ವಿಲೇವಾರಿಗೆ ಪ್ರತ್ಯೇಕ ಮಾರ್ಗಸೂಚಿ: ಖಾದರ್
ಸ್ಥಳೀಯ ಸಂಸ್ಥೆಗಳ ವಾಣಿಜ್ಯ ಮಳಿಗೆ
Team Udayavani, Jul 18, 2019, 5:04 AM IST
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಸ್ವಾಮ್ಯದ ವಾಣಿಜ್ಯ ಮಳಿಗೆಗಳ ಹರಾಜು, ಬಾಡಿಗೆ, ಗುತ್ತಿಗೆ ಅವಧಿ ಸಂಬಂಧಿಸಿ ಮತ್ತು ನಗರ ಪಾಲಿಕೆ ಸಹಿತ ನಗರ ಸ್ಥಳೀಯ ಸಂಸ್ಥೆಗಳ ವಾಣಿಜ್ಯ ಮಳಿಗೆಗಳ ವಿಲೇವಾರಿ ಸಂಬಂಧಿಸಿ ಪ್ರತ್ಯೇಕ ಮಾರ್ಗಸೂಚಿ ಜಾರಿಗೊಳಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ಉಳಿದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ ಎಂದರು.
ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಿ ವಿಲೇವಾರಿ ಮಾಡುವ ಸಂದರ್ಭ ಪತ್ರಿಕಾ ಪ್ರಕಟನೆ ಹೊರಡಿಸಿ ಬಹಿರಂಗ/ಇ-ಹರಾಜು ಮೂಲಕ ವಿಲೇವಾರಿ ಮಾಡಬೇಕು. 12 ವರ್ಷ ಅವಧಿಗೆ ಮಾತ್ರ ಲೀಸ್ ನೀಡಬೇಕು. ವಾಣಿಜ್ಯ ಮಳಿಗೆಯ ನಿರ್ಮಾಣ ವೆಚ್ಚದ ಆಧಾರದ ಮೇಲೆ ಠೇವಣಿ ಮೊತ್ತ ನಿರ್ಧರಿಸಬೇಕು. ಪ್ರತಿ ತಿಂಗಳ ಬಾಡಿಗೆಯನ್ನು ಮುಂದಿನ ತಿಂಗಳ 10ನೇ ತಾರೀಕಿನ ಒಳಗೆ ಪಾವತಿ ಮಾಡದಿದ್ದರೆ ಶೇ.2ರಷ್ಟು ಬಡ್ಡಿ ಸಂಗ್ರಹ ಮೊದಲಾದ ಅಂಶಗಳು ಮಾರ್ಗಸೂಚಿಯಲ್ಲಿವೆ. ಎಲ್ಲ ಮಳಿಗೆಗಳಿಗೆ ಏಕರೂಪದ ಬಾಡಿಗೆ ನಿಗದಿ ಪಡಿಸಿದ ಪರಿಣಾಮ ನೆಲಮಹಡಿಯ ಮಳಿಗೆಗಳು ಮಾತ್ರ ಹರಾಜುಗೊಂಡು, ಮೇಲಿನ ಅಂತಸ್ತುಗಳ ಮಳಿಗೆಗಳು ಬಾಕಿ ಉಳಿದಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಬಾಡಿಗೆ ಮೊತ್ತ ಪರಿಷ್ಕರಿಸಲು ಅವಕಾಶ ನೀಡಲಾಗಿದೆ ಎಂದರು.
ಕರಡು ನಿಯಮಾವಳಿ
ರಾಜ್ಯದಲ್ಲಿ ವಸತಿಗೃಹ, ಹಾಸ್ಟೆಲ್, ಪಿ.ಜಿ.ಗಳಿಗೆ ಸಂಬಂಧಿಸಿ ಕರ್ನಾಟಕ ಬೋರ್ಡಿಂಗ್ ಮತ್ತು ಲಾಡಿjಂಗ್ ಹೌಸ್ ನಿಯಂತ್ರಣ ಕಾನೂನು ರೂಪಿಸಲು ಕರಡು ನಿಯಮಾವಳಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ ಅಕ್ಷೇಪ, ಸಲಹೆ ಸ್ವೀಕರಿಸಿದ ಬಳಿಕ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶವಿದೆ ಎಂದರು.
ವಿಶ್ವಾಸಮತ ಗೆಲುವು: ಖಾದರ್ ವಿಶ್ವಾಸ
ರಾಜ್ಯ ಸರಕಾರ ಸುಭದ್ರವಾಗಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆಲ್ಲುವ ಸಂಪೂರ್ಣ ಭರವಸೆಯಿದೆ. ಸಂವಿಧಾನಬದ್ಧವಾಗಿ ರಚನೆಯಾಗಿರುವ ಮೈತ್ರಿ ಸರಕಾರವನ್ನು ಯಾವುದೇ ಕಾರಣಕ್ಕೂ ಉರುಳಿಸಲು ಸಾಧ್ಯವಿಲ್ಲ ಎಂಬ ಸಂದೇಶ ರಾಜ್ಯದಿಂದ ದೇಶದ ಜನತೆಗೆ ಹೋಗಬೇಕು ಎಂದು ಸಚಿವ ಯು.ಟಿ. ಖಾದರ್ ಇದೇವೇಳೆ ಅಭಿಪ್ರಾಯಪಟ್ಟಿದ್ದಾರೆ.
ಸ್ಥಳೀಯರಿಗೆ ಸುಂಕ ನಿಯಮಬಾಹಿರ
ಸುರತ್ಕಲ್‌ನಲ್ಲಿ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ ಮಾಡದಂತೆ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಸಚಿವಾಲಯವನ್ನು ಕೋರಲಾ ಗಿದ್ದು, ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ಅವರು ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ಮತ್ತು ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದು ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿನಾಯಿತಿ ಒಪ್ಪಂದದಲ್ಲಿದೆ
ಕೇಂದ್ರದ ಯೋಜನೆಗಳ ಜಾರಿ ಸಂದರ್ಭ ರಾಜ್ಯ ಸರಕಾರದ ಜತೆ ಕೆಲವು ವಿನಾಯಿತಿ ಒಪ್ಪಂದ ನಡೆಯುತ್ತದೆ. ಹೆದ್ದಾರಿ ವಿಸ್ತೀರ್ಣ ಸಂದರ್ಭ ಜಾಗ ಕಳೆದುಕೊಂಡವರಿಗೆ, ಸ್ಥಳೀಯರಿಗೆ ವಿನಾಯಿತಿ ನೀಡುವ ಅಂಶವೂ ಅದರಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.