Billava ಸಮಾವೇಶಗಳಿಂದ ಸ್ವಾಭಿಮಾನ ವೃದ್ಧಿ: ಯು.ಟಿ. ಖಾದರ್
ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ
Team Udayavani, Feb 26, 2024, 12:29 AM IST
ಉಳ್ಳಾಲ: ಬಿಲ್ಲವ ಸಮಾಜದ ಹಿರಿಯರು ಹಾಕಿಕೊಟ್ಟ ಸಂಸ್ಕೃತಿ ಪರಂಪರೆಯನ್ನು ಉಳಿಸಿಕೊಂಡು,ಉಳ್ಳಾಲ ತಾಲೂಕಿನಲ್ಲಿ ಹಮ್ಮಿಕೊಂಡಿರುವ ಈ ಐತಿಹಾಸಿಕ ಸಮಾವೇಶದ ನಿರ್ಣಯಗಳು ಭವಿಷ್ಯದಲ್ಲಿ ಬಿಲ್ಲವ ಸಮಾಜದ ಸ್ವಾಭಿಮಾನ ಹಾಗೂ ಗೌರವವನ್ನು ಇನ್ನಷ್ಟು ವೃದ್ಧಿಸಲಿವೆ. ಯುವ ಪೀಳಿಗೆಗೆ ಇದೊಂದು ದೊಡ್ಡ ಕೊಡುಗೆ ಆಗಲಿದೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಕೊಲ್ಯ ಸೋಮೇಶ್ವರದ ಆಶ್ರಯದಲ್ಲಿ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ಸಮಿತಿಯ ಸಹಭಾಗಿತ್ವದಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯ ಬಿಲ್ಲವ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೊಲ್ಯ ಬಿಲ್ಲವಸಮಾಜ ಸಂಘದ ಆವರಣದಲ್ಲಿ ನಡೆದ ಉಳ್ಳಾಲ ತಾಲೂಕು ಬಿಲ್ಲವರ ಸಮಾ ವೇಶದಲ್ಲಿ ಅವರು ಮಾತನಾಡಿದರು.
ಸಮಾವೇಶದ ನಿರ್ಣಯದೊಂದಿಗೆ ಉಳ್ಳಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಲ್ಲವ ಸಮುದಾಯ ಶಿಕ್ಷಣ ಸಂಸ್ಥೆ ಸ್ಥಾಪನೆಯ ನಿರ್ಣ ಯ ಕೈಗೊಳ್ಳಬೇಕು ಇದಕ್ಕೆ ಬೇಕಾದ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದರು.
ಶಿಕ್ಷಣದಿಂದ ಸ್ಥಾನಮಾನ
ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಪ್ರಾಮಾಣಿಕತೆ, ಸ್ವಾಮಿನಿಷ್ಠೆಗೆ ಹೆಸರೇ ಬಿಲ್ಲವ ಸಮಾಜ. ಅನ್ಯರಿಗೋಸ್ಕರ ಪ್ರಾಣತ್ಯಾಗ ಮಾಡಿದ ಪರಂಪರೆಯಿರುವ ಈ ಸಮಾಜಕ್ಕೆ ಸ್ಥಾನಮಾನ ಸಿಗಬೇಕಾದರೆ ಕಟ್ಟಕಡೆಯ ವ್ಯಕ್ತಿ ಶಿಕ್ಷಣ ಪಡೆಯುವಂತಾಗಬೇಕು ಎಂದರು.
ಅಖೀಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲು, ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಹರೀಶ್ ಕುಮಾರ್, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಕರ್ನಾಟಕ ರಾಜ್ಯ ಆರ್ಯ ಈಡಿಗ ಸಮಾಜ ಸೇವಾ ಸಂಘ ಅಧ್ಯಕ್ಷ ತಿಮ್ಮೇಗೌಡ, ಮಾಜಿ ಸಚಿವ ವಿನಯಕುಮಾರ ಸೊರಕೆ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಮಾರ್ ಕುಂಪಲ, ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಅಧ್ಯಕ್ಷ ಚಿತ್ತರಂಜನ್ ಗರೋಡಿ, ಮೂಲ್ಕಿ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್., ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕುದ್ರೋಳಿ ವಿಶ್ವಮಹಿಳಾ ಸಂಘದ ಅಧ್ಯಕ್ಷೆ ಊರ್ಮಿಳ ರಮೇಶ್, ಲಂಡನ್‌ನ ಕಾರ್ಕಳ ನಾರಾಯಣ ಕುಕ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷ ಹರೀಶ್ ಪೂಜಾರಿ, ತುಳು ಚಿತ್ರನಟ ಭೋಜರಾಜ್ ವಾಮಂಜೂರು, ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶದ ಅಧ್ಯಕ್ಷ ಎ.ಜೆ. ಶೇಖರ್, ಗೌರವಾಧ್ಯಕ್ಷ ಗೋಪಾಲಕೃಷ್ಣ ಎಸ್. ಪೂಜಾರಿ ಉಪಸ್ಥಿತರಿದ್ದರು.
ಸಮ್ಮಾನ
ಪೊಲೀಸ್ ಸೇವೆಯಲ್ಲಿ ರಾಷ್ಟ್ರಪತಿ ಯವರಿಂದ ಶ್ಲಾಘನೀಯ ಸೇವಾ ಪದಕ ಪುರಸ್ಕೃತ ರಾಮ ಪೂಜಾರಿ, ಅಖೀಲ ಭಾರತ ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಚಿನ್ನದ ಪದಕ ವಿಜೇತ ಯಶ್‌ಪಾಲ್ ಬಗಂಬಿಲ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಇರಾ ನೇಮು ಪೂಜಾರಿ, ಪ್ರಮೋದ್ ಉಳ್ಳಾಲ, ಬಿಲ್ಲವ ಭವನದ ನೀಲನಕ್ಷೆ ವಿನ್ಯಾಸ ಮಾಡಿದ ಧರ್ಮರಾಜ್ ಅಮ್ಮುಂಜೆ, ನಿಶಿತ್ ಡಿ. ಅಮ್ಮುಂಜೆ ಅವರನ್ನು ಗೌರವಿಸಲಾಯಿತು.
ಕೊಲ್ಯ ಸೋಮೇಶ್ವರ ಬಿಲ್ಲವ ಸೇವಾ ಸಮಾಜ ಟ್ರಸ್ಟ್‌ನ ಅಧ್ಯಕ್ಷ ವೇಣುಗೋಪಾಲ್ ಸ್ವಾಗತಿಸಿದರು. ಕೊಲ್ಯ ಬಿಲ್ಲವ ಸೇವಾ ಸಮಾಜ ಸಮಗದ ಅದ್ಯಕ್ಷ ಹರೀಶ್ ಮುಂಡೋಳಿ ನಿರ್ಣಯ ಮಂಡಿಸಿದರು. ದಿನೇಶ್ ಸುವರ್ಣ ರಾಯಿ ಮತ್ತು ಪ್ರಜ್ಞಾ ಓಡಿನ್ನಾಳ ಕಾರ್ಯಕ್ರಮ ನಿರ್ವಹಿಸಿದರು. ಯುವ ವಾಹಿನಿ ಕೊಲ್ಯ ಘಟಕ ಅಧ್ಯಕ್ಷ ಲತೀಶ್ ಎಂ. ಸಂಕೊಳಿಗೆ ವಂದಿಸಿದರು.
ಸಮಾವೇಶದ ನಿರ್ಣಯಗಳು
-ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ನಾಮಕರಣ ಮಾಡಬೇಕು
– ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ ಅನುದಾನ ನೀಡದೆ ತಾರತಮ್ಯ ಆಗಿದ್ದು, ಇದನ್ನು ಸರಿಪಡಿಸಬೇಕು.
-ಮಂಗಳೂರು ವಿ.ವಿ.ಯ ನಾರಾಯಣ ಗುರು ಅಧ್ಯಯನ ಪೀಠದ ಕಟ್ಟಡ ಪೂರ್ಣಗೊಳಿಸಲು ಆದ್ಯತೆ ಮತ್ತು ಅನುದಾನ ಬಿಡುಗಡೆ ಮಾಡಬೇಕು.
-ವಿವಿಧ ಅಭಿವೃದ್ಧಿ ನಿಗಮಗಳಲ್ಲಿ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಕಲ್ಪಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.