Shivamogga Case: ಎನ್‌ಐಎ ತನಿಖೆಗೆ ಶರಣ್ ಪಂಪ್‌ವೆಲ್ ಆಗ್ರಹ
ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ
Team Udayavani, Oct 7, 2023, 12:23 AM IST
ಮಂಗಳೂರು: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವಿಶೇಷ ಸಂದರ್ಭದಲ್ಲಿ ಮಹಾಪಂಚಾಯತ್ ಕರೆದು ಚರ್ಚೆ ನಡೆಸುತ್ತಾರೆ. ಅದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಶೀಘ್ರ ಮಹಾಪಂಚಾಯತ್ ಕರೆಯಲಾಗುವುದು. ಇದರಲ್ಲಿ ಸಾಧು ಸಂತರು, ವಿವಿಧ ಹಿಂದು ಸಂಘಟನೆಗಳ ಪ್ರಮುಖರಿಗೆ ಆಹ್ವಾನ ನೀಡಿ, ಗಂಭೀರ ಚರ್ಚೆ ನಡೆಸಿ, ಜೆಹಾದಿ ಮನಃಸ್ಥಿತಿಯ ದಂಗೆಕೋರರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸಂಘಟನೆ ಕಾರ್ಯಕರ್ತ ಹರ್ಷನ ಹತ್ಯೆಯಿಂದ ಹಿಡಿದು ಮಿಲಾದ್ ಮೆರವಣಿಗೆ ವರೆಗೆ ಹಿಂದೂ ಸಮಾಜವನ್ನು ಗುರಿಯಾಗಿಸಿಕೊಂಡು ಬರಲಾಗಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಘಟನೆಯನ್ನು ಎನ್‌ಐಎ ತನಿಖೆಗೆ ಒಳಪಡಿಸಿ, ಸತ್ಯಾಸತ್ಯತೆಯನ್ನು ಹೊರಗೆಡವಬೇಕು ಎಂದು ಆಗ್ರಹಿಸಿದರು.
ಮಹಿಷ ದಸರಾ
ಆಚರಣೆಗೆ ಬಿಡುವುದಿಲ್ಲ
ಮೈಸೂರು ದಸರಾಗೆ ಪರ್ಯಾಯವಾಗಿ ಮೈಸೂರಿನಲ್ಲಿ ಕೆಲವು ಸಂಘಟನೆಗಳ ಮಹಿಷ ದಸರಾ ಆಚರಿಸಲು ನಿರ್ಧರಿಸಿವೆ. ಇದನ್ನು ಅನುಸರಿಸಿ ಉಡುಪಿಯಲ್ಲೂ ಮಹಿಷ ದಸರಾ ಆಚರಣೆಯ ಮಾತುಗಳು ಕೇಳಿ ಬರುತ್ತಿವೆ. ಕರಾವಳಿಯಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಆವಕಾಶ ನೀಡುವುದಿಲ್ಲ. ಒಂದು ವೇಳೆ ಆಚರಿಸಲು ಮುಂದಾದರೆ ನಿಲ್ಲಿಸುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.