ಕಲಬೆರಕೆ ತುಪ್ಪ ಮಾರಾಟ: ಓರ್ವ ವಶಕ್ಕೆ
ಜನರ ಸಂಶಯಕ್ಕೆ ಕಾರಣವಾದ ಅಗ್ಗದ ಬೆಲೆ
Team Udayavani, Jul 23, 2019, 9:03 AM IST
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಕಲಬೆರಕೆ ತುಪ್ಪ ಮಾರಾಟ ಮಾಡಿ ಜನರನ್ನು ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಾರ್ವಜನಿಕರು, ಓರ್ವನನ್ನು ವಿಟ್ಲ ಪೊಲೀಸರ ವಶಕ್ಕೆ ನೀಡಿದ ಘಟನೆ ಸೋಮವಾರ ನಡೆದಿದೆ.
ಬಳ್ಳಾರಿ ಮೂಲದ ಇಬ್ಬರು ವಿಟ್ಲ ಸಮೀಪದ ಮಾಣಿ, ಪೆರಾಜೆ ಮತ್ತಿತರ ಕಡೆಗಳಲ್ಲಿ ಮನೆ ಮನೆಗೆ ಬಂದು ತುಪ್ಪ ಮಾರುತ್ತಿದ್ದರು. ಅರ್ಧ ಲೀಟರ್‌ಗೆ 250 ಹೇಳಿ ಚರ್ಚೆ ಬಳಿಕ ಕೇವಲ 100 ರೂಪಾಯಿಗೆ ನೀಡುತ್ತಿದ್ದರು. ಅರ್ಧ ಲೀಟರ್ ತುಪ್ಪವನ್ನು 100 ರೂಪಾಯಿಗೆ ಹೇಗೆ ಮಾರಾಟ ಮಾಡುತ್ತಾರೆ ಎಂದು ಸಂಶಯ ಬಂದು, ಜೋಗಿಬೆಟ್ಟಿನ ಯುವಕರು ಈತನ ಕೈಯಿಂದ ತುಪ್ಪವನ್ನು ಪಡೆದು ಪರೀಕ್ಷಿಸಿದರು. ಆಗ ಡಾಲ್ಡಕ್ಕೆ ಕೆಮಿಕಲ್ ಬಳಸಿ ತುಪ್ಪ ತಯಾರಿಸಿ ಮಾರುತ್ತಿರುವ ವಿಚಾರ ಸ್ಪಷ್ಟವಾಯಿತು. ಇದರ ಹಿಂದೆ ದೊಡ್ಡ ಜಾಲವೇ ಇದೆ ಎನ್ನುವ ವಿಚಾರವೂ ಬೆಳಕಿಗೆ ಬಂದಿದೆ.
ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದವನು ತನ್ನನ್ನು ಬಳ್ಳಾರಿ ಮೂಲದ ಮಣಿಕಂಠನೆಂದು ಹೇಳಿಕೊಂಡಿದ್ದಾನೆ. ಈತನ ಜತೆಗೆ ಇನ್ನೊಬ್ಬನೂ ಬಂದಿದ್ದು, ಅವನು ಕಡೇಶಿವಾಲಯದ ಕಡೆಗೆ ತುಪ್ಪು ಮಾರಲು ತೆರಳಿದ್ದ ಎಂದು ತಿಳಿದು ಬಂದಿದೆ. ವಶಕ್ಕೆ ಪಡೆದಿರುವಾತನನ್ನು ವಿಟ್ಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.