ಜಿಲ್ಲೆಯಾದ್ಯಂತ ತೀವ್ರ ನಿಗಾ
Team Udayavani, Jul 9, 2017, 1:55 AM IST
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಇನ್ನಷ್ಟು ಬಿಗಿಗೊಳಿಸಲಾಗಿದೆ. ಬಂಟ್ವಾಳ ಸೇರಿದಂತೆ ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ವಾಹನಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಶನಿವಾರ ಪತ್ರಕರ್ತರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಶಾಂತಿ ಕದಡುವವರ ಪಟ್ಟಿ
ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯದಲ್ಲಿ ತೊಡಗಿರುವ 20 ಮಂದಿಯ ಪಟ್ಟಿ ತಯಾರಿಸಲಾಗಿದೆ. ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶಾಂತಿ- ನೆಮ್ಮದಿಗೆ ಭಂಗ ತರುವ ದುಷ್ಕೃತ್ಯಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಸಾವಿರಕ್ಕೂ ಅಧಿಕ ಪೊಲೀಸರು
ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರಿನಿಂದ, ಕೋಲಾರ, ಶಿವಮೊಗ್ಗ ಸೇರಿದಂತೆ ನಾನಾ ಕಡೆಯಿಂದ 1,000ಕ್ಕೂ ಅಧಿಕ ಪೊಲೀಸರು, 20ಕ್ಕೂ ಅಧಿಕ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿದ್ದು, ವ್ಯಾಪಕ ಬಂದೋಬಸ್ತ್ನಲ್ಲಿ ತೊಡಗಿದ್ದಾರೆ ಎಂದು ವಿವರಿಸಿದರು.
ಹಿರಿಯ ಅಧಿಕಾರಿಗಳು ಕೂಡ ಬಂಟ್ವಾಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಈ ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು. ಅನಿವಾರ್ಯವಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಸಿದರು.
ದ.ಕ.: 3,000 ಪೊಲೀಸ್ ನಿಯೋಜನೆ
ಮಂಗಳೂರು: ಶರತ್ ಮಡಿವಾಳ ಸಾವಿನ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ ಮಾತ್ರವಲ್ಲದೆ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿಯೂ ವ್ಯಾಪಕ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ. ಒಟ್ಟು 3,000ಕ್ಕೂ ಮಿಕ್ಕಿ ಪೊಲೀಸರನ್ನು ನಿಯೋಜಿಸಲಾಗಿದೆ.
ಹೊರ ಜಿಲ್ಲೆಗಳಿಂದ ಪೊಲೀಸರನ್ನು ಮತ್ತು ಕೆ.ಎಸ್.ಆರ್.ಪಿ. ಪಡೆಯನ್ನು ಕರೆಸಲಾಗಿದೆ. ಜಿಲ್ಲಾ ಪೊಲೀಸ್‌ನ ನಾಲ್ಕು ತಾಲೂಕುಗಳಲ್ಲಿ ಜಿಲ್ಲೆಯ ಪೊಲೀಸರ ಹೊರತಾಗಿ ಹೆಚ್ಚುವರಿಯಾಗಿ 1,000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸ್ಥಳೀಯ ಪೊಲೀಸರ ಹೊರತಾಗಿ 10 ಕೆಎಸ್‌ಆರ್‌ಪಿ ಪಡೆ ಮತ್ತು ಹೊರ ಜಿಲ್ಲೆಗಳ 300ರಷ್ಟು ಪೊಲೀಸರು ಸೇರಿದಂತೆ ಒಟ್ಟು ಸುಮಾರು 2000 ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.