ಜಿಲ್ಲೆಯ ಏಳು ವಿದ್ಯಾರ್ಥಿಗಳಿಗೆ ಟಾಪ್ ಟೆನ್‌ನಲ್ಲಿ ಸ್ಥಾನ
ದ್ವಿತೀಯ ಪಿಯುಸಿ ಫಲಿತಾಂಶ:ದ್ವಿತೀಯ ಸ್ಥಾನಕ್ಕಿಳಿದ ದ.ಕ.ಜಿಲ್ಲೆ
Team Udayavani, Apr 16, 2019, 6:00 AM IST
ನಗರದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಿದರು.
ಮಹಾನಗರ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕಳೆದ ವರ್ಷ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ಶೇ. 90.91 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಶೇಕಡಾವಾರು ಪ್ರಮಾಣದಲ್ಲಿಯೂ ಕಳೆದ ವರ್ಷಕ್ಕಿಂತ (ಶೇ. 91.49 ) ಈ ಬಾರಿ ಇಳಿಕೆಯಾಗಿದೆ.
ವಾಣಿಜ್ಯ ವಿಭಾಗದಲ್ಲಿ ಮೊದಲ ಮೂರು ಸ್ಥಾನಗಳು ದ.ಕ. ಜಿಲ್ಲೆಯ ಪಾಲಾಗಿದ್ದು, ಮೂಡುಬಿದಿರೆ ಆಳ್ವಾಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಓಲ್ವಿಟಾ ಅನ್ಸಿಲ್ಲಾ ಡಿ’ಸೋಜಾ, ಅಳಿಕೆ ಸತ್ಯಸಾಯಿ ಲೋಕಸೇವಾ ಪ.ಪೂ. ಕಾಲೇಜಿನ ಶ್ರೀಕೃಷ್ಣ ಶರ್ಮ ಕೆ. 596 ಅಂಕ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದರೆ, ಕೊಡಿಯಾಲಬೈಲ್ ಕೆನರಾ ಪ.ಪೂ. ಕಾಲೇಜು ವಿದ್ಯಾರ್ಥಿನಿ ಶ್ರೀಯಾ ಶೆಣೈ 595 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾರೆ. ಪುತ್ತೂರು ಸೈಂಟ್ ಫಿಲೋಮಿನ ಪ.ಪೂ. ಕಾಲೇಜಿನ ಸ್ವಸ್ತಿಕ್ ಪಿ. 594 ಅಂಕ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಜಾಗೃತಿ ಕೆ. ನಾಯಕ್ 592 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದರೆ, ಕೊಡಿಯಾಲಬೈಲ್ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಾದ ಪ್ರಥಮ್ ಎನ್. ಮತ್ತು ಶಮಿತಾಕುಮಾರಿ ಎಸ್. 591 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾರೆ.
ಶೇಕಡಾವಾರು
ಫಲಿತಾಂಶದಲ್ಲಿ ಇಳಿಕೆ
ದ.ಕ. ಜಿಲ್ಲೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 19,153 ಮಂದಿ ವಿದ್ಯಾರ್ಥಿಗಳು ಮತ್ತು 18,916 ವಿದ್ಯಾರ್ಥಿನಿಯರು ಸೇರಿ ಒಟ್ಟು 38,069 ಮಂದಿ ಪರೀಕ್ಷೆ ಬರೆದಿದ್ದು, 33,088 ಮಂದಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ 34,650 ಮಂದಿ ಮೊದಲ ಬಾರಿ ಪರೀಕ್ಷೆ ಬರೆದವರು ಹಾಗೂ 2,334 ಮಂದಿ ಖಾಸಗಿ, 1085 ಮಂದಿ ಪುನರಾವರ್ತಿತ ಅಭ್ಯರ್ಥಿಗಳಾಗಿದ್ದಾರೆ. ಉತ್ತೀರ್ಣರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 27,750 ಮಂದಿ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದವರಾದರೆ, 5,338 ಮಂದಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು. 2017ರಲ್ಲಿ ಜಿಲ್ಲೆಯ ಪಿಯುಸಿ ಫಲಿತಾಂಶ ಶೇ. 89.92 ಆಗಿದ್ದರೆ, 2018ರಲ್ಲಿ ಶೇ. 91.49 ಫಲಿತಾಂಶ ಪಡೆದಿತ್ತು. ಆದರೆ ಈ ಬಾರಿ ಶೇ. 90.91 ಫಲಿತಾಂಶ ಜಿಲ್ಲೆಗೆ ಬಂದಿದ್ದು, ಶೇಖಡಾವಾರು ಫಲಿತಾಂಶದಲ್ಲಿ ಇಳಿಕೆಯಾಗಿದೆ.
ನಗರ/ಗ್ರಾಮಾಂತರ
ನಗರ ಪ್ರದೇಶದ 25,408 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, 22,736 ಮಂದಿ ಪಾಸಾಗಿ ಶೇ. 89.48 ಫಲಿತಾಂಶ ಬಂದಿದೆ. ಗ್ರಾಮಾಂತರ ಪ್ರದೇಶದ 12,661 ಮಂದಿಯ ಪೈಕಿ 10,352 ಮಂದಿ ಉತ್ತೀರ್ಣರಾಗಿ ಶೇ. 81.76 ಫಲಿತಾಂಶ ಬಂದಿದೆ.
ಹುಡುಗಿಯರೇ ಮೇಲುಗೈ
ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 18,916 ಮಂದಿ ವಿದ್ಯಾರ್ಥಿನಿಯರ ಪೈಕಿ 17,140 ಮಂದಿ ಉತ್ತೀರ್ಣರಾಗಿದ್ದಾರೆ. 19,153 ಮಂದಿ ಹುಡುಗರು ಹಾಜರಾಗಿದ್ದು, 15,948 ಮಂದಿ ಪಾಸಾಗಿದ್ದಾರೆ.
ವಿಭಾಗವಾರು ಫಲಿತಾಂಶ
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,831 ವಿದ್ಯಾರ್ಥಿಗಳ ಪೈಕಿ 3,762 ಮಂದಿ ಉತ್ತೀರ್ಣರಾಗಿ ಶೇ. 77.87 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 16,526 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ 14,347 ಮಂದಿ ಉತ್ತೀರ್ಣರಾಗಿ ಶೇ. 86.81 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 16,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14,979 ಮಂದಿ ತೇರ್ಗಡೆ ಹೊಂದಿ ಶೇ. 89.63 ಫಲಿತಾಂಶ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.