ಶೂಟೌಟ್: ಭೂಗತ ಲೋಕದ ಕೈವಾಡ ಶಂಕೆ
Team Udayavani, Dec 10, 2017, 1:05 PM IST
ಮಂಗಳೂರು: ನಗರದ ಕಾರ್‌ಸ್ಟ್ರೀಟ್‌ನಲ್ಲಿ ಶುಕ್ರವಾರ ರಾತ್ರಿ ಎಂ.ಸಂಜೀವ ಶೆಟ್ಟಿ ಸಿಲ್ಕ್ ಆ್ಯಂಡ್ ಸಾರೀಸ್ ಮಳಿಗೆಯ ಮೇಲೆ ನಡೆದ ಶೂಟೌಟ್ ಪ್ರಕರಣದಲ್ಲಿ ಭೂಗತ ಲೋಕದ ಕೈವಾಡದ ಶಂಕೆ ವ್ಯಕ್ತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ ಕೃತ್ಯವನ್ನು ತಾನೇ ಎಸಗಿರುವ ಬಗ್ಗೆ ಕೆಲವು ಮಾಧ್ಯಮಗಳಿಗೆ ದೂರವಾಣಿ ಮುಖೇನ ತಿಳಿಸಿದ್ದಾನೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕಲಿ ಯೋಗೀಶನ ಸೋದರ ಮತ್ತು ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಲಿ ಯೋಗೀಶನ ಸಹೋದರ ಹಳೆಯಂಗಡಿಯ ಗಣೇಶ್ ಮತ್ತು ಆತರ ಸ್ನೇಹಿತ ರೀತುವನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕಲಿ ಯೋಗೀಶ ಹೇಳಿದ್ದೇನು ಶೂಟೌಟ… ನಾನೇ ಮಾಡಿಸಿದ್ದು, ಮುಂದೆ ಕೂಡ ಇದು ಮುಂದುವರಿಯಲಿದೆ ಎಂದು ಕಲಿ ಯೋಗೀಶ ಖಾಸಗಿ ಸುದ್ದಿವಾಹಿನಿ ಹಾಗೂ ಪತ್ರಿಕೆಯೊಂದಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.
“”ಕಳೆದ ಎರಡು ವರ್ಷಗಳಿಂದ ನಾನು ಅಂಗಡಿ ಮಾಲಕರಿಗೆ ಐದು ಕೋಟಿ ರೂ. ನೀಡುವಂತೆ ತಾಕೀತು ಮಾಡುತ್ತಿದ್ದಾರೆ. ಆದರೆ ಮಾಲಕ ನನ್ನ ಮಾತನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದ. ಇದೇ ಕಾರಣಕ್ಕಾಗಿ ನಾನು ಶೂಟೌಟ… ನಡೆಸಿದ್ದೇನೆ. ಕಳೆದ ವಾರ ಕಿನ್ನಿಗೋಳಿಯ ರಾಜಶ್ರೀ ಜುವೆಲರಿಗೆ ಜೀವಂತ ಗುಂಡು ಕಳುಹಿಸುವ ಮೂಲಕ ಬೆದರಿಕೆ ಹುಟ್ಟಿಸಿದ್ದೆ’ ಎಂದು ಆತ ತಿಳಿಸಿದ್ದಾನೆ ಎನ್ನಲಾಗಿದೆ. ರಾಜಶ್ರೀ ಜುವೆಲರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಶುಕ್ರವಾರ ನಡೆದ ಘಟನೆ: ವಸ್ತ್ರ ಮಳಿಗೆ ಬಂದ್ ಮಾಡಲು ಸಿದ್ಧತೆ ನಡೆಸುತ್ತಿದ್ದಾಗ ಗ್ರಾಹಕರ ಸೋಗಿನಲ್ಲಿ ಟಿ ಶರ್ಟ್ ಕೇಳಿಕೊಂಡು ರಾತ್ರಿ 8 ಗಂಟೆ ವೇಳೆಗೆ ಬಂದ ಇಬ್ಬರು ದುಷ್ಕರ್ಮಿಗಳು ಎಂ. ಸಂಜೀವ ಶೆಟ್ಟಿ ಸಿಲ್ಕ್ ಆ್ಯಂಡ್
ಸಾರೀಸ್ ವಸ್ತ್ರ ಮಳಿಗೆಯ ಸೇಲ್ಸ್‌ಮನ್ ಮಹಾಲಿಂಗ ನಾಯ್ಕ (40) ಅವರ ತೊಡೆಗೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಗಾಯಾಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಕಿನ್ನಿಗೋಳಿಯಲ್ಲಿ ಮರದ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸಿಪ್ರಿಯನ್ ಡಿ’ಸೋಜಾ ಅವರನ್ನು ಕಲಿ ಯೋಗೀಶನ ಸಹಚರರು ಹಣಕ್ಕಾಗಿ ಒತ್ತಾಯಿಸಿ ಬೆದರಿಕೆ ಹಾಕಿದ್ದರು.
ಈ ಹಿಂದೆ ಭೂಗತ ಪಾತಕಿಗಳಿಂದ ಬಿಲ್ಡರ್‌ಗಳಿಗೆ ಹಫ್ತಾ ವಸೂಲಿಗಾಗಿ ಬೆದರಿಕೆ ಕರೆಗಳು ಬರುತ್ತಿದ್ದವು. ಇದೀಗ ರಿಯಲ್ ಎಸ್ಟೇಟ್ ಉದ್ಯಮ ನೆಲಕಚ್ಚಿದ ಪರಿಣಾಮ ಬೇರೆ ಉದ್ಯಮಿಗಳನ್ನು ಗುರಿಯಾಗಿಸಿ ಬೆದರಿಕೆ ಕರೆ ಮಾಡುತ್ತಿದ್ದಾರೆ. ಆದರೆ ಉದ್ಯಮಿಗಳು ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಿಲ್ಲ. ಶೂಟೌಟ್ ನಡೆದ ಬಳಿಕವೂ ಉದ್ಯಮಿಗಳು ಯಾವುದೇ ಬೆದರಿಕೆ ಇರಲಿಲ್ಲ ಎನ್ನುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.