ರಾಜಕೀಯ ಅಸ್ಥಿರತೆಗೆ ಸಿದ್ದರಾಮಯ್ಯ ಕಾರಣ: ಸದಾನಂದ ಗೌಡ
Team Udayavani, Jan 20, 2019, 4:20 AM IST
ಕಾಣಿಯೂರು/ಮಂಗಳೂರು: ರಾಜ್ಯದ ರಾಜಕೀಯ ಮೇಲಾಟಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಆರೋಪಿಸಿದರು.ಅವರು ಶನಿವಾರ ಚಾರ್ವಾಕ ಕಪಿಲೇಶ್ವರ ದೇವಸ್ಥಾನದಲ್ಲಿ ಮತ್ತು ಮಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಪ್ರಾರಂಭದಿಂದಲೇ ಸರಕಾರವನ್ನು ಅಸ್ಥಿರಗೊಳಿಸುವ ಕುತಂತ್ರ ಮಾಡುತ್ತಿದ್ದಾರೆ. ತನ್ನ ರಾಜಕಿಯ ಉಳಿವಿಗಾಗಿ ಏನೇನೋ ನಾಟಕವಾಡಿ ಆ ಎಲ್ಲ ತಪ್ಪುಗಳನ್ನು ಬಿಜೆಪಿಯ ಮೇಲೆ ಹೊರಿಸಿ ರಾಜ್ಯದ ಜನರ ಮನಸ್ಸಿನಲ್ಲಿ ಬಿಜೆಪಿಯ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವುದು ಅವರ ಏಕಮೇವ ಅಜೆಂಡ ಎಂದರು.
ಬಿಜೆಪಿಯನ್ನು ದೂರ ಇಡಬೇಕು ಎಂಬ ಏಕೈಕ ಉದ್ದೇಶದಿಂದ ಒಲ್ಲದ ಮನಸ್ಸಿನಿಂದ ಸರಕಾರ ರಚಿಸಿ ಈಗ ರಾಜ್ಯದ ಜನತೆ ಅನ್ಯಾಯ ಮಾಡಲಾಗುತ್ತಿದೆ. ಈಗಿನ ರಾಜಕೀಯ ನಾಟಕದಲ್ಲಿ ಬಿಜೆಪಿ ಪಾತ್ರ ಎಳ್ಳಷ್ಟೂ ಇಲ್ಲ ಎಂದು ತಿಳಿಸಿದರು.
ಕಾಂಗ್ರೆಸ್‌ನಲ್ಲಿರುವ ಕೆಲವು ಅತೃಪ್ತರು ಬಿಜೆಪಿಯ ಸಂಪರ್ಕದಲ್ಲಿರುವುದು ಹೌದು. ಹಾಗೆಂದು ಬಿಜೆಪಿ ಅವರ್ಯಾರನ್ನೂ ಸಂಪರ್ಕಿಸಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ತಮ್ಮ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದೆ ಹೋದಾಗ ಬಿಜೆಪಿಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಇದನ್ನೆಲ್ಲಾ ರಾಜ್ಯದ ಜನ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.
ಸಭೆ ನಡೆಸಿದರೆ ತಪ್ಪೇನು?
ನಾವು ದಿಲ್ಲಿಯಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ಭಾಗ ವಹಿಸಿದ್ದೆವು ಹೊರತು ಯಾವುದೇ ಆಪರೇಷನ್ ಕಮಲ ಮಾಡಲು ಅಲ್ಲಿಗೆ ಹೋದದ್ದಲ್ಲ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿದಾಗ 104 ಶಾಸಕರನ್ನು ಹೊಂದಿರುವ ನಾವೆಲ್ಲಾ ಒಂದೆಡೆ ಒಟ್ಟು ಸೇರಿ ಸರಕಾರ ರಚನೆಯ ವಿಚಾರದಲ್ಲಿ ತೊಡಗಿದರೆ ತಪ್ಪೇನು ಎಂದೂ ಪ್ರಶ್ನಿಸಿದರು.
ಒಗ್ಗಟ್ಟಿಗಾಗಿ ರೆಸಾರ್ಟ್‌ಗೆ ಪಯಣ: ಖಾದರ್
ಮಂಗಳೂರು: ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಿಕೊಂಡು ಒಗ್ಗಟ್ಟು ಪ್ರದರ್ಶಿಸುವ ಕಾರಣಕ್ಕಾಗಿ ರೆಸಾರ್ಟ್‌ಗೆ ಹೋಗಿದ್ದೇವೆಯೇ ವಿನಾ ರೆಸಾರ್ಟ್ ರಾಜಕಾರಣ ಮಾಡಲು ಹೋಗಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎಲ್ಲ ಸಮಸ್ಯೆಗೆ ಪರಿಹಾರ ಕಾಣುವುದಕ್ಕಾಗಿ ಒಗ್ಗಟ್ಟಾಗಿ ನಾವು ಹೋಗಿದ್ದೇವೆ. ನಮ್ಮ ಎಲ್ಲ ಶಾಸಕರು ಒಟ್ಟಾಗಿದ್ದರೆ ಮಾತ್ರ ಬಿಜೆಪಿಯವರಿಗೆ ಗೊತ್ತಾಗಲಿದೆ. ಮಾಧ್ಯಮಗಳಲ್ಲಿ ಇಬ್ಬರು ಹೋದರು, ಮೂವರು ಹೋದರು ಎಂಬ ಅಪಪ್ರಚಾರದಿಂದ ಗೊಂದಲ ಸೃಷ್ಟಿಯಾಗತ್ತಿದೆ. ಈ ಎಲ್ಲ ಗೊಂದಲಗಳಿಗೆ ಅಂತ್ಯ ಕಾಣುವ ಉದ್ದೇಶದಿಂದ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.