ಘನತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಆಮೆಗತಿಯಲ್ಲಿ
Team Udayavani, Nov 15, 2017, 5:04 PM IST
ಸವಣೂರು: ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ನಾಡೋಳಿಯಲ್ಲಿ ನಿರ್ಮಾಣವಾಗುವ ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ.
2015ರ ಮೇ ತಿಂಗಳಲ್ಲಿ ಇದರ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸ್ವಚ್ಛ ಭಾರತ ಪರಿಕಲ್ಪನೆಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳು ಅತ್ಯಾವಶ್ಯಕ. ಆದರೆ ನಿಧಾನಗತಿಯ ಕಾಮಗಾರಿಯಿಂದಾಗಿ ಉತ್ತಮ ಉದ್ದೇಶದ ಯೋಜನೆಯೊಂದು ಕುಂಟುತ್ತಾ ಸಾಗುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಘಟಕ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್‌ನಿಂದ 13 ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿತ್ತು. ಘಟಕದ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಆದರೆ ಮಂಜೂರುಗೊಂಡ ಅನುದಾನ ಬಿಡುಗಡೆಯಾಗದೇ ಇರುವುದು ಕಾಮಗಾರಿ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಈಗ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕಾಗಿ 1 ಎಕ್ರೆ ಜಾಗವನ್ನು ನೀಡಲಾಗಿದೆ. ಜತೆಗೆ ಸವಣೂರು ಗ್ರಾ.ಪಂ.ನಿಂದ 3 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದ್ದು, ಜಾಗ ಸಮತಟ್ಟು ಮಾಡಲಾಗಿದೆ. ಕಸ ಸಾಗಾಟ ವಾಹನ ಖರೀದಿ ಮಾಡಲು 3.25 ಲಕ್ಷ ಹಾಗೂ ಕಸ ವಿಲೇವಾರಿ ಯಂತ್ರ ಖರೀದಿಗೆ 1.75 ಲಕ್ಷ ರೂ.ಗಳನ್ನು ಜಿಲ್ಲಾ ಪಂಚಾಯತ್ ಬಿಡುಗಡೆ ಮಾಡಿದೆ.
ಕಾಮಗಾರಿ ಪೂರ್ಣಗೊಂಡಿಲ್ಲ
ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿ ಆರಂಭಗೊಂಡು 2 ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಸ್ವಚ್ಛ ಭಾರತ, ಸ್ವತ್ಛ ಗ್ರಾಮ ನಿರ್ಮಾಣದಲ್ಲಿ ಕಸ ವಿಲೇವಾರಿಯೂ ಪ್ರಮುಖವಾದದ್ದು. ಕಾಮಗಾರಿ ಬೇಗ ಪೂರ್ಣಗೊಂಡರೆ ಕಸದ ಸಮಸ್ಯೆ ನಿವಾರಣೆಯಾಗಲಿದೆ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥ ಕೃಷ್ಣಪ್ಪ ಪಾಲ್ತಾಡಿ.
ಒಟ್ಟಿನಲ್ಲಿ ಕಾಮಗಾರಿ ಪೂರ್ಣವಾಗದೇ ಉತ್ತಮ ಯೋಜನೆಯೊಂದು ಹಳ್ಳ ಹಿಡಿದಂತಾಗಿದೆ. ಜಿಲ್ಲಾ ಪಂಚಾಯತ್‌ನಿಂದ ಬಾಕಿಯಿದ್ದ ಅನುದಾನ ಬಿಡುಗಡೆಯಾಗಿದೆ. ಇನ್ನಾದರೂ ಕಾಮಗಾರಿಗೆ ವೇಗ ದೊರಕ ಬಹುದು ಎಂಬುದು ಸಾರ್ವಜನಿಕರ ಆಶಯ.
ಕಸ ಸಂಗ್ರಹ
ಅಂಗಡಿಗಳಿಂದ ಗ್ರಾ.ಪಂ. ಈಗಾಗಲೇ ಕಸ ಸಂಗ್ರಹ ಮಾಡುತ್ತಿದೆ. ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾದ ಬಳಿಕ ಒಣ ಕಸ, ಹಸಿ ಕಸವನ್ನು ಪ್ರತ್ಯೇಕಿಸಿ ವಿಲೇವಾರಿ ಮಾಡಲಾಗುತ್ತದೆ. ಜತೆಗೆ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ ಯೋಜನೆಯನ್ನೂ ಗ್ರಾ.ಪಂ.ಆರಂಭದಲ್ಲಿ ತಿಳಿಸಿತ್ತು.
ಪ್ರಯತ್ನಿಸುತ್ತೇವೆ
ಗ್ರಾ.ಪಂ.ಗೆ ಜಿ.ಪಂ.ನಿಂದ ಕಸ ಸಾಗಾಟ ವಾಹನ ಮತ್ತು ತ್ಯಾಜ್ಯ ವಿಲೇವಾರಿ ಯಂತ್ರ ಖರೀದಿಗೆ ಅನುದಾನ ಬಿಡುಗಡೆಯಾಗಿದೆ. ಘಟಕದ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದವರು ನಿರ್ವಹಣೆ ಮಾಡುತ್ತಾರೆ. ಆದಷ್ಟು ಬೇಗ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಳ್ಳುವಂತೆ ನಾವೂ ಪ್ರಯತ್ನಿಸುತ್ತಿದ್ದೇವೆ.
– ಇಂದಿರಾ ಬಿ.ಕೆ.,
ಅಧ್ಯಕ್ಷೆ ಸವಣೂರು ಗ್ರಾ.ಪಂ.
ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.