![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Apr 12, 2024, 1:31 AM IST
ಮಂಗಳೂರು: ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಸಿದ ಅನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ ನಕಲಿ ಖಾತೆಗಳ ಮೇಲೆ ನಿಗಾವಹಿಸಿ ಕ್ರಮ ಜರಗಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಸೈಬರ್ ಕ್ರೈಂ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಆರೋಪಿಸಿದ್ದಾರೆ. ಕಾಂಗ್ರೆಸ್‌ವನರಿಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ಮೋದಿಯವರ ಮಂಗಳೂರಿನ ರೋಡ್ ಶೋ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.