ಉಳ್ಳಾಲ: ಚರಂಡಿಯಲ್ಲಿ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ
Team Udayavani, Dec 31, 2022, 12:02 AM IST
ಉಳ್ಳಾಲ :ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಜಂಕ್ಷನ್ ಬಳಿಯ ಮಳೆನೀರು ಹರಿಯುವ ಚರಂಡಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್ ಶೆಟ್ಟಿ ಸಂಜೆ ವೇಳೆಗೆ ಹೊಟೇಲ್‌ನಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದರು.
ದೇರಳಕಟ್ಟೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಶೆಟ್ಟಿ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದು, ತಲೆ ಭಾಗಕ್ಕೆ ಗಾಯಗಳಾಗಿವೆ.
ಅಪಘಾತದಲ್ಲಿ ಮೃತಪಟ್ಟರೋ ಅಥವಾ ಸಾವಿಗೆ ಯಾವುದೇ ಬೇರೆ ಕಾರಣದ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.