ಗ್ರಾಮೀಣ ಭಾಗಕ್ಕೆ  ಸರಕಾರದಿಂದ ವಿಶೇಷ ಪ್ಯಾಕೇಜ್‌: ಶಾಸಕ ಅಭಯಚಂದ್ರ

Team Udayavani, Nov 19, 2017, 11:08 AM IST

19-Nov-7.jpg

ಪಡುಪಣಂಬೂರು: ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದಂತೆ ಗ್ರಾಮೀಣ ಭಾಗಕ್ಕೆ ವಿಶೇಷ ಆದ್ಯತೆ ನೀಡಿರುವುದರಿಂದ ವಿಶೇಷ ಪ್ಯಾಕೇಜ್‌ ಹಳ್ಳಿಗಳ ರಸ್ತೆಯ ಅಭಿವೃದ್ಧಿಗೆ ಸಹಕಾರಿ ಆಗಿದೆ. ರಾಜ್ಯ ಸರಕಾರದ ಸಾಧನೆಯನ್ನು ಗ್ರಾಮೀಣ ಜನತೆಯು ಸಹ ಮುಕ್ತವಾಗಿ ಸ್ವಾಗತಿಸಿದ್ದಾರೆ ಎಂದು ಶಾಸಕ ಕೆ.ಅಭಯಚಂದ್ರ ಜೈನ್‌ ಹೇಳಿದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ನ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡಿನ ಪೂಪಾಡಿಕಟ್ಟೆ ರಸ್ತೆಗೆ ನ.18ರಂದು ವಿವಿಧ ಯೋಜನೆಗಳಿಂದ 85 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಗರಿಷ್ಠ ಅನುದಾನ
ಸರಕಾರದ ಎಲ್ಲ ಅಭಿವೃದ್ಧಿ ಯೋಜನೆಗಳು ನಿಯಮಿತ ಕಾಲ ಮಿತಿಯಲ್ಲಿ ನಡೆಯಬೇಕು, ಕಳೆದ ನಾಲ್ಕು ವರ್ಷದಿಂದ ಅತಿ ಹೆಚ್ಚು ಅನುದಾನಗಳು ಕ್ಷೇತ್ರದಲ್ಲಿ ವಿನಿಯೋಗಿಸಲಾಗಿದೆ. ಹಿಂದಿನ ಯಾವುದೇ ಸರಕಾರವೂ ಇಷ್ಟೊಂದು ಗರಿಷ್ಠ ಅನುದಾನವನ್ನು ನೀಡಿಲ್ಲ, ಜನನಿಬಿಡ ರಸ್ತೆಗಳು ಡಾಮರೀಕರಣಕ್ಕಿಂತ ಹೆಚ್ಚಾಗಿ ಕಾಂಕ್ರೀಟಿಕರಣಗೊಂಡರೆ ಮಾತ್ರ ಅದರ ಭವಿಷ್ಯ ಹೆಚ್ಚು ಎಂದರು. ಗ್ರಾ.ಪಂ. ಮಾಜಿ ಸದಸ್ಯೆ ಯಶೋದಾ ಪೂಜಾರಿ ತೆಂಗಿನಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್‌. ವಸಂತ ಬೆರ್ನಾಡ್‌, ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು, ಮೂಲ್ಕಿ ನ.ಪಂ. ಸದಸ್ಯರಾದ ಬಿ.ಎಂ. ಆಸಿಫ್‌, ಪುತ್ತು ಬಾವ, ಅಶೋಕ್‌ ಪೂಜಾರ್‌, ಬಶೀರ್‌ ಕುಳಾಯಿ, ಹಳೆಯಂಗಡಿ ಗ್ರಾ.ಪಂ. ಸದಸ್ಯರಾದ ಅಬ್ದುಲ್‌ ಖಾದರ್‌, ಅಬ್ದುಲ್‌ ಅಝೀಜ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ, ಕೋಶಾಧಿಕಾರಿ ನಂದಾ ಪಾಯಸ್‌, ಮೂಲ್ಕಿ ಬ್ಲಾಕ್‌ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುನೀತಾ ರೋಡ್ರಿಗಸ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಮೂಲ್ಕಿ, ಪಡುಪಣಂಬೂರು ಗ್ರಾ.ಪಂ. ಸದಸ್ಯ ಉಮೇಶ್‌ ಪೂಜಾರಿ, ಮಾಜಿ ಸದಸ್ಯ ನಾಗೇಶ್‌ ಬಂಜನ್‌, ಮೆಸ್ಕಾಂ ಸಲಹೆಗಾರರಾದ ಧರ್ಮಾನಂದ ಶೆಟ್ಟಿಗಾರ್‌ ತೋಕೂರು, ಲತಾ ಕಲ್ಲಾಪು, ವಾಹಿದ್‌ ತೋಕೂರು, ಮಾಜಿ ತಾ.ಪಂ. ಸದಸ್ಯ ರಾಜು ಕುಂದರ್‌, ಪ್ರಮುಖರಾದ ದಿನೇಶ್‌ ಸುವರ್ಣ, ಲೋಕೇಶ್‌ ಕೋಟ್ಯಾನ್‌, ಗ್ರಾಮಸ್ಥರಾದ ದಿವಾಕರ ಶೆಟ್ಟಿಗಾರ್‌, ರವೀಂದ್ರನ್‌, ಅಶೋಕ್‌ ದೇವಾಡಿಗ, ಕೆ.ಆರ್‌.ಐ.ಡಿ.ಎಲ್‌.ನ ಎಂಜಿನಿಯರ್‌ ಪ್ರಜ್ವಲ್‌ ಮತ್ತಿತರರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್‌ ಅಧ್ಯಕ್ಷರಾದ ಸವಿತಾ ಶರತ್‌ ಬೆಳ್ಳಾಯರು ಸ್ವಾಗತಿಸಿದರು, ಬೆಳ್ಳಾಯರು ಬೂತ್‌ ಅಧ್ಯಕ್ಷ ಸತೀಶ್‌ ಮಡಿವಾಳ ವಂದಿಸಿದರು.

85 ಲಕ್ಷ ರೂ. ವೆಚ್ಚದಲ್ಲಿ…
ಮುಖ್ಯಮಂತ್ರಿಗಳ ಗ್ರಾಮಾಭಿವೃದ್ಧಿಯ ವಿಶೇಷ ಯೋಜನೆಯಿಂದ 50 ಲಕ್ಷ ರೂ., ಪರಿಶಿಷ್ಟ ಪಂಗಡದ ವಿವೇಚನಾ ನಿ ಧಿಯ ಮೀಸಲು ಅನುದಾನದಿಂದ 25 ಲಕ್ಷ ರೂ., ಬೃಹತ್‌ ನೀರಾವರಿ ಸರಬರಾಜು ಯೋಜನೆಯ ಅಭಿವೃದ್ಧಿಯಿಂದ 10 ಲಕ್ಷ ರೂ.ಗಳ ಒಟ್ಟು 85 ಲಕ್ಷ ರೂ.ಗಳ ವೆಚ್ಚದಲ್ಲಿ ಎರಡು ತಿಂಗಳ ಕಾಲಾವ ಧಿಯಲ್ಲಿ ರಸ್ತೆಯು ಸಂಪೂರ್ಣ ಕಾಂಕ್ರೀಟಿಕರಣಗೊಳ್ಳಲಿದೆ.
ಕೆ.ಅಭಯಚಂದ್ರ ಜೈನ್‌,
  ಶಾಸಕರು,

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

ವಿಶಿಷ್ಟ ವಿಚಾರ ಚಿಂತನ ಮಂಥನ : ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

ವಿಶಿಷ್ಟ ವಿಚಾರ ಚಿಂತನ ಮಂಥನ: ಮಂಗಳೂರು ಲಿಟ್‌ಫೆಸ್ಟ್‌ ಇಂದಿನಿಂದ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.