ಹೂವಿನ ಅಂಗಡಿಯ ಶಟರ್ ಮುರಿದು 9 ಲಕ್ಷ ರೂ.ನಗದು, ಸಿಸಿ ಕೆಮರಾ ಡಿವಿಆರ್ ಕಳವು
Team Udayavani, Nov 17, 2022, 9:44 PM IST
ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಕಳವಾಗಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಅಂಗಡಿಯಾಗಿದ್ದು, ಕಳೆದ 12 ವರ್ಷಗಳಿಂದ ಹೋಲ್‌ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಅವರು ಪ್ರತಿನಿತ್ಯ ವ್ಯಾಪಾರದ ಹಣ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಬುಧವಾರ ಹೂವಿನ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಟೇಬಲ್‌ನ ಡ್ರಾವರ್‌ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಆಂಗಡಿ ಮುಚ್ಚಿ ತೆರೆಳಿದ್ದರು.
ಗುರುವಾರ ಬೆಳಗ್ಗೆ 6 ಗಂಟೆಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್‌ನ ಸೆಂಟರ್ ಲಾಕ್ ಮುುರಿದಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರು ಉಮರಬ್ಬ ಅವರಿಗೆ ಕರೆ ಮಾಡಿ ತಿಳಿಸಿದ್ದು, ಅವರು ಬಂದು ಅಂಗಡಿಯ ಶಟರ್ ಬಾಗಿಲನ್ನು ಮೇಲಕ್ಕೆತ್ತಿ ಒಳಗಡೆ ನೋಡಿದಾಗ ಟೇಬಲ್‌ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ಕಳವು ಮಾಡಿರುವುದು ಕಂಡುಬಂದಿದೆ.
ಮಾತ್ರವಲ್ಲದೆ ಅಂಗಡಿಯೊಳಗಡೆ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಮತ್ತು ಮಾನಿಟರ್ ಇರಿಸಿದ ಬಾಕ್ಸ್ ಅನ್ನು ತೆರೆದು ಸುಮಾರು 10 ಸಾವಿರ ರೂ. ಮೌಲ್ಯದ ಡಿವಿಆರ್ ಅನ್ನೂ ತೆಗೆದುಕೊಂಡು ಹೋಗಿರುವುದು ಗಮನಕ್ಕೆ ಬಂದಿದೆ.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರುವವರಿದ್ದುದರಿಂದ ಸುಮಾರು 1 ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.