ಸ್ಮಾರ್ಟ್‌ಸಿಟಿ ಕಾಮಗಾರಿ ಸ್ಥಗಿತ; ಜ. 21ಕ್ಕೆ ಹೈಕೋರ್ಟ್ ವಿಚಾರಣೆ
Team Udayavani, Jan 10, 2021, 10:35 PM IST
ಮಹಾನಗರ: ಎರಡು ವಾರಗಳಿಂದ ಸ್ಥಗಿತಗೊಂಡಿರುವ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಮುಂದಿನ ಹಂತದ ಬಗ್ಗೆ ನಿರ್ಧರಿಸುವ ನಿಟ್ಟಿನಲ್ಲಿ ಜ. 21ರಂದು ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಘನತ್ಯಾಜ್ಯಕ್ಕಿಂತ ಸ್ಮಾರ್ಟ್‌ಸಿಟಿ ಯೋ ಜನೆ ಕಾಮಾಗಾರಿಯಿಂದ ಹರಡುತ್ತಿರುವ ತ್ಯಾಜ್ಯ ಹೆಚ್ಚಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಸಕ್ತಿ ಅರ್ಜಿಯನ್ನು ಡಿ. 23ರಂದು ಹೈಕೋರ್ಟ್ ವಿಚಾರಣೆ ನಡೆಸಿತ್ತು. ಕಾಮಗಾರಿ ವೇಳೆ ನಿರ್ಮಾಣ, ನೆಲಸಮ ತ್ಯಾಜ್ಯ ನಿರ್ವ
ಹಣೆ-2016ರ ನಿಯಮಗಳನ್ನು ಅನುಸರಿ ಸುವವರೆಗೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗುವುದು ಎಂದು ಮನಪಾ ಆಯುಕ್ತ, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಅವರು ಹೈಕೋರ್ಟ್‌ಗೆ ತಿಳಿಸಿದ್ದರು.
ಮನಪಾ ವ್ಯಾಪ್ತಿಯ ಹಂಪನಕಟ್ಟೆ, ಎಂ.ಜಿ.ರಸ್ತೆ, ರಥಬೀದಿ ಮೊದಲಾದ ಕಡೆ ಗಳಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ನಡೆ ಯುತ್ತಿತ್ತು. ಆದರೆ ಹೈಕೋರ್ಟ್ ನೀಡಿದ ಆದೇಶದಂತೆ ಇದೀಗ ಕಾಮಗಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.
ಕುಂಜತ್ತಬೈಲ್-ಪಚ್ಚನಾಡಿಯಲ್ಲಿ ಜಾಗ :
ಭಗ್ನಾವಶೇಷ ತ್ಯಾಜ್ಯ ವಿಲೇವಾರಿ ಮಾಡಲು ಮಂಗಳೂರಿನ ಹೊರವಲಯದ ಕುಂಜತ್ತಬೈಲ್,ಪಚ್ಚನಾಡಿಯಲ್ಲಿ ಜಾಗಕ್ಕೆ ಮನಪಾ ತರಾತುರಿಯಲ್ಲಿ ಅನುಮೋದನೆ ನೀಡಿದೆ. ಇವೆರಡೂ ಜಾಗಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ವಲಯ ರೂಪಿಸಲು ಹಲವು ವರ್ಷಗಳಿಂದ ಪ್ರಸ್ತಾವ ಇದ್ದರೂ ಅಂತಿಮಗೊಂಡಿರಲಿಲ್ಲ. ಭಗ್ನಾವಶೇಷ ತ್ಯಾಜ್ಯಗಳನ್ನು ಇನ್ನು ಮುಂದೆ ಕುಂಜತ್ತಬೈಲಿನ ಎರಡು ಎಕರೆ ಸರಕಾರಿ ಜಾಗದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆ ಪ್ರದೇಶ ಅಥವಾ ಪಚ್ಚನಾಡಿಯ ಘನತ್ಯಾಜ್ಯ ವಿಲೇವಾರಿ ಪ್ರದೇಶದ ಹಿಂಬದಿಯ ಮೂರು ಎಕರೆ ಜಾಗದಲ್ಲಿ ವಿಲೇವಾರಿ ಮಾಡಲು ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ನಾಳೆ ಪ್ರತಿಭಟನೆ :
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯಾರಂಭಗೊಂಡ ಸ್ಮಾರ್ಟ್ ಸಿಟಿಯ ಕಾಮಗಾರಿಗಳು ಸ್ಥಗಿತಗೊಂಡಿರುವುದರ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಜ. 12ರಂದು ಬೆಳಗ್ಗೆ 10 ಗಂಟೆಗೆ ಪಾಲಿಕೆಯ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಸ್ಮಾರ್ಟ್‌ಸಿಟಿ ಕಾಮಗಾರಿಗೆ ಸಂಬಂಧಿಸಿದಂತೆ ಜ. 21ರಂದು ಹೈಕೋರ್ಟ್‌ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಮನಪಾ ವ್ಯಾಪ್ತಿಯಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ನಡೆಸಲು ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವಿವರಿಸಲಿದ್ದೇವೆ.–ಅಕ್ಷಯ್ ಶ್ರೀಧರ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ (ಪ್ರಭಾರ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.