ಶಿರಾಡಿ: ನಿಷೇಧ ಇದ್ದರೂ ಘನ ವಾಹನ ಸಂಚಾರ
Team Udayavani, Jul 19, 2018, 3:42 PM IST
ಪುತ್ತೂರು/ ನೆಲ್ಯಾಡಿ: ನಿಷೇಧ ಆದೇಶದ ಹೊರತಾಗಿಯೂ ಶಿರಾಡಿ ರಸ್ತೆಯಾಗಿ ಸಾಗಲು ಘನ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಬುಧವಾರ ಕಂಡುಬಂದಿದೆ. ಬುಧವಾರ ಸಂಜೆ ವೇಳೆಗೆ ಘನ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಗುಂಡ್ಯ ಬಳಿ 2 ತಾಸು ಟ್ರಾಫಿಕ್ ಜಾಮ್ ಉಂಟಾಯಿತು.
ಮಂಗಳೂರಿನಿಂದ ಹಾಗೂ ಸಕಲೇಶಪುರ ಭಾಗದಿಂದ ಘನ ವಾಹನ ಸಂಚಾರ ಬುಧವಾರವೂ ಮುಂದುವರಿದಿದೆ. ಜುಲೈ 18ರಿಂದ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಮಂಗಳವಾರ ಘನ ವಾಹನಗಳು ಸಂಚರಿಸಿದ್ದ ಹಿನ್ನೆಲೆಯಲ್ಲಿ ಬುಧವಾರವೂ ಸಂಚಾರ ಇದೆ ಎಂದೇ ಭಾವಿಸಿದ್ದರು. ಈ ನಡುವೆ ಘನವಾಹನ ಚಾಲಕರು ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರೊಂದಿಗೆ ವಾಹನ ಬಿಡುವಂತೆ ಒತ್ತಾಯಿಸಿ ಆಕ್ರೋಶ ವ್ಯಕ್ತ ಪಡಿಸು ತ್ತಿರುವುದೂ ಕಂಡುಬಂದಿದೆ.
ಆದೇಶ ಹೊರಡಿಸಿದ್ದ ಜಿಲ್ಲಾಡಳಿತ, ಇದರ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲು ವಿಫಲ ಆಗಿರುವುದೇ ಈ ಅವ್ಯವಸ್ಥೆಗೆ ಕಾರಣ ಎಂದು ಗುಂಡ್ಯ ನಿವಾಸಿಗಳು ದೂರಿದ್ದಾರೆ. ಮಂಗಳೂರು ಕಡೆಯಿಂದ ಬರುವ ವಾಹನಗಳನ್ನು ಮಾಣಿಯಲ್ಲಿ ತಡೆದು, ಬೇರೆ ದಾರಿ ತೋರಿಸಬೇಕಿತ್ತು. ಹಾಸನ ಕಡೆಯಿಂದ ಬರುವ ವಾಹನಗಳಿಗೆ ಅಲ್ಲಿಯೇ ತಡೆ ಒಡ್ಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.