ಅಕ್ಷರ ಜ್ಞಾನದಿಂದ ಶೋಷಣೆಮುಕ್ತ ಸಮಾಜ
Team Udayavani, Sep 6, 2017, 8:40 AM IST
ಮಂಗಳೂರು: ಪ್ರತಿಯೊಬ್ಬರೂ ಅಕ್ಷರ ಜ್ಞಾನಿಗಳಾದರೆ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ. ದ.ಕ. ಜಿಲ್ಲೆಯು ಶೈಕ್ಷಣಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದರೂ, ಇಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಕರು ಸಾಮಾಜಿಕ ಸಾಮರಸ್ಯದ ಬೋಧನೆಯನ್ನು ಮಾಡ ಬೇಕಿದೆ. ಶಿಕ್ಷಣವು ನಮಗೆ ಸ್ವಾಭಿಮಾನದ ಬದುಕನ್ನೂ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅವರು ಮಂಗಳವಾರ ನಗರದ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನವನ್ನು ಉದ್ಘಾಟಿಸಿದರು.
ಇತರ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಸಮಾಜ ದಲ್ಲಿ ಮಹತ್ತರ ಸ್ಥಾನವನ್ನು ಗಳಿಸಿದೆ. ಹೀಗಾಗಿ ಶಿಕ್ಷಕರ ಮೇಲೆ ಸಮಾಜ ಕಟ್ಟುವ ಜವಾಬ್ದಾರಿ ಇದೆ. ಶಿಕ್ಷಕರು ತಪ್ಪು ಮಾಡಿದಾಗ ಅದಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. ಹೀಗಾಗಿ ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಅವರು ಹೇಳಿದರು.
ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯ ಸರಕಾರ ಧನಾತ್ಮಕ ಚಿಂತನೆ ನಡೆಸಿದ್ದು, 6ನೇ ವೇತನ ಆಯೋಗವನ್ನು ಶೀಘ್ರದಲ್ಲಿ ಜಾರಿ ಮಾಡಲಾಗುತ್ತದೆ. ಸ್ವಾಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿ ಸಿದ್ದರು. ಪ್ರಾಥಮಿಕ ವಿಭಾಗದ ಶಿಕ್ಷಕರಾದ ನಾರಾಯಣ ಪೂಜಾರಿ, ಶಾರದಾ ಜಿ, ಶಂಕರ, ಉದಯಕುಮಾರಿ, ಶೀನ ನಾಯ್ಕ, ನಿಂಗರಾಜು, ಯಶೋಧಾ, ಪ್ರೌಢಶಾಲಾ ವಿಭಾಗದ ಶಿಕ್ಷಕರಾದ ಶೇಕ್ ಆದಂ ಸಾಹೇಬ್, ವಿಶ್ವನಾಥ ಗೌಡ ಕೆ, ಜಾನ್ಚಂದ್ರನ್, ವಿನಯ ಕುಮಾರಿ, ಮಹಾದೇವ, ಸತೀಶ್ ಭಟ್, ದಯಾನಂದ ಎನ್.ಕೆ. ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ ಸಾಲಿನಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಾದ ವಸಂತಿ ಹಾಗೂ ಸಂಜೀವ ಅವರನ್ನು ಗೌರವಿಸ ಲಾಯಿತು. ಕಾರ್ಯಕ್ರಮದಲ್ಲಿ ಸ್ವತ್ಛತಾ ವರ್ಷಾಚರಣೆಯ ಪ್ರಾರಂಭೋತ್ಸವ ಹಾಗೂ ಕಿರುಚಿತ್ರಗಳನ್ನು ಬಿಡುಗಡೆ ಗೊಳಿಸ ಲಾಯಿತು. ಗುರು ಚೇತನ ಕಾರ್ಯಕ್ರಮದ ಲಾಂಛನ, ತರಬೇತಿ ಸಾಹಿತ್ಯವನ್ನು ಅನಾ ವರಣಗೊಳಿಸಲಾಯಿತು.
ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ| ನರೇಂದ್ರ ರೈ ದೇರ್ಲ ಅವರು ದಿಕ್ಸೂಚಿ ಭಾಷಣ ಮಾಡಿದರು. ವೇದಿಕೆಯಲ್ಲಿ ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ಕವಿತಾ ಸನಿಲ್, ಮಂಗಳೂರು ತಾ.ಪಂ.ಅಧ್ಯಕ್ಷ ಮಹಮ್ಮದ್ ಮೋನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ಕುಮಾರ ಕಲ್ಕೂರ, ಸರಕಾರಿ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕ ದಿವಾಕರ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ.ಎಲ್, ತಾ.ಪಂ.ಇಓ ಜಿ. ಸದಾನಂದ ಮೊದಲಾದವರು ಉಪಸ್ಥಿತರಿದ್ದರು.
ಜಿ.ಪಂ.ಸಿಇಒ ಡಾ| ಎಂ.ಆರ್. ರವಿ ಅವರು ಸ್ವತ್ಛತಾ ವರ್ಷಾಚರಣೆ ಹಾಗೂ ಡಯಟ್ ಪ್ರಾಂಶುಪಾಲ ಸಿಪ್ರಿಯನ್ ಮೊಂತೆರೋ ಅವರು ಗುರುಚೇತನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಡಿಡಿಪಿಐ ವೈ.ಶಿವರಾಮಯ್ಯ ಸ್ವಾಗತಿಸಿದರು.
ಮಾರ್ಚ್ 22 ಚಲನಚಿತ್ರ: ಸಚಿವ ರೈ ಶ್ಲಾಘನೆ
ನೀರಿನ ಕುರಿತು ಜನರ ಜಾಗೃತಿ ಹಾಗೂ ಸಾಮಾಜಿಕ ಸಾಮರಸ್ಯದ ಕುರಿತು ನಿರ್ಮಾಣಗೊಂಡಿರುವ ಕನ್ನಡ ಚಲನಚಿತ್ರ ಮಾರ್ಚ್ 22ರ ಕುರಿತು ಸಚಿವ ರೈ ಅವರು ಶ್ಲಾಘನೆ ವ್ಯಕ್ತ ಪಡಿ ಸಿದರು. ನಾನು ಸಿನೆಮಾ ನೋಡದವ ಕೂಡ ಅದನ್ನು ನೋಡಿದ್ದೇನೆ. ಉತ್ತಮ ಸಂದೇಶವಿರುವ ಈ ಚಿತ್ರವನ್ನು ಶಿಕ್ಷಕರ ಜತೆಗೆ ವಿದ್ಯಾರ್ಥಿಗಳು ನೋಡಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Cricket; ವೇಗಿ ಸಿದ್ದಾರ್ಥ್ ಕೌಲ್ ನಿವೃತ್ತಿ
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.