ಶಿರಾಡಿ ಘಾಟಿ ರಸ್ತೆ : ಎರಡನೇ ಹಂತದ ಕಾಂಕ್ರೀಟ್‌ ಕಾಮಗಾರಿಗೆ ಸಿದ್ಧತೆ


Team Udayavani, Jan 19, 2018, 12:27 PM IST

19-Jan-10.jpg

ಉಪ್ಪಿನಂಗಡಿ: ಶಿರಾಡಿ ಘಾಟಿ ರಸ್ತೆಯ 2ನೇ ಹಂತದ ಕಾಂಕ್ರೀಟ್‌ ರಸ್ತೆ ಕಾಮಗಾರಿ 26 ತಿಂಗಳು ವಿಳಂಬವಾಗಿ
ಆರಂಭವಾಗುತ್ತಿದ್ದು, ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

2015ರ ಮಳೆಗಾಲ ಮುಗಿದ ಮೇಲೆ ಆರಂಭವಾಗಬೇಕಿದ್ದ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ. ಕಾಂಕ್ರೀಟ್‌ ರಸ್ತೆ 2ನೇ ಹಂತದ ಕಾಮಗಾರಿಗೆ 2015ರಲ್ಲಿ 85.28 ಕೋಟಿ ರೂ. ಮಂಜೂರಾಗಿತ್ತು. ಇದರಲ್ಲಿ 12.38 ಕಿ.ಮೀ. ಕಾಂಕ್ರೀಟೀಕರಣಕ್ಕೆ 63.10 ಕೋಟಿ ರೂ., 21 ಕಿ.ಮೀ. ಡಾಮರೀಕರಣಕ್ಕೆ 22.18 ಕೋಟಿ ರೂ. ವಿಂಗಡಿಸಲಾಗಿದೆ. ಕಾಂಕ್ರೀಟ್‌ ರಸ್ತೆ 8.5 ಮೀಟರ್‌, ಡಾಮರ್‌ ರಸ್ತೆ 7 ಮೀಟರ್‌ ಅಗಲ ಆಗಲಿದೆ. ಓಷಿಯನ್‌ ಕನ್‌ಸ್ಟ್ರಕ್ಷನ್‌ ಇಂಡಿಯಾ ಕಂಪೆನಿ ಕಾಮಗಾರಿ ನಿರ್ವಹಿಸಲಿದೆ.

ಜರ್ಮನಿಯ ಯಂತ್ರ
ಮೊದಲ ಹಂತದ ಕಾಮಗಾರಿ ನಡೆಸಿದಾಗ ಜರ್ಮಿನಿಯಿಂದ 7.5 ಕೋಟಿ ಮೌಲ್ಯದ ಅತ್ಯಾಧುನಿಕ ಯಂತ್ರವನ್ನು ತರಿಸಿಕೊಳ್ಳಲಾಗಿತ್ತು. ಸದ್ಯ ಎರಡನೇ ಹಂತದ ಕಾಮಗಾರಿಗಾಗಿ ಮತ್ತೆ 10 ಕೋಟಿ ರೂ. ಮೌಲ್ಯದ ಯಂತ್ರವನ್ನು ತರಿಸಿಕೊಳ್ಳಲಾಗಿದೆ. ಕಾಮಗಾರಿಗೆ ಅಗತ್ಯವಾದ ಜಲ್ಲಿ, ಮರಳು ಇತ್ಯಾದಿಗಳನ್ನು ಶೇ. 50 ಪ್ರಮಾಣದಲ್ಲಿ ಶೇಖರಣೆ
ಮಾಡಿಕೊಳ್ಳ ಲಾಗಿದೆ ಎಂದು ಓಷಿಯನ್‌ ಕನ್‌ಸ್ಟ್ರಕ್ಷನ್‌ ಇಂಡಿಯಾ ಕಂಪೆನಿಯ ಆಡಳಿತ ನಿರ್ದೇಶಕ ಇನಾಯತ್‌ ಆಲಿ ತಿಳಿಸಿದ್ದಾರೆ. 

ವಿರ್ಟ್‌ಜನ್‌ ಕಂಪೆನಿಯ ಟಿಸಿಎಂ- 180 ಸೆನ್ಸರ್‌ ಪೇವರ್‌ ಯಂತ್ರವನ್ನು ಖರೀದಿ ಮಾಡಿದ್ದು, ಈ ಯಂತ್ರದಲ್ಲಿ ಸೆಂಟ್ರಿಂಗ್‌ ಇಲ್ಲದೆ ಕಾಮಗಾರಿ ನಡೆಸಬಹುದು. ಈ ಮೊದಲಿನದಕ್ಕಿಂತಲೂ ಅತ್ಯಾಧುನಿಕ ಯಂತ್ರ ಇದಾಗಿದ್ದು, ಅತಿ ವೇಗದಲ್ಲಿ ಕಾಮಗಾರಿ ನಡೆಸಲು ಅವಕಾಶ ಇದೆ ಎಂದು ಇನಾಯತ್‌ ಆಲಿ ತಿಳಿಸಿದ್ದಾರೆ. ಯಂತ್ರವನ್ನು ಶಿರಾಡಿ ಬಳಿ ಅಡ್ಡಹೊಳೆ ಪ್ಲಾಂಟ್‌ನಲ್ಲಿ ಪ್ರತಿಷ್ಠಾಪಿಸಲಾಗಿದೆ.

ಮೊದಲ ಹಂತದ ಕೆಲಸಕ್ಕೆ ಪ್ರಶಂಸೆ
ಮೊದಲ ಹಂತದ ಕಾಮಗಾರಿ ಹೆಗ್ಗದ್ದೆಯಿಂದ ಕೆಂಪುಹೊಳೆ ತನಕ 11.77 ಕಿ.ಮೀ. ಕಾಂಕ್ರಿಟೀಕರಣ 69.90 ಕೋಟಿ ರೂ. ವೆಚ್ಚದಲ್ಲಿ ಆಗಿದ್ದು, ಇದನ್ನು ಓಷಿಯನ್‌ ಕನ್‌ ಸ್ಟ್ರಕ್ಷನ್‌ ಸಂಸ್ಥೆಯೇ ನಿರ್ವಹಿಸಿತ್ತು. 2015 ಆಗಸ್ಟ್‌ 9ರಂದು ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕೇಂದ್ರ ಭೂಸಾರಿಗೆ ಮಾಜಿ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆದಿತ್ತು. ಕಾಮಗಾರಿ ಗುಣಮಟ್ಟದ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಹೆದ್ದಾರಿ ಇಲಾಖೆಯಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು.

ಶಿರಾಡಿ ಘಾಟಿ ರಸ್ತೆ ಬಂದ್‌
ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಕ್ಕೆ ಅತಿ ಹೆಚ್ಚಾಗಿ ಬಳಕೆಯಾಗುವ ಶಿರಾಡಿ ಘಾಟಿ ರಸ್ತೆಯನ್ನು ಜ. 20ರಿಂದ ಕಾಮಗಾರಿ ಮುಗಿಯುವ ತನಕ ಬಂದ್‌ ಮಾಡಲಾಗುತ್ತಿದೆ. ಕಾಮಗಾರಿ ಸಂದರ್ಭದಲ್ಲಿ ವಾಹನಗಳು ಹಾದು ಹೋದರೆ ಗುಣಮಟ್ಟ ಕುಸಿಯುತ್ತದೆ. ಹೀಗಾಗಿ, ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್‌ ಮಾಡಲು ಇಲಾಖೆ ನಿರ್ಧರಿಸಿದೆ. ವಾಹನಗಳ ಸಂಚಾರಕ್ಕೆ ಬದಲಿ ರಸ್ತೆಯನ್ನೂ ತೋರಿಸಲಾಗಿದೆ.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.