ಶಿರಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ; ಸಂಚಾರ ಬಂದ್
Team Udayavani, Aug 14, 2018, 8:31 PM IST
ನೆಲ್ಯಾಡಿ : ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು ಸದ್ಯಕ್ಕೆ ಈ ಭಾಗದಲ್ಲಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗುತ್ತಿದೆ. ಇಲ್ಲಿನ ಗುಂಡ್ಯ ಗಡಿ ದೇವಳದ ಮೇಲ್ಭಾಗದಲ್ಲಿ ಗುಡ್ಡ ಕುಸಿತವಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಹಾಸನ ಜಿಲ್ಲಾಧಿಕಾರಿಯವರೊಂದಿಗೆ ದೂರವಾಣಿ ಮೂಲಕ ಶಿರಾಡಿ ಘಾಟಿ ರಸ್ತೆಯ ಸ್ಥಿತಿಗತಿಯ ಮಾಹಿತಿಯನ್ನು ಪಡೆದುಕೊಂಡ ದ.ಕ. ಜಿಲ್ಲಾಧಿಕಾರಿ ಸೆಂಥಿಲ್ ಅವರು ಶಿರಾಡಿ ಘಾಟಿ ರಸ್ತೆಯನ್ನು ಬಳಸದಿರುವಂತೆ ಈ ಭಾಗದ ಮೂಲಕ ಸಂಚರಿಸುವವರಿಗೆ ಮನವಿ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಮಂಗಳವಾರ ರಾತ್ರಿ ಸಮಯದಲ್ಲಿ ಶಿರಾಡಿ ಘಾಟಿ ಮೂಲಕ ವಾಹನಗಳ ಸಂಚಾರ ನಡೆಸದಂತೆ ಅವರು ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಶಿರಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತ ಹಿನ್ನೆಲೆ ಬಸ್ ಸೇವೆ ಸ್ಥಗಿತಗೊಳಿಸಿದ ಕೆಎಸ್.ಆರ್.ಟಿಸಿ. ಬೆಂಗಳೂರಿನಿಂದ ತೆರಳುವ ಬಸ್ ಸೇವೆ ಸ್ಥಗಿತಕ್ಕೆ ಕೆಎಸ್.ಆರ್.ಟಿಸಿ ನಿರ್ಧಾರ. ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕುಂದಾಪುರ ಬಸ್ ಸಂಚಾರ ಸ್ಥಗಿತ. ಚಾರ್ಮಾಡಿ ಮಾರ್ಗವಾಗಿ ಎಕ್ಸ್‌ಪ್ರೆಸ್ ಬಸ್ ಹೊರತುಪಡಿಸಿ ಉಳಿದೆಲ್ಲಾ ಬಸ್ ಸಂಚಾರಕ್ಕೆ ಬ್ರೇಕ್. ಚಾರ್ಮಾಡಿ ಮಾರ್ಗವಾಗಿ ಸಂಚರಿಸಲಿರುವ ಕೆಎಸ್.ಆರ್.ಟಿ.ಸಿ.ಯ ಎಕ್ಸ್‌ಪ್ರೆಸ್ ಬಸ್ ಗಳು
ಪ್ರಪಾತಕ್ಕೆ ಜಾರಿದ ಬಸ್ : ತಪ್ಪಿದ ಅನಾಹುತ
ರಾಜನಕಟ್ಟೆ ಎಂಬಲ್ಲಿ ಶಿರಾಡಿ ಘಾಟ್ ರಸ್ತೆಯ ತಿರುವೊಂದರಲ್ಲಿ ಗುಡ್ಡಜರಿತದ ಕಾರಣದಿಂದ ಸರಕಾರಿ ಬಸ್ಸೊಂದು ರಸ್ತೆ ಬಿಟ್ಟು ಪ್ರಪಾತಕ್ಕೆ ಜಾರಿತು. ಆದರೆ ಈ ಸಂದರ್ಭದಲ್ಲಿ ಮರವೊಂದು ತಡೆಯಾದ ಕಾರಣ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ. ಭಾರೀ ಮಳೆ ಮತ್ತು ರಸ್ತೆಗಳಿಗೆ ಮಣ್ಣು ಕುಸಿಯುತ್ತಿರುವುದರಿಂದ ರಸ್ತೆ ಜಾರುತ್ತಿದ್ದು ವಾಹನ ಚಾಲನೆ ದುಸ್ತರವೆಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.