ಯುವ ವೈದ್ಯನ ಅನುಕರಣೀಯ ಕಾರ್ಯ
ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ನೀಡುವ ಖಾಸಗಿ ವೈದ್ಯ
Team Udayavani, May 30, 2019, 10:22 AM IST
ಕಡಬ: ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿದರೂ ನಿರೀಕ್ಷಿತ ಫಲ ಪಡೆಯಲು ಸಾಧ್ಯವಾಗಿಲ್ಲ. ಆದರೆ ಇಲ್ಲೊಬ್ಬರು ಖಾಸಗಿ ವೈದ್ಯರು ತಾನಾಗಿ ಸರಕಾರಿ ಆಸ್ಪತ್ರೆಯ ವೈದ್ಯಕೀಯ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದೂ ಉಚಿತ!
ಯುವ ಸಮುದಾಯಕ್ಕೆ ಅದರಲ್ಲೂ ವೈದ್ಯರಿಗೆ ಮಾದರಿಯಾಗಬಲ್ಲ ಇವರ ಹೆಸರು ಡಾ| ಅವಿನ್ ಡಿ.ಪಿ. 2 ತಿಂಗಳಿಂದ ಕಡಬದ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯ ವಿಶೇಷ ಅನುಮತಿ ಪಡೆದು ಉಚಿತವಾಗಿ ಸೇವೆ ನೀಡುತ್ತಿದ್ದಾರೆ. ಅವಿನ್ ಸ್ನಾತಕೋತ್ತರ ಪದವಿಗಾಗಿ ಸರಕಾರಿ ಕೋಟಾದಡಿ ಸೀಟು ಪಡೆಯಲು ಪ್ರವೇಶ ಪರೀಕ್ಷೆ ಬರೆದಿದ್ದು, ಬಿಡುವಿನ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ಅಪರೂಪದ ಸಾಧಕ
ಡಾ| ಅವಿನ್ ಬಹಳ ಬಡತನದ ನಡುವೆ ಉನ್ನತ ಗುರಿ ಸಾಧನೆಯ ಹಠ ತೊಟ್ಟು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದು ಹೆತ್ತವರ ಕನಸನ್ನು ನನಸು ಮಾಡಿದ್ದಾರೆ.
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗ್ರಾಮದ ದೋಣಿಮನೆ ನಿವಾಸಿ, ರಿಕ್ಷಾ ಚಾಲಕ ದುಶ್ಯಂತ್ ಮತ್ತು ಬೀಡಿ ಕಾರ್ಮಿಕೆ ಪ್ರೇಮಾ ದಂಪತಿಯ ಹಿರಿಯ ಪುತ್ರ ಡಾ| ಅವಿನ್ ಡಿ.ಪಿ. ಒಂದರಿಂದ ಹತ್ತನೆಯ ತರಗತಿವರೆಗೆ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಅವಿನ್, ಎಸೆಸೆಲ್ಸಿಯಲ್ಲಿ ಶೇ.95 ಅಂಕ ಗಳಿಸಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಸೀಟು ಗಿಟ್ಟಿಸಿಕೊಂಡಿದ್ದರು. ಮೆಡಿಕಲ್ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 685 ರ್‍ಯಾಂಕ್ ಗಳಿಸಿ, ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಸೀಟು ಗಿಟ್ಟಿಸಿಕೊಂಡಿದ್ದರು. ಈಗ ಎಂಬಿಬಿಎಸ್ ಮುಗಿಸಿ ಈಗ ಹೊಸದಿಲ್ಲಿಯ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಸರಕಾರಿ ಕೋಟಾದಡಿ ಜನರಲ್ ಸರ್ಜರಿ ವಿಭಾಗದಲ್ಲಿ ಸ್ನಾತಕೋತ್ತರ ಕಲಿಕೆಗೆ ಸಜ್ಜಾಗಿದ್ದಾರೆ.
ದೇಶದ ಅಭಿವೃದ್ಧಿಯು ಜನಾಂದೋಲನದ ಸ್ವರೂಪ ಪಡೆದುಕೊಳ್ಳುತ್ತಿರುವ ಈ ಸಮಯದಲ್ಲಿ ವಿಕಾಸಕ್ಕಾಗಿ ತುಡಿಯುತ್ತಿರುವ ಎಲ್ಲ ಯುವಕರಂತೆ ಒಬ್ಬ ಯುವ ವೈದ್ಯನಾಗಿ ನನ್ನೂರಿನ ಜನರಿಗೆ ಅಳಿಲ ಸೇವೆ
ಸಲ್ಲಿಸುವ ಅವಕಾಶವನ್ನು ಬಳಸಿಕೊಂಡಿದ್ದೇನೆ.
– ಡಾ| ಅವಿನ್ ಡಿ.ಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.