Shivratri; ಧರ್ಮಸ್ಥಳದಲ್ಲಿ ಸಡಗರ: ಇಂದು ಅಹೋರಾತ್ರಿ ಜಾಗರಣೆ
ಪಾದಯಾತ್ರಿಗಳಿಗೆ ಸಮ್ಮಾನ..."ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ'
Team Udayavani, Mar 8, 2024, 6:00 AM IST
ಬೆಳ್ತಂಗಡಿ: ಶಿವರಾತ್ರಿಯು ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೇಂದ್ರಿಯಗಳ ನಿಯಂತ್ರಣದ ಮೂಲಕ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.
ಶಿವರಾತ್ರಿ ಪ್ರಯುಕ್ತ 45 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗುರುವಾರ ಧರ್ಮಸ್ಥಳದಲ್ಲಿ ಗೌರವಿಸಿ ಪಾದಯಾತ್ರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.
ಮುಂದೆ ನಿರ್ದಿಷ್ಟ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ – ಭಕ್ತಿಯಿಂದ ಭಗವಂತನ ನಾಮ ಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾ ದಾಯಕ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಸಮ್ಮಾನ
ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸಮ್ಮಾನಿಸಲಾಯಿತು. ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.
ಕ್ಷೇತ್ರವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಿದ್ದು, ಗುರುವಾರವೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. 3 ದಿನ ಸರಕಾರಿ ರಜೆಯಾದ್ದರಿಂದ ನಿರೀಕ್ಷೆಗೂ ಮೀರಿ ಭಕ್ತರು ಸೇರಿದ್ದಾರೆ.
ಇಂದು ಅಹೋರಾತ್ರಿ ಜಾಗರಣೆ
ಗುರುವಾರವೇ ನಾಡಿನೆಲ್ಲಡೆಯಿಂದ ಬಂದ 15 ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಕ್ಷೇತ್ರದಲ್ಲಿ ಸೇರಿದ್ದಾರೆ. 40 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರಿಗಳು ಹಾಗೂ 2 ಲಕ್ಷಕ್ಕೂ ಮಿಕ್ಕಿ ಭಕ್ತರ ಮಾ. 7ರಂದು ಸೇರುವ ನಿರೀಕ್ಷೆಯಿದೆ. ಸಂಜೆ 6ಕ್ಕೆ ದೇವಸ್ಥಾನದ ಎದುರು ಪ್ರವಚನ ಮಂಟಪದಲ್ಲಿ ಡಾ| ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ. ಶನಿವಾರ ಮುಂಜಾನೆ ರಥೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.