ಶಿವ ಪಾದಕ್ಕೆ ಪಂಚಾಕ್ಷರಿ ಅರ್ಪಣೆ: ಹೆಗ್ಗಡೆ
Team Udayavani, Mar 5, 2019, 6:32 AM IST
ಬೆಳ್ತಂಗಡಿ: ಕಲಿಯುಗದಲ್ಲಿ ಭಗವಂತನೆಡೆಗಿನ ಆತ್ಮನಿವೇದನೆ ಜಾಗೃತ ಗೊಳ್ಳುವ ಸ್ಮರಣೆಯೇ ಶಿವಜಾಗರಣೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಸೋಮವಾರ ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಅಹೋರಾತ್ರಿ ನಡೆಯುವ ಶಿವಪಂಚಾಕ್ಷರಿ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೃಢ ಸಂಕಲ್ಪದೊಂದಿಗೆ ಏಕಾಗ್ರತೆಯಿಂದ ದೇವರ ಭಕ್ತಿಯಲ್ಲಿ ಲೀನವಾದಲ್ಲಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗುತ್ತೇವೆ. ಶಿವನಾಮಸ್ಮರಣೆಯಿಂದ ನೋವು ನಗಣ್ಯವಾಗಿ ಧನ್ಯತೆ ಲಭಿಸುತ್ತದೆ. ಶ್ರದ್ಧೆ, ಆತ್ಮವಿಶ್ವಾಸದಿಂದ ದೇವರ ಕಾಣುವ ಸಂಕಲ್ಪದ ಗುರಿ ಹೊಂದಿದಲ್ಲಿ ಭಗವಂತನ ಸಾûಾತ್ಕಾರವಾಗುತ್ತದೆ ಎಂದರು.
ಸುಖ ಭೋಗಕ್ಕಾಗಿ ನಾವು ಪಂಚೇಂದ್ರಿಯ ಗಳ ದಾಸರಾಗಬಾರದು ಎಂದು ಕಿವಿಮಾತು ಹೇಳಿದ ಅವರು, ಶ್ರವಣ, ಕೀರ್ತನೆ, ಪಾದಸೇವೆ, ಅರ್ಚನೆ, ಧ್ಯಾನ, ಸಕ್ಯ-ಆತ್ಮನಿವೇದನೆ ದೇವರಲ್ಲಿ ಬೇಡುವ ವಿಧಾನ ಎಂದು ಹೇಳಿದರು.
ಹೇಮಾವತಿ ವೀ, ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್, ಪಾದಯಾತ್ರಿಗಳ ಸಂಘದ ನೇತಾರ ಬೆಂಗಳೂರಿನ ಹನುಂತಪ್ಪ ಮತ್ತು ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಧವåìಸ್ಥಳ ಗ್ರಾ.ಪಂ. ಸದಸ್ಯ ಶ್ರೀನಿವಾಸ ರಾವ್ ಸ್ವಾಗತಿಸಿ, ವಂದಿಸಿದರು.
ಕರಾವಳಿಯಾದ್ಯಂತ ಶಿವರಾತ್ರಿ
ಮಂಗಳೂರು/ಉಡುಪಿ/ಕಾಸರಗೋಡು: ಕರಾವಳಿಯಾದ್ಯಂತ ಮಹಾಶಿವ ರಾತ್ರಿಯನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಈಶ್ವರ ದೇವಾಲಯ ಸೇರಿದಂತೆ ಕರಾವಳಿಯ ವಿವಿಧ ದೇವಸ್ಥಾನ ಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಂಡರು.
* ಶಿವರಾತ್ರಿ ಅಂಗವಾಗಿ ದೇವಸ್ಥಾನ ಹಾಗೂ ವಿವಿಧ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.
* ಒಂದು ಲಕ್ಷಕ್ಕೂ ಅಧಿಕ ಮಂದಿ ಭಕ್ತರು ದೇವರ ದರ್ಶನ ಪಡೆದರು.
* ಧರ್ಮಸ್ಥಳದ ನಿವಾಸಿ ಹರೀಶ್ ಕೊಠಾರಿ ನೇತ್ರಾವತಿ ನದಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ಉರುಳು ಸೇವೆ ಮಾಡಿದರು.
* ಮಂಗಳವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.