ಯಕ್ಷರಂಗದ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ
Team Udayavani, Jul 13, 2021, 11:29 AM IST
ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ.
ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು.
ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು ನಂತರ ನಾಟ್ಯಾಭ್ಯಾಸವನ್ನು ಕುಂಬಳೆ ಕಣ್ಣನ್ ಅವರಿಂದ, ಬಣ್ಣಗಾರಿಕೆಯನ್ನು ಬಣ್ಣದ ಕುಟ್ಯಪ್ಪರಿಂದ ಕಲಿತರು.
ಇದನ್ನೂ ಓದಿ:ನಂದಿಗಿರಿಧಾಮದಲ್ಲಿ ವಾರಂತ್ಯದಲ್ಲಿ ಸಾರ್ವಜನಿಕರ/ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ!
ತನ್ನ 13ನೇ ವಯಸ್ಸಿನಲ್ಲೇ ಇರಾ ಸೋಮನಾಥೇಶ್ವರ ಮೇಳದಲ್ಲಿ ಯಕ್ಷಗಾನ ತಿರುಗಾಟ ಆರಂಭಿಸಿದ ಶೀನಪ್ಪ ರೈ ಅವರು, ನಂತರ ವೇಣೂರು, ಇರುವೈಲು, ಸೌಕೂರು, ಚೌಡೇಶ್ವರಿ ಮೇಳ, ಕಟೀಲು ಮೇಳ, ಹೊಸನಗರ ಎಡನೀರು ಹಾಗೂ ಹನುಮಗಿರಿ ಮೇಳದಲ್ಲಿ ಕಲಾ ವ್ಯವಸಾಯವನ್ನು ಮಾಡಿ ಕಳೆದ ಕೆಲ ವರ್ಷಗಳ ಹಿಂದೆ ತಿರುಗಾಟ ನಿಲ್ಲಿಸಿದ್ದರು.
ರಾಜ್ಯ ಪ್ರಶಸ್ತಿ, ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಸಂಪಾಜೆ ಶೀನಪ್ಪ ರೈ ಅವರು ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.