ಶರತ್‌ ಕೊಲೆ ಪ್ರಕರಣ: ಮತ್ತೆ ಮೂವರ ಬಂಧನ


Team Udayavani, Aug 17, 2017, 7:05 AM IST

arrest.jpg

ಮಂಗಳೂರು: ಆರ್‌.ಎಸ್‌.ಎಸ್‌. ಕಾರ್ಯಕರ್ತ ಶರತ್‌ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬುಧವಾರ ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಐದಕ್ಕೇರಿದೆ. 

ಬೆಳ್ತಂಗಡಿ ತಾಲೂಕು ಪಾರೆಂಕಿಯ ರಿಯಾಜ್‌, ಪುತ್ತೂರು ತಾಲೂಕು ನೆಲ್ಯಾಡಿಯ ಸಾದಿಕ್‌ ಮತ್ತು ಚಾಮರಾಜನಗರದ ಖಲೀಂ ಯಾನೆ ಖಲೀಮುಲ್ಲಾ ಬಂಧಿತ ಆರೋಪಿಗಳು. 

ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಾಪಸ್‌ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ಅವರು ತಿಳಿಸಿದ್ದಾರೆ. 

ಆರೋಪಿಗಳಾದ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ಆಲಾಡಿ ಇಂದಿರಾ ನಗರದ ಅಬ್ದುಲ್‌ ಶಾಫಿ ಯಾನೆ ಶಾಫಿ ಮತ್ತು ಚಾಮರಾಜನಗರ ಗಾಳಿಪುರದ ಖಲೀಲ್‌ವುಲ್ಲಾನನ್ನು ಮಂಗಳವಾರ ಬಂಧಿಸಲಾಗಿತ್ತು. 

ಇನ್ನೊಂದೆಡೆ ಮಂಗಳವಾರ ಬಂಧಿತರಾದ ಅಬ್ದುಲ್‌ ಶಾಫಿ ಮತ್ತು ಖಲೀಲ್‌ವುಲಾÉ ಅವರು ಶರತ್‌ ಹತ್ಯೆಯ ಯೋಜನೆಯನ್ನು ರೂಪಿಸಿದ್ದು, ಕೊಲೆ ಕೃತ್ಯದ ಬಳಿಕ ಆರೋಪಿಗಳಿಗೆ ಆಶ್ರಯ ನೀಡಿದವರಾಗಿರುತ್ತಾರೆ. ಬುಧವಾರ ಬಂಧಿತರಾದ ಮೂವರು ಆರೋಪಿಗಳು ಕೂಡ ಶರತ್‌ ಕೊಲೆ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಆಶ್ರಯ ಮತ್ತು ಬೆಂಬಲ ನೀಡಿದ ಆರೋಪವನ್ನು ಎದುರಿಸುತ್ತಿದ್ದಾರೆ. 

ಇದೇ ಆರೋಪದ ಮೇಲೆ ಇಲ್ಲಿವರೆಗೆ ಒಟ್ಟು ಐವರು ಆರೋಪಿಗಳನ್ನು ಚಾಮರಾಜನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಈಗಾಗಲೇ ಪೊಲೀಸರು ಬಂಧಿಸಿರುವುದು ಗಮನಾರ್ಹ. ಆದರೆ ಶರತ್‌ ಅವರನ್ನು ಮಾರಕಾಯುಧಗಳಿಂದ ಕಡಿದು ಕೊಲೆ ಕೃತ್ಯ ಎಸಗಿದ ಆರೋಪಿಗಳ ಬಂಧನ ಇನ್ನಷ್ಟೇ ಆಗಬೇಕಾಗಿದೆ. ಅಂದರೆ, ಶರತ್‌ ಅವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಈ ಪ್ರಕರಣದ ಪ್ರಮುಖ ಆರೋಪಿಗಳು ಯಾರು ಎಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. 

ಪಿಎಫ್‌ಐ ನಾಯಕರು
ಆರೋಪಿ ರಿಯಾಜ್‌ ಪಾರಂಕಿ ಬೆಳ್ತಂಗಡಿಯ ಪಿಎಫ್‌ಐ ನಾಯಕನಾಗಿದ್ದು, ಆರೋಪಿ ಸಾದಿಕ್‌ ಕೂಡ ಪಿಎಫ್‌ಐ ಸದಸ್ಯನಾರುತ್ತಾನೆ. ಮಂಗಳವಾರ ಚಾಮರಾಜನಗರದಲ್ಲಿ ಬಂಧನ ಕ್ಕೊಳಗಾಗಿರುವ ಖಲೀಲ್‌ವುಲ್ಲಾ ಕೂಡ ಪಿಎಫ್‌ಐ ಸಂಘಟನೆಗೆ ಸೇರಿದವನು. 

ಆದರೆ, ಈ ಕೊಲೆ ಪ್ರಕ ರಣದ ಸೂತ್ರ ಧಾರರು ಯಾರು ಮತ್ತು ಯಾವ ಕಾರಣಕ್ಕೆ ಶರತ್‌ ಮಡಿವಾಳ ಅವರನ್ನು ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆ ಪೂರ್ಣಗೊಂಡು ಎಲ್ಲ ಆರೋಪಿಗಳ ಬಂಧನವಾದ ಬಳಿಕವಷ್ಟೇ ಗೊತ್ತಾಗಲಿದೆ.

ಇಬ್ಬರಿಗೆ ಪೊಲೀಸ್‌ ಕಸ್ಟಡಿ 
ಮಂಗಳವಾರ ಬಂಧಿತರಾದ ಅಬ್ದುಲ್‌ ಶಾಫಿ ಮತ್ತು ಖಲೀಲ್‌ವುಲ್ಲಾನನ್ನು ಬಂಟ್ವಾಳ ನಗರ ಪೊಲೀಸರು ಬುಧವಾರ ಬಂಟ್ವಾಳ ಜೆ.ಎಂ.ಎಫ್‌.ಸಿ.ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ಹೆಚ್ಚಿನ ವಿಚಾರಣೆಗಾಗಿ ಒಂದು ವಾರದ ಪೊಲೀಸ್‌ ಕಸ್ಟಡಿಗೆ ವಿಧಿಸಲಾಗಿದೆ. 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳವಾರ ಐಜಿಪಿ ಕೂಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. 

ಇನ್ನುಳಿದ ಆರೋಪಿಗಳ ಶೀಘ್ರ ಬಂಧನ ಈ ಪ್ರಕರಣದಲ್ಲಿ ಭಾಗಿಯಾದ ಇನ್ನೂ 2- 3 ಮಂದಿ ಆರೋಪಿಗಳಿದ್ದು, ಅವರನ್ನು ಶೀಘ್ರ ಬಂಧಿ ಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. 

ಶರತ್‌ ಮಡಿವಾಳ ಅವರ ಮೇಲೆ ಜು. 4 ರಂದು ರಾತ್ರಿ ಬಿ.ಸಿ.ರೋಡ್‌ನ‌ಲ್ಲಿ ಮಾರಕಾಯುಧಗಳಿಂದ ಹಲ್ಲೆ ನಡೆದಿತ್ತು. ಜು. 6/7 ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರಿಗೆ “ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರಿಗೆ “ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

Congress: ದ.ಕ.ದಲ್ಲಿ ಜನರ ಒಲವು ಕಾಂಗ್ರೆಸ್‌ ಪರ: ಹರೀಶ್‌ ಕುಮಾರ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.