೆಯ ಜವಾಬ್ದಾರಿ. ಈ ನಡುವೆ ದ್ವಿತೀಯ ಪಿಯುಸಿ ತರಗತಿ ನಡೆಸಬೇಕಾದ ಅನಿವಾರ್ಯತೆ…

ಉಪನ್ಯಾಸಕರಿಗೆ ವಿಪರೀತ ಕೆಲಸದ ಒತ್ತಡದ ಚಿಂತೆಯಾದರೆ, ರಜೆ ಕಡಿತದಿಂದ ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಅಸಮಾಧಾನ. ಒಲ್ಲದ ಮನಸ್ಸಿನಿಂದಲೇ ಕಾಲೇಜಿಗೆ ಬಂದ ವಿದ್ಯಾರ್ಥಿ-ಉಪನ್ಯಾಸಕರು. ಮೇ ತಿಂಗಳ ರಜೆಯನ್ನು ಕಡಿತಗೊಳಿಸಿ ಮೇ 2ರಂದೇ ತರಗತಿ ಪುನರಾರಂಭಿಸಬೇಕೆಂಬ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಕಾಲೇಜಿಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪ್ರತಿಕ್ರಿಯಿಸಿದ ರೀತಿಯಿದು.

ಪಾಠ ಮಾಡುವ ಮನಸ್ಸಿಲ್ಲ
ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಹಜವಾಗಿಯೇ ಮೇ ತಿಂಗಳಿನಲ್ಲಿ ರಜೆಯ ಖುಷಿಯಲ್ಲಿರುತ್ತಾರೆ. ಈ ಸಂದರ್ಭ ಫ್ಯಾಮಿಲಿ, ಪ್ರವಾಸ ಕಾರ್ಯಕ್ರಮಗಳು ಸಾಮಾನ್ಯ. ಆದರೆ ಈಗ ಇಡೀ ಶಿಕ್ಷಕ ವರ್ಗಕ್ಕೆ ಅಸಮಾಧಾನ ಉಂಟಾಗಿದೆ. ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ ಇದೆ ಎನ್ನುತ್ತಾರೆ ನಗರದ ಪಪೂ ಕಾಲೇಜೊಂದರ ಉಪನ್ಯಾಸಕ.

ಶುಲ್ಕ ಪಾವತಿಗೂ ತೊಂದರೆ
ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆಯಿದ್ದರೂ ಆರಂಭದಲ್ಲೇ ತಿಳಿಸಬೇಕಿತ್ತು. ಆದರೆ ಅಂತಿಮ ಹಂತದಲ್ಲಿ ತಿಳಿಸಿದರೆ ಎಲ್ಲರಿಗೂ ತೊಂದರೆ ಯಾಗುತ್ತದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಸೌಲಭ್ಯ ತತ್‌ಕ್ಷಣಕ್ಕೆ ಸಿಗುವುದಿಲ್ಲ. ಬಹುತೇಕ ಬಡ ವಿದ್ಯಾರ್ಥಿಗಳು ಎರಡು ತಿಂಗಳ ರಜೆಯಲ್ಲಿ ದುಡಿಯಲು ತೆರಳಿ ಕಾಲೇಜು ಶುಲ್ಕಕ್ಕೆ ಹಣ ಸಂಗ್ರಹಿಸುತ್ತಾರೆ. ಅವಧಿಗೆ ಮುನ್ನವೇ ಕಾಲೇಜು ಆರಂಭದಿಂದ ಅವರ ಶುಲ್ಕ ಪಾವತಿಗೂ ತೊಂದರೆಯಾಗಿದೆ ಎನ್ನುತ್ತಾರೆ ಉಪನ್ಯಾಸಕರು.

ಸಂದೇಶ ಕಳಿಸಿದರು
ಮೇ 2ರಂದು ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಇಲಾಖೆ ನೀಡಿದ ಸೂಚನೆಯನ್ನು ಎಲ್ಲ ಕಾಲೇಜು ಪ್ರಮುಖರು ಸೂಕ್ತ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸಿದ್ದಾರೆ. ಇಲಾಖೆ ಸುತ್ತೋಲೆ ಲಭ್ಯವಾದ ಅತ್ಯಲ್ಪ ಸಮಯದಲ್ಲೇ ಎಲ್ಲ ವಿದ್ಯಾರ್ಥಿಗಳಿಗೆ ಸಂದೇಶ ರವಾನಿಸಿ ಕಾಲೇಜು ಪುನರಾರಂಭದ ಬಗ್ಗೆ ಮಾಹಿತಿ ನೀಡಲಾಗಿದೆ.

ಹಾಜರಾತಿ ಪಟ್ಟಿ ಕಳುಹಿಸಿ!
ರಜೆ ಕಡಿತಗೊಳಿಸಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾಲೇಜಿಗೆ ಹಾಜರಾಗುತ್ತಾರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಬುಧವಾರ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಹಾಜರಾಗದ ಉಪನ್ಯಾಸಕರ ಹೆಸರುಗಳನ್ನು ಕಳುಹಿಸಲು ಎಲ್ಲ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಮತ್ತು ಅನುದಾನಿತ ಕಾಲೇಜುಗಳ ಬಹುತೇಕ ಶಿಕ್ಷಕರಿಗೆ ಕಡ್ಡಾಯವಾಗಿ ಚುನಾವಣಾ ಕರ್ತವ್ಯಕ್ಕೆ ತೆರಳುವಂತೆ ಸೂಚಿಸಲಾಗಿದೆ. ಅಲ್ಲದೆ ಮುಂದಿನ ಒಂದು ವಾರದೊಳಗೆ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳು ನಿಚ್ಚಳವಾಗಿದ್ದು, ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಎಲ್ಲ ಕೆಲಸಗಳ ಹೊಣೆ ಶಿಕ್ಷಕರ ಮೇಲಿದೆ. ಚುನಾವಣಾ ಕರ್ತವ್ಯ, ಪ್ರವೇಶಾತಿ ಪ್ರಕ್ರಿಯೆ ನಿರ್ವಹಣೆಯ ಜತೆಗೆ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳಬೇಕಾದ ಹೆಚ್ಚುವರಿ ಕೆಲಸವೂ ಈಗ ಉಪನ್ಯಾಸಕರ ಮೇಲಿದೆ. ಚುನಾವಣಾ ಕರ್ತವ್ಯಕ್ಕೆ ರವಿವಾರವೂ ತೆರಳಬೇಕಾಗಿರುವುದರಿಂದ ಸಮಯ ಹೊಂದಿಸಿಕೊಳ್ಳುವುದೇ ಉಪನ್ಯಾಸಕರಿಗೆ ಸಮಸ್ಯೆಯಾಗಿದೆ.

ಈ ಹಿಂದೆ ಮೇ 20ರಂದು ತರಗತಿಗಳನ್ನು ಆರಂಭಿಸುವ ಬಗ್ಗೆ ಸುತ್ತೋಲೆ ಕಳುಹಿಸಲಾಗಿತ್ತು. ಆದರೆ ಈಗ ಮೇ 2ರಂದೇ ಆರಂಭಿಸಲು ಇಲಾಖೆ ಸೂಚಿಸಿದೆ. ಚುನಾವಣೆ ಮುಗಿದ ಬಳಿಕವೇ ತರಗತಿ ಆರಂಭ ಮಾಡುತ್ತಿದ್ದರೆ ಒತ್ತಡ ಕಡಿಮೆಯಾಗುತ್ತಿತ್ತು ಎನ್ನುತ್ತಾರೆ ಜಿಲ್ಲಾ ಪಪೂ ಕಾಲೇಜು ಪ್ರಾಂಶುಪಾಲರ ಸಂಘದ ಪದಾಧಿಕಾರಿ ರತ್ನಾಕರ ಬನ್ನಾಡಿ.

ವಿದ್ಯಾರ್ಥಿಗಳ ಆಕ್ರೋಶ
ರಜೆ ಕಡಿತಗೊಳಿಸಿ ತರಗತಿ ಪುನಾರಂಭಿಸಲು ಸೂಚಿಸಿದ ಪಪೂ ಶಿಕ್ಷಣ ಇಲಾಖೆಯ ಧೋರಣೆಯನ್ನು ವಿರೋಧಿಸಿ ನಗರದ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಇಲಾಖೆ ಸೂಚನೆಯನ್ನು ಪಾಲಿಸಬೇಕು ಎಂಬ ಹಿನ್ನೆಲೆಯಲ್ಲಿ ಉಪನ್ಯಾಸಕರೇ ವಿದ್ಯಾರ್ಥಿಗಳನ್ನು ಮನವೊಲಿಸಿದರು.

ನಿರ್ದೇಶನಕ್ಕೆ ಬದ್ಧ
ಪ.ಪೂ. ಶಿಕ್ಷಣ ಇಲಾಖೆಯು ಏಕಾಏಕಿ ತೆಗೆದುಕೊಂಡ ನಿರ್ಧಾರಕ್ಕೆ ಇಡೀ ಪಪೂ ಉಪನ್ಯಾಸಕ ಮತ್ತು ಪ್ರಾಂಶುಪಾಲ ವರ್ಗಕ್ಕೆ ಬೇಸರವಾಗಿದೆ. ಇದು ಸಮಂಜಸ ಕ್ರಮವಲ್ಲ. ಆದರೆ ಇಲಾಖೆ ನಿರ್ದೇಶನವನ್ನು ಉಲ್ಲಂಘಿಸುವಂತಿಲ್ಲ. ಎಲ್ಲ ಕಾಲೇಜು ಪ್ರಾಂಶುಪಾಲರೂ ಇಲಾಖೆ ನೀಡಿದ ಸೂಚನೆಗೆ ಬದ್ಧರಾಗಿದ್ದಾರೆ. 
– ಗಂಗಾಧರ ಆಳ್ವ,
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ,
ಪ.ಪೂ. ಪ್ರಾಂಶುಪಾಲರ ಸಂಘ

ಟಾಪ್ ನ್ಯೂಸ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.