Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
ಸೌದಿ ಅರೇಬಿಯಾದಿಂದ ಬಂದಿದ್ದ ದಕ್ಷಿಣ ಕನ್ನಡ ಮೂಲದ ಪ್ರಯಾಣಿಕ
Team Udayavani, Apr 28, 2024, 8:04 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ 54.3 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಏಪ್ರಿಲ್ 27 ರಂದು ಜಪ್ತಿ ಮಾಡಿದ್ದಾರೆ.
ಶನಿವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್ನಿಂದ ಆಗಮಿಸಿದ ಪ್ರಯಾಣಿಕನನ್ನು ಸ್ಪಾಟ್ ಪ್ರೊಫೈಲಿಂಗ್ ಮತ್ತು ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ ಪ್ರಶ್ನಿಸಿದಾಗ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮೂಲದ ಪ್ರಯಾಣಿಕ ತನ್ನ ಗುದನಾಳದಲ್ಲಿ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟಿರುವುದು ಕಂಡುಬಂದಿದೆ. ಹೊರತೆಗೆದ ಬಳಿಕ ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ನಿವ್ವಳ 750 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ 54 ಲಕ್ಷದ 30 ಸಾವಿರ ರೂ. ಮೌಲ್ಯದ್ದು ದೊರಕಿದೆ ಎಂದು ಅಧಿಕಾರಿಗಳು ಎಕ್ಸ್ ನಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.