ದೇಶಕ್ಕೆ ಸೋನಿಯಾ ಗಾಂಧಿ ಸೇವೆ ಅವಶ್ಯ: ಪೂಜಾರಿ
Team Udayavani, Dec 11, 2017, 12:11 PM IST
ಮಹಾನಗರ: ಸೋನಿಯಾ ಗಾಂಧಿ ಬಡವರು, ದುರ್ಬಲವರ್ಗದ ಬಗ್ಗೆ ಆಪಾರ ಪ್ರೀತಿ ಹೊಂದಿದ್ದಾರೆ. ಅವರ ಸೇವೆ ದೇಶಕ್ಕೆ ಅಗತ್ಯವಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ರವಿವಾರ ನಗರದ ಅನಾಥಾಶ್ರಮ, ವೃದ್ಧಾಶ್ರಮಗಳು ಹಾಗೂ ವಿಶೇಷ ಶಾಲೆಯ ಮಕ್ಕಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿದರು.
ನೆಹರೂ ಕುಟುಂಬ ಎಲ್ಲ ಜಾತಿ, ಧರ್ಮದವರನ್ನು ಪ್ರೀತಿಸುತ್ತಾ ಬಂದಿದೆ ಮತ್ತು ಅವರ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇಂದಿರಾ ಗಾಂಧಿ ಗರೀಬಿ ಹಟಾವೋ, 20 ಅಂಶಗಳ ಕಾರ್ಯಕ್ರಮ ಸಹಿತ ಬಡವರ ಉದ್ಧಾರಕ್ಕೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ನನ್ನನ್ನು ವಿತ್ತ ಸಚಿವನನ್ನಾಗಿ ಮಾಡಿ ಆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಹೊಣೆಗಾರಿಕೆ ವಹಿಸಿದ್ದರು. ಇದನ್ನು ಸಮರ್ಪಣಾ ಭಾವದಿಂದ ಮಾಡಿದ ಆತ್ಮತೃಪ್ತಿ ನನಗಿದೆ ಎಂದರು. ದೇಶದ ಎಲ್ಲಾ ಜನಪ್ರತಿನಿಧಿಗಳು, ಸರಕಾರಗಳು ಬಡವರು, ದುರ್ಬಲರ ಪರವಾಗಿ ಕಾಳಜಿ ವಹಿಸಿ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಅದು ಅವರಿಗೆ ಸಾರ್ಥಕತೆ ತಂದುಕೊಡುತ್ತದೆ ಎಂದರು.
ಬಂದರಿನಲ್ಲಿರುವ ಯತಿಂಖಾನ, ಜಪ್ಪು ಸೈಂಟ್ ಜೋಸೆಫ್ ಪ್ರಶಾಂತ್ ನಿವಾಸ, ಸೈಂಟ್ ಆ್ಯಂಟನಿ ಆಶ್ರಮ, ಅಸೈಗೋಳಿಯ ಅಭಯಾಶ್ರಯ ಹಾಗೂ ಶಕ್ತಿನಗರದ ಸಾನಿಧ್ಯ ವಿಶೇಷ ಮಕ್ಕಳ ಶಾಲೆಗೆ ಭೇಟಿ ಹಣ್ಣು ಹಂಪಲು ವಿತರಿಸಲಾಯಿತು.
ಶಾಸಕ ಜೆ.ಆರ್. ಲೋಬೋ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಮಾಜಿ ಮೇಯರ್‌ಗಳಾದ ಜೇಸಿಂತಾ ವಿಜಯ ಆಲ್ಫ್ರೆಡ್, ಕೆ.ಅಶ್ರಫ್, ಮಾಜಿ ಉಪಮೇಯರ್‌ಗಳಾದ ಲ್ಯಾನ್ಸ್ ಲಾಟ್ ಪಿಂಟೋ, ಪುರುಷೋತ್ತಮ ಚಿತ್ರಾಪುರ, ಕಾರ್ಪೊರೇಟರ್‌ಗಳಾದ ಅಪ್ಪಿ, ಪ್ರತಿಭಾ ಕುಳಾಯಿ, ಶೈಲಜಾ, ಕೆಎಸ್‌ಆರ್‌ಟಿಸಿ ನಿಗಮದ ನಿರ್ದೇಶಕ ಟಿ.ಕೆ.ಸುಧೀರ್, ಮುಖಂಡರಾದ ವಿಶ್ವಾಸ್ ದಾಸ್, ಮೋಹನ ಶೆಟ್ಟಿ, ಕರುಣಾಕರ ಶೆಟ್ಟಿ, ರಮಾನಂದ ಪೂಜಾರಿ, ನೀರಜ್ ಪಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.