ದಸರಾ, ಸರಣಿ ರಜೆ ಕುಕ್ಕೆ ಕ್ಷೇತ್ರದಲ್ಲಿ ಭಾರೀ ಜನಸ್ತೋಮ
Team Udayavani, Oct 22, 2018, 11:57 AM IST
ಸುಬ್ರಹ್ಮಣ್ಯ: ಕೆಲ ತಿಂಗಳ ಹಿಂದೆ ಅಪಾರ ಮಳೆ ಹಾಗೂ ವಿವಿಧೆಡೆ ಸಂಭವಿಸಿದ ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು. ಪ್ರಸ್ತುತ ಸಹಜ ಸ್ಥಿತಿಗೆ ಮರಳಿದ್ದು, ದಸರಾ ಸರಣಿ ರಜೆ ಹಾಗೂ ಶಿಕ್ಷಣ ಸಂಸ್ಥೆಗಳಿಗೂ ರಜೆ ಹಿನ್ನೆಲೆಯಲ್ಲಿ ಕುಕ್ಕೆಯಲ್ಲಿ ಶನಿವಾರ ಹಾಗೂ ರವಿವಾರ ಭಾರೀ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು.
ಭರ್ತಿಯಾದ ವಸತಿಗೃಹ
ಶುಕ್ರವಾರದಿಂದ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಕ್ಷೇತ್ರದ ಕಡೆಗೆ ಆಗಮಿಸುತ್ತಿರುವ ಕಾರಣ ದೇಗುಲದ ಹಾಗೂ ಖಾಸಗಿ ವಸತಿಗೃಹಗಳು ಭರ್ತಿಯಾಗಿದ್ದವು. ಹಲವರಿಗೆ ತಂಗಲು ಕೊಠಡಿ ಸಮಸ್ಯೆ ಉಂಟಾಯಿತು. ಕೊಠಡಿ ಸಿಗದಿದ್ದಾಗ ಕೆಲವರು ಛತ್ರ, ಅಂಗಡಿ-ಹೊಟೇಲ್‌ಗಳಿಗೆ ತೆರಳಿ ವರಾಂಡದಲ್ಲಿ ಆಶ್ರಯ ಪಡೆದರು.
ಸೇವೆಗಳಿಗೂ ಸರತಿ ಸಾಲು
ಸರ್ಪಸಂಸ್ಕಾರ ಸೇವೆ, ಮಹಾ ಪೂಜೆ, ಶೇಷ ಸೇವೆ, ಪಂಚಾಮೃತ ಅಭಿಷೇಕ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಸಹಿತ ಹಲವು ಸೇವೆಗಳನ್ನು ನೆರವೇರಿಸಿದರು. ಎರಡು ದಿನಗಳು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ, ಹರಕೆ ಸೇವೆ ನೆರವೇರಿಸಿಕೊಂಡರು. ದೇಗುಲದ ಒಳಾಂಗಣ, ಹೊರಾಂಗಣ ಮತ್ತು ಆಸುಪಾಸಿನ ತುಂಬೆಲ್ಲ ಭಕ್ತ ಸಾಗರವೇ ನೆರೆದಿತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು, ಗೃಹರಕ್ಷಕ ಮತ್ತು ಭದ್ರತಾ ಸಿಬಂದಿ ಕಷ್ಟ ಪಡುತ್ತಿದ್ದರು. ಕೆಲವೆಡೆ ನೂಕುನುಗ್ಗಲು ಉಂಟಾಗಿತ್ತು.
ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್
ಕ್ಷೇತ್ರದಲ್ಲಿ ಭಕ್ತರ ಜತೆ ವಾಹನ ದಟ್ಟನೆಯೂ ಅಧಿಕವಿತ್ತು. ಹಲವು ಕಡೆಗಳಲ್ಲಿ ಪಾರ್ಕಿಂಗ್ ಜಾಗ ಕಾಯ್ದಿರಿಸಿದ್ದರೂ ವಾಹನಗಳನ್ನು ಸಿಕ್ಕ ಕಡೆಗಳಲ್ಲಿ ನಿಲ್ಲಿಸಿದ್ದರು. ಅಂಗಡಿ ಮುಂಗಟ್ಟುಗಳ ಮುಂದೆ ಭಕ್ತರು ವಾಹನ ನಿಲ್ಲಿಸಿದ್ದರಿಂದ ಸಮಸ್ಯೆಯಾಯಿತು. ಕುಮಾರಧಾರೆಯಿಂದ ರಥ ಬೀದಿ ತನಕವೂ ವಾಹನಗಳು ಸಾಲುಗಟ್ಟಿ ನಿಂತ ಕಾರಣ ಮುಖ್ಯ ರಸ್ತೆಯಲ್ಲೆ ಟ್ರಾಫಿಕ್ ಸಮಸ್ಯೆ ತಲೆದೋರಿತು.
ಎಲ್ಲೆಲ್ಲೂ ರಶ್
ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಯೂ ಭಕ್ತ ಸಂದಣಿ ಅಧಿಕವಿತ್ತು. ರಸ್ತೆಗಳು ಭರ್ತಿಯಾಗಿದ್ದವು. ಮುಖ್ಯ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಗೋಪುರ ತನಕವೂ ಸರತಿ ಸಾಲು ಇತ್ತು. ಭೋಜನ ಪ್ರಸಾದ ಸ್ವೀಕರಿಸುವಲ್ಲೂ ಸರತಿ ಸಾಲು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.