ಶಿರಾಡಿ 2ನೇ ಹಂತದ ಕಾಂಕ್ರೀಟೀಕರಣ; ಮುಂದಿನ ತಿಂಗಳಲ್ಲಿ ಟೆಂಡರ್
Team Udayavani, May 11, 2017, 3:03 PM IST
ಮಂಗಳೂರು: ಶಿರಾಡಿ ಘಾಟಿ ಎರಡನೇ ಹಂತದ ಕಾಂಕ್ರೀಟೀಕರಣ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದಿನ ತಿಂಗಳಲ್ಲಿ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಅವರು ಹೇಳಿದರು.
ಬುಧವಾರ ನಗರದ ಸಕೀìಟ್ ಹೌಸ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಪ್ರತಿನಿಧಿ ಜತೆ ಮಾತನಾಡಿದರು. ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಯೋಜನೆಗೆ ಪೂರಕ ಅಂದಾಜುವೆಚ್ಚ ನಿಗದಿಪಡಿಸಲಾಗಿದ್ದು, ಮುಂದಿನ ತಿಂಗಳಲ್ಲೇ ಟೆಂಡರ್ ನೀಡಲಾಗುವುದು. ಅದಕ್ಕೆ ಸಂಬಂಧಪಟ್ಟ ದಾಖಲೆ ಮುಂತಾದ ಪ್ರಕ್ರಿಯೆ ನಡೆಯಲಿದೆ ಎಂದರು.
ಶಿರಾಡಿ ಘಾಟಿ ರಸ್ತೆಯ ಮೊದಲ ಹಂತದ ಕಾಮಗಾರಿ 2015ರ ಎ. 20ಕ್ಕೆ ಆರಂಭವಾಗಿ ಆಗಸ್ಟ್‌ನಲ್ಲಿ ಮುಗಿಯು ರಸ್ತೆ ಸಂಚಾರಕ್ಕೆ ಮುಕ್ತವಾಗಿತ್ತು. ಪ್ರಥಮ ಹಂತದಲ್ಲಿ 11.77 ಕಿ.ಮೀ. ಉದ್ದ ಹಾಗೂ 8.50 ಮೀ. ಅಗಲದಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆಗೆ ಕಾಂಕ್ರೀಟೀಕರಣವನ್ನು ಒಟ್ಟು 69.90 ಕೋ.ರೂ. ವೆಚ್ಚದಲ್ಲಿ ಕೈಗೊಂಡು ರಸ್ತೆಯನ್ನು ಮೇಲ್ದರ್ಜೆಗೇರಿಸಲಾಗಿತ್ತು. ಶಿರಾಡಿ ಘಾಟಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ವರೆಗೆ 13 ಕಿ.ಮೀ. ಉದ್ದದ, ಒಟ್ಟು 89 ಕೋ. ರೂ. ವೆಚ್ಚದ ದ್ವಿತೀಯ ಹಂತದ ರಸ್ತೆ ಕಾಮಗಾರಿಗೆ ಕೇಂದ್ರ ಹೆದ್ದಾರಿ ಸಚಿವಾಲಯದ ಅನುಮೋದನೆ ದೊರಕಿತ್ತಾದರೂ ನಿಗದಿತ ಸಮಯದಲ್ಲಿ ಕಾಮಗಾರಿ ಪ್ರಾರಂಭವಾಗಿರಲಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಕಾಂಕ್ರೀಟೀಕರಣಕ್ಕಾಗಿ ನೂತನ ಟೆಂಡರ್ ಪ್ರಕ್ರಿಯೆ ಮುಂದಿನ ತಿಂಗಳಲ್ಲಿ ನಡೆಯಲಿದೆ.
ಹೊಸ ಮರಳು ನೀತಿ-ಸಮಿತಿ ರಚನೆ
ಕರಾವಳಿ ಭಾಗದಲ್ಲಿ ಹೊಸ ಮರಳು ನೀತಿ ಸಂಬಂಧಿಸಿ ಸಂಪುಟದಲ್ಲಿ ಚರ್ಚೆಗಳು ನಡೆದಿವೆ. ಈ ಬಗ್ಗೆ ಸಮಿತಿ ಕೂಡ ರಚಿಸಲಾಗಿದೆ. ಮರಳು ಸಾಗಾಟ ಸಂಬಂಧಿಸಿ ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಹೊಸ ಮರಳು ನೀತಿ ಜಾರಿಗೆ ತರಲು ಸಾಕಷ್ಟು ಆಗ್ರಹ ಕೇಳಿಬಂದಿದ್ದವು ಎಂದು ಸಚಿವರು ತಿಳಿಸಿದರು.
ಬಿ.ಸಿ. ರೋಡ್ ರಸ್ತೆ ವಿಸ್ತರಣೆ
ಬಿ.ಸಿ. ರೋಡ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಸಂಬಂಧಿಸಿ ಮಾತನಾಡಿದ ಸಚಿವರು, ಬಿ.ಸಿ. ರೋಡ್‌ನಿಂದ ಗುಂಡ್ಯದ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಯೋಜನೆಯನ್ನು ಎಲ್‌ಎನ್‌ಟಿಗೆ ಹಸ್ತಾಂತರಿಸಲಾಗಿದೆ. ಹಾಸನ, ಸಕಲೇಶಪುರ, ಗುಂಡ್ಯ, ಬಂಟ್ವಾಳದ ವರೆಗೆ ನಡೆಸುವ ಕಾಮಗಾರಿಯಲ್ಲಿ ಸಕಲೇಶಪುರದಲ್ಲಿ ಸಾಕಷ್ಟು ಕೆಲಸಗಳಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.