ಸಿದ್ಧಕಟ್ಟೆ: ಮನೆ ಮನೆಗೆ ಕಾಂಗ್ರೆಸ್
Team Udayavani, Nov 4, 2017, 4:54 PM IST
ಪುಂಜಾಲಕಟ್ಟೆ: ಬಂಟ್ವಾಳ ತಾ| ಸಂಗಬೆಟ್ಟು ಪಂಚಾಯತ್ ವ್ಯಾಪ್ತಿಯಲ್ಲಿ ಸಿದ್ಧಕಟ್ಟೆ ವಲಯ ಕಾಂಗ್ರೆಸ್ ವತಿಯಿಂದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಜರಗಿತು.
ಬಂಟ್ವಾಳ ಎಪಿಎಂಸಿ ಸದಸ್ಯ, ಸಂಗಬೆಟ್ಟು ಗ್ರಾಮ ಉಸ್ತುವಾರಿ ಎಂ. ಪದ್ಮರಾಜ ಬಲ್ಲಾಳ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಸ್ಪಂದಿಸಿದ ಸರಕಾರ ಕಾಂಗ್ರೆಸ್ ಸರಕಾರ ಸಾಲಮನ್ನಾ, 94 ಸಿ ಹಕ್ಕುಪತ್ರ ಮೊದಲಾದ ಜನಪರ ಕಾರ್ಯಕ್ರಮಗಳನ್ನು ನೀಡಿದ್ದು, ಜನ ಮನ್ನಣೆ ಗಳಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಂದ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳಾಗಿವೆ. ಕಾರ್ಯಕರ್ತರು ಜನತೆಗೆ ತಿಳಿಸಬೇಕಾಗಿದೆ ಎಂದು ಹೇಳಿದರು.
ಸಿದ್ಧಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ರೈ, ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಕೆ. ಮಯ್ಯದಿ, ಪ್ರಮುಖರಾದ ಸೀತಾರಾಮ ಎಂ. ಶೆಟ್ಟಿ, ಎಸ್. ಎಂ. ಹುಸೇನ್, ಅಶೋಕ್ ಆಚಾರ್ಯ, ಕವಿತಾ ಬಿ. ಶೆಟ್ಟಿಗಾರ್, ಅಬ್ದುಲ್ ರಹಿಮಾನ್, ಶರೀಫ್ ಕೆರೆಬಳಿ, ರಮೇಶ್ ಗೌಡ, ಚಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.