ಶಿರಾಡಿ: ರೈಲು ಸಂಚಾರ ಆರಂಭ
Team Udayavani, Aug 26, 2019, 5:40 AM IST
ಮಂಗಳೂರು: ಶಿರಾಡಿ ಘಾಟಿಯಲ್ಲಿ ರೈಲು ಸಂಚಾರ ಆ. 25ರಂದು ಆರಂಭಗೊಂಡಿದೆ. ಆ. 8ರಂದು ಸುಬ್ರಹ್ಮಣ್ಯ ರೋಡ್-ಸಕಲೇಶಪುರ ಮಧ್ಯೆ ಭೂಕುಸಿತ ಸಂಭವಿಸಿ ಮಂಗಳೂರು – ಬೆಂಗಳೂರು ರೈಲು ಸಂಚಾರವನ್ನು ರದ್ದುಪಡಿಸಲಾಗಿತ್ತು.
ಹಳಿಯ ಮೇಲಿನ ಕಲ್ಲು ಮಣ್ಣುಗಳ ತೆರವು ಶನಿವಾರ ಪೂರ್ತಿ ಗೊಂಡಿದ್ದು ಗೂಡ್ಸ್ ರೈಲನ್ನು ಪ್ರಯೋಗಾರ್ಥವಾಗಿ ಓಡಿಸಿ ಮಾರ್ಗ ಸಂಚಾರಕ್ಕೆ ಯೋಗ್ಯವಾಗಿರುವುದನ್ನು ಖಾತರಿಪಡಿಸಿಕೊಳ್ಳಲಾಗಿದೆ. ಪ್ರತಿಕೂಲ ಹವಾಮಾನದ ನಡುವೆಯೂ ಕಲ್ಲು ಮಣ್ಣು ತೆರವು ಕಾರ್ಯಾಚರಣೆಯನ್ನು ನೂರಾರು ಕಾರ್ಮಿಕರು ಮತ್ತು ಯಂತ್ರಗಳನ್ನು
ಬಳಸಿ ನಡೆಸಲಾಗಿತ್ತು. ಮೈಸೂರು ರೈಲ್ವೇ ವಿಭಾಗದ ವಿಭಾಗೀಯ ಪ್ರಬಂಧಕಿ ಅಪರ್ಣಾ ಗರ್ಗ್ ಸ್ಥಳಕ್ಕೆ ನಿರಂತರ ಭೇಟಿ ನೀಡಿ ಕಾರ್ಯಾ ಚರಣೆಯ ಪ್ರಗತಿ ಪರಿಶೀಲಿಸಿದ್ದರು. ಇದಲ್ಲದೆ ನೈಋತ್ಯ ರೈಲ್ವೇಯ ಮಹಾಪ್ರಬಂಧಕ ಎ.ಕೆ. ಸಿಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿರಾಡಿ ಘಾಟಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಂಡಿದ್ದರೂ ಮಂಗಳೂರು ಜಂಕ್ಷನ್ ಮಧ್ಯೆ ಭೂಕುಸಿತ ಸಂಭವಿಸಿರುವ ಹಿನ್ನೆಲೆ ಯಲ್ಲಿಬೆಂಗಳೂರು-ಕಾರವಾರ ರೈಲು ಮಂಗಳೂರಿನವರೆಗೆ ಮಾತ್ರ ಸಂಚರಿಸಲಿದೆ. ಕಾರವಾರ-ಬೆಂಗಳೂರು ರೈಲಿನ ಮಂಗಳೂರಿನ ವರೆಗಿನ ಸಂಚಾರ ರದ್ದುಗೊಂಡಿದ್ದು, ಮಂಗಳೂರಿನಿಂದ ಸಂಚಾರ ಆರಂಭಿಸಲಿದೆ.
ಕುಲಶೇಖರ: ಮುಂದುವರಿದ ತೆರವು ಕಾರ್ಯ
ಇದೇವೇಳೆ ಮಂಗಳೂರು ಜಂಕ್ಷನ್- ಸುರತ್ಕಲ್ ರೈಲು ಮಾರ್ಗದ ಕುಲಶೇಖರದಲ್ಲಿ ಭೂಕುಸಿತದಿಂದ ಹಳಿ ಮೇಲೆ ಬಿದ್ದಿರುವ ಮಣ್ಣು ತೆರವು ಮತ್ತು ತಡೆಗೋಡೆ ನಿರ್ಮಾಣ ರವಿವಾರವೂ ನಡೆದಿದೆ. ಕಾಮಗಾರಿಯಿಂದಾಗಿ ಈ ಮಾರ್ಗದಲ್ಲಿ ಸೋಮವಾರವೂ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ. ಆದರೆ ಸೋಮವಾರ ಸಂಜೆಯ ವೇಳೆಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋಮವಾರ ಎರಡು ರೈಲುಗಳ ಸಂಚಾರವನ್ನು ಕೊಂಕಣ ರೈಲು ಮಾರ್ಗದಲ್ಲಿ ಪ್ರಕಟಿಸಲಾಗಿದೆ.
ಕೊಚ್ಚುವೇಲಿ-ಪೋರ್‌ಬಂದರ್ ರೈಲು ಸೋಮವಾರ ಬೆಳಗ್ಗೆ 11 ಗಂಟೆಗೆ ಕೊಚ್ಚುವೇಲಿಯಿಂದ ಹೊರಡಲಿದೆ. ಇದೇ ರೀತಿ ಎರ್ನಾಕುಳಂ- ಅಜೆ¾àರ್ ರೈಲು ಸೋಮವಾರ ರಾತ್ರಿ 8.25ಕ್ಕೆ ಎರ್ನಾಕುಳಂನಿಂದ ಹೊರಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.