ಭಯೋತ್ಪಾದನೆ ಬೆಂಬಲಿಸಿ ಡಿಕೆಶಿ ಹೇಳಿಕೆ ನೀಡಿಲ್ಲ : ಸಿದ್ಧರಾಮಯ್ಯ
Team Udayavani, Dec 18, 2022, 6:25 AM IST
ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟವನ್ನು ಬೆಂಬಲಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿಲ್ಲ, ಅವರ ಹೇಳಿಕೆಯನ್ನು ಬಿಜೆಪಿಯವರು ತಿರುಚಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಪ್ರಶ್ನೆಗೆ ಸಿದ್ಧರಾಮಯ್ಯ ಉತ್ತರಿಸಿ, “ಬಾಂಬ್ ಸ್ಫೋಟ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ’ ಎಂಬುದಾಗಿ ಡಿಕೆಶಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಯೋತ್ಪಾದನೆಯನ್ನು ಬೆಂಬಲಿಸಿ ಹೇಳಿಕೆ ನೀಡಿಲ್ಲ. ಆದರೆ ಬಿಜೆಪಿಯವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದರು.
ಭಯೋತ್ಪಾದನೆ ಹತ್ತಿಕ್ಕಲಿ
ಬಿಜೆಪಿಯದ್ದು ಡಬಲ್ ಎಂಜಿನ್ ಸರಕಾರವಿದೆ. ಭಯೋತ್ಪಾದನೆ ಸೇರಿದಂತೆ ಕಾನೂನು ಬಾಹಿರವಾದ ಎಲ್ಲ ಚಟುವಟಿಕೆಗಳನ್ನು ಅವರು ಹತ್ತಿಕ್ಕಲಿ. ಕೇವಲ ಜನರನ್ನು ಭಾವನಾತ್ಮಕ ವಿಚಾರದಲ್ಲಿ ಪ್ರಚೋದನೆ ಮಾಡಲು ಅವರಿಗೆ ಅಧಿಕಾರ ಕೊಟ್ಟಿದ್ದಲ್ಲ ಎಂದು ಸಿದ್ಧರಾಮಯ್ಯ ಹೇಳಿದರು.
ನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ
ಕರಾವಳಿಯಲ್ಲಿ ನಡೆಯುತ್ತಿರು ನೈತಿಕ ಪೊಲೀಸ್‌ಗಿರಿ ಘಟನೆಗಳು ಖಂಡನೀಯ. ಇದಕ್ಕೆ ಕಾರಣರಾದವರ ಮೇಲೆ ಕಠಿನ ಕ್ರಮ ಕೈಗೊಳ್ಳ ಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಇದ್ದಾರೆ. ಬೇರೆಯವರ ಮಧ್ಯಪ್ರವೇಶಕ್ಕೆ ಸರಕಾರ ಅವಕಾಶ ನೀಡಬಾರದು. ಕ್ರಿಯೆಗೆ ಪ್ರತಿಕ್ರಿಯೆ ಎಂಬುದಾಗಿ ಸಿಎಂ ನೀಡಿದ್ದ ಹೇಳಿಕೆಯ ಅರ್ಥವೇನು, ಒಂದು ಕೊಲೆಗೆ ಪ್ರತಿಯಾಗಿ ಮತ್ತೂಂದು ಕೊಲೆ ಮಾಡಲು ಕಾನೂನು ಹೇಳುತ್ತದೆಯೇ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.
ಈ ಸಂದರ್ಭ ಶಾಸಕ ಯು.ಟಿ. ಖಾದರ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಶಶಿಧರ ಹೆಗ್ಡೆ, ಮಿಥುನ್ ರೈ, ಇನಾಯತ್ ಆಲಿ, ಮೊಯ್ದಿನ್ ಬಾವಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.