Series Holiday ಹಿನ್ನೆಲೆ: ದೇಗುಲಗಳಲ್ಲಿ ಭಾರೀ ಜನಸ್ತೋಮ
Team Udayavani, Dec 24, 2023, 11:47 PM IST
ಮಂಗಳೂರು/ಉಡುಪಿ: ಸರಣಿ ರಜೆ ಹಿನ್ನೆಲೆಯಲ್ಲಿ ರವಿವಾರ ಕರಾವಳಿಯ ವಿವಿಧ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ, ಸೌತಡ್ಕ ಶ್ರೀ ಮಹಾಗಣಪತಿ, ಉಡುಪಿ ಶ್ರೀಕೃಷ್ಣ ಮಠ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲ ಸೇರಿದಂತೆ ಮಲ್ಪೆ, ಪಣಂಬೂರು ಬೀಚ್‌ಗಳಲ್ಲಿ ಭಾರೀ ಜನಸ್ತೋಮ ಕಂಡು ಬಂದಿದೆ.
ವಿವಿಧ ಕಡೆಗಳಿಗೆ ಆಗಮಿಸಿದ ಪ್ರವಾಸಿಗರು, ಭಕ್ತರು ದೇಗುಲಗಳಿಗೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ
ಸುಬ್ರಹ್ಮಣ್ಯ: ಕುಕ್ಕೆಗೆ ರವಿವಾರ ಭಾರೀ ಸಂಖ್ಯೆಯ ಭಕ್ತರ ದಂಡು ಹರಿದು ಬಂದಿತ್ತು. ಸಾವಿರಾರು ಮಂದಿ ಶ್ರೀ ದೇವರ ದರುಶನ ಪಡದು ಪ್ರಸಾದ ಸ್ವೀಕರಿಸಿದರು.
ಶುಕ್ರವಾರ ರಾತ್ರಿಯಿಂದಲೇ ಭಕ್ತರ ಆಗಮನ ಆರಂಭವಾಗಿತ್ತು. ಶ್ರೀ ದೇವರ ದರುಶನಕ್ಕಾಗಿ ಸ್ಕಂಧ ವಸತಿ ಗೃಹದ ಬಳಿಯಿಂದ ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು. ಸರತಿ ಸಾಲಿನಲ್ಲಿ ಮುನ್ನಡೆಯಲು ದೇಗುಲದ ವತಿಯಿಂದ ನೆರಳಿನ ಚಪ್ಪರದ ವ್ಯವಸ್ಥೆ ಮಾಡಿದುದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲವಾಯಿತು.
ಭಾರೀ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದ್ದುದರಿಂದ ದೇಗುಲದ ಆಡಳಿತ ಮಂಡಳಿ ವಿಶೇಷ ವ್ಯವಸ್ಥೆ ಮಾಡಿತ್ತು. ಷಣ್ಮುಖ ಪ್ರಸಾದ ಭೋಜನ ಶಾಲೆ ಮಾತ್ರವಲ್ಲದೆ ಆದಿಸುಬ್ರಹ್ಮಣ್ಯ ಭೋಜನ ಶಾಲೆಯಲ್ಲಿ ಬಫೆ ಮಾದರಿಯಲ್ಲಿ ಭೋಜನ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಅಧಿಕ ವಾಹನಗಳ ಆಗಮನ ದಿಂದಾಗಿ ಆಗಾಗ್ಗೆ ರಸ್ತೆಯಲ್ಲಿ ವಾಹನ ದಟ್ಟಣೆ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!
Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್!
Kiran Raj: ಸೂಪರ್ ಹೀರೋ ಆಗಲಿದ್ದಾರೆ ಕಿರಣ್ ರಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.