ಅಪಾಯದ ಕರೆಗಂಟೆ ಬಾರಿಸುತ್ತಿವೆ ಕಲ್ಲಿನ ಕೋರೆಗಳು


Team Udayavani, Jun 6, 2018, 2:05 AM IST

kallu-kore-5-6.jpg

ಮಹಾನಗರ: ಮುಂಗಾರು ಹತ್ತಿರವಾಗುತ್ತಿದ್ದಂತೆ ಕಲ್ಲಿನ ಕೋರೆಗಳು ಮತ್ತೆ ನೆನಪಾಗುತ್ತಿವೆ. ಕೆಲವು ವರ್ಷಗಳಿಂದ ಒಂದಿಲ್ಲೊಂದು ಜೀವಹಾನಿಗೆ ಕಾರಣವಾಗುವ ಅಪಾಯಕಾರಿ ಕಲ್ಲಿನ ಕೋರೆಗಳು ಮತ್ತೆ ಆತಂಕ ಸೃಷ್ಟಿಸಲು ತಯಾರಾದಂತಿವೆೆ. ಮಳೆಗಾಲದಲ್ಲಿ ನೀರು ತುಂಬಿದ ಕೋರೆಯ ಸುತ್ತ ತಡೆಬೇಲಿ ಹಾಕಿ ಸೂಕ್ತ ಭದ್ರತೆ ಕೈಗೊಳ್ಳುವಂತೆ ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದ್ದರೂ ಇನ್ನೂ ಇದು ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲ.

ಕಲ್ಲಿನ ಕೋರೆ ಮಾಡಬೇಕಿದ್ದರೆ ಕಂದಾಯ ಮತ್ತು ಅರಣ್ಯ ಇಲಾಖೆಯವರಿಂದ ನಿರಾಕ್ಷೇಪಣಾ ಪತ್ರ ಪಡೆದು ಜಾಗವನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಜತೆ ಲೀಸ್‌ ನಲ್ಲಿ ಒಪ್ಪಂದ ಮಾಡಿಕೊಂಡಿರಬೇಕು. ಆದರೆ ಅನೇಕ ಪ್ರಕರಣಗಳಲ್ಲಿ ಈ ರೀತಿ ಲೀಸ್‌ ಪಡೆಯದೆ ಬೇಕಾಬಿಟ್ಟಿ ಹೊಂಡ ತೆಗೆಯಲಾಗಿದೆ. ಇಂತಹ ಕೋರೆಯ ಮೂಲಕ ಕಲ್ಲು ತೆಗೆದು ಬೃಹತ್‌ ಗಾತ್ರದ ಹೊಂಡಗಳೇ ನಿರ್ಮಾಣವಾಗುತ್ತವೆೆ. ಮಳೆಗಾಲದ ಸಂದರ್ಭ ಇಲ್ಲಿ ಮಳೆ ನೀರು ಸಂಗ್ರಹವಾಗುತ್ತದೆ. ಆದರೆ, ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಆಟವಾಡಲು ಅಥವಾ ಇತರ ಕಾರಣಕ್ಕಾಗಿ ಹೋದ ಕೆಲವರು ಕಲ್ಲಿನ ಕೋರೆಗೆ ಬಿದ್ದ ಮೃತಪಟ್ಟ ಘಟನೆ ನಮ್ಮ ಕಣ್ಣ ಮುಂದಿದೆ. ಹೆಚ್ಚಾ ಕಡಿಮೆ ಕಳೆದ 5 ವರ್ಷದ ಸಮಯದಲ್ಲಿ ಸುಮಾರು 15ಕ್ಕಿಂತಲೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ.

ಅಪಾಯಕಾರಿಯಾಗಿರುವ ಕಲ್ಲಿನ ಕೋರೆಯನ್ನು ಮುಚ್ಚುವಂತೆ ಹಾಗೂ ನೀರು ನಿಂತ ಕೋರೆಗಳ ಸುತ್ತ ಸೂಕ್ತ ತಡೆಬೇಲಿಯೊಂದಿಗೆ ಭದ್ರತೆ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಪೂರ್ಣ ರೀತಿಯಲ್ಲಿ ಇದು ಪಾಲನೆಯಾಗಿಲ್ಲ. ಹೀಗಾಗಿ ಅಪಾಯದ ಸೂಚನೆ ಸ್ಪಷವಾಗುತ್ತಿದೆ. ಸ್ಥಳೀಯ ಆಡಳಿತ ಈ ಸಂಬಂಧ ಕ್ರಮ ಕೈಗೊಂಡರೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ.

ಹೊಂಡ ತೆಗೆಯುತ್ತಿದೆ ಜೀವ!
ಖಾಸಗಿ ಪಟ್ಟಾ ಜಮೀನನ್ನು ಕಲ್ಲು ತೆಗೆಯಲು ಕೊಡುವುದು ಕೂಡಾ ಒಳ್ಳೆಯ ಆದಾಯ ತರುತ್ತದೆ ಎಂಬ ಕಾರಣಕ್ಕೆ ಜಿಲ್ಲೆಯ ಜನ ಇದಕ್ಕೆ ಮುಂದಾಗುತ್ತಾರೆ. ಜಮೀನಿನ ಮಧ್ಯೆ ಎಲ್ಲೋ ಖಾಲಿ ಜಾಗವನ್ನು ಈ ರೀತಿ ಕೋರೆಗಾಗಿ ಗುತ್ತಿಗೆದಾರರಿಗೆ ಕೊಡುತ್ತಾರೆ. ಕಲ್ಲು ಕೋರೆಯವರು ಮೊದಲು ಕಲ್ಲು ಹೇಗಿದೆ ಎಂದು ನೋಡಲು ಹೊಂಡ ಮಾಡುತ್ತಾರೆ, ಕಲ್ಲು ಚೆನ್ನಾಗಿದ್ದಾರೆ ಮುಂದುವರಿಯುತ್ತಾರೆ, ಇಲ್ಲವಾದರೆ ಹಾಗೇ ಬಿಟ್ಟು ಹೋಗುತ್ತಾರೆ. ಇಂತಹ ಹೊಂಡವೇ ಅನೇಕ ಜೀವ ತೆಗೆದು ಉದಾಹರಣೆ ಕಣ್ಣಮುಂದಿದೆ. ಮೂಡಬಿದಿರೆಯ ಬೆಳುವಾಯಿಯಲ್ಲಿ 6 ಮಕ್ಕಳು ಇದರಿಂದಾಗಿ ಪ್ರಾಣ ಕಳೆದುಕೊಂಡಿದ್ದರು.

ಕೋರೆ ಕೆರೆಯಾಗುತ್ತಿದೆ!
ಸಾರ್ವಜನಿಕ ಜಾಗದಲ್ಲಿರುವ ದೊಡ್ಡ ಕೆಂಪುಕಲ್ಲು ಕೋರೆಗಳು ಅಪಾಯವನ್ನು ಸೃಷ್ಟಿಸಿದಂತೆಯೇ, ಖಾಸಗಿ ಜಾಗದಲ್ಲಿರುವ ಚಿಕ್ಕ, ಮಧ್ಯಮ ಗಾತ್ರದ ಕೋರೆಗಳು ಕೂಡ ಅಪಾಯದ ಸೂಚನೆ ನೀಡುತ್ತಿವೆ. ಯಾಕೆಂದರೆ ಖಾಸಗಿ ಜಾಗದಲ್ಲಿ ತೆಗೆದ ಸಣ್ಣ ಕೋರೆಗಳನ್ನು ಜನ ಕೆರೆಯ ರೀತಿಯಲ್ಲಿ ಬಳಸುವುದಕ್ಕಾಗಿ ಹಾಗೆಯೇ ಉಳಿಸಿಕೊಳ್ಳುತ್ತಾರೆ. ಅದಕ್ಕೆ ಸೂಕ್ತ ತಡೆಗೋಡೆ ಕಟ್ಟದಿದ್ದರೆ ಯಾರಾದರೂ ಬೀಳುವ ಅಪಾಯವಿರುತ್ತದೆ.

ನೀರು ಇಂಗಿಸುತ್ತಾರೆ!
ಮಳೆಗಾಲದಲ್ಲಿ ನೀರು ತುಂಬಿ ಬೃಹತ್‌ ಕೆರೆಗಳಾಗಿ ಪರಿವರ್ತನೆಯಾಗುವುದರಿಂದ ಜಿಲ್ಲಾಡಳಿತ ಇಂತಹ ಕೋರೆಗಳನ್ನೇ ಮುಚ್ಚಿಸುತ್ತದೆ. ಆದರೆ, ಇಂತಹ ಕೋರೆಯಲ್ಲಿಯೇ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಂಡು ಜಲಸಂರಕ್ಷಣೆ ಮಾಡಲು ಕೂಡ ಅವಕಾಶವಿದೆ ಎಂದು ಹಲವು ಕೃಷಿಕರು ಮಾಡಿ ತೋರಿಸಿದ್ದಾರೆ. ತಮ್ಮ ಭೂಮಿಯಲ್ಲಿರುವ ನಿರುಪಯುಕ್ತ ಕಲ್ಲಿನ ಕೋರೆಗಳಲ್ಲಿ ನಾಲ್ಕೂ ಸುತ್ತಲು ಬೇಲಿ ಹಾಕಿ ಮಳೆ ನೀರು ಸಂಗ್ರಹಿಸಿ ನೀರು ಇಂಗಿಸುವಂತೆ ಮಾಡುವ ವಿಶೇಷ ಪ್ರಯತ್ನ ಕೂಡ ಸದ್ದಿಲ್ಲದೆ ನಡೆಯುತ್ತಿದೆ.

ಎಲ್ಲೆಲ್ಲಿವೆ ಕೋರೆಗಳು?
ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಕಲ್ಲಿನ ಕೋರೆಗಳಿವೆ. ನೂರಾರು ಮಂದಿ ಇದರಿಂದಾಗಿ ಜೀವನ ನಿರ್ವಹಿಸುತ್ತಿದ್ದಾರೆ. ಮಂಗಳೂರು, ಮೂಡಬಿದಿರೆ ತಾಲೂಕಿನ ಆದ್ಯಪಾಡಿ, ಬಡಗ ಎಕ್ಕಾರು, ಕೊಂಪದವು, ಪುತ್ತಿಗೆ, ಬೆಳುವಾಯಿ, ತೆಂಕಮಿಜಾರು, ತೆಂಕ ಎಕ್ಕಾರು, ಮುನ್ನೂರು, ಬಂಟ್ವಾಳ ತಾಲೂಕಿನ ಕರಿಯಂಗಳ, ಮಂಚಿ, ಕಸಬಾ, ಇರಾ, ನರಿಂಗಾನ, ಬೆಳ್ತಂಗಡಿ ತಾಲೂಕಿನ ಕಣಿಯೂರು, ಧರ್ಮಸ್ಥಳ, ತಣ್ಣೀರುಪಂತ, ಪಾರಂಕಿ, ಪುತ್ತೂರು ತಾಲೂಕಿನ ಮುಟ್ನೂರು, ಅರಿಯಡ್ಕ, ಬಡಗನ್ನೂರು, ನೆಟ್ಟಣಿಗೆ ಮುಟ್ನೂರು, ಬನ್ನೂರು, ಐತೂರು, ಪಾಣಾಜೆ, ಬೆಟ್ಟಂಪಾಡಿ, ರಾಮಕುಂಜ, ಹಳೆನೇರಂಕಿ, ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು, ಜಾಲ್ಸೂರು, ಸುಳ್ಯ, ನಾಲ್ಕೂರು, ಆರಂತೋಡು, ಅಮರಮುಟ್ನೂರು, ಕಲ್ಮಕಾರು, ಕೋಡಿಯಾಳ, ಗುತ್ತಿಗಾರು, ಕಲ್ಮಡ್ಕ ಮುಂತಾದ ಕಡೆಗಳಲ್ಲಿ ಕಲ್ಲಿನ ಕೋರೆಗಳಿವೆ. ಇಲ್ಲಿ ಎಲ್ಲ ಕಡೆ ಅಪಾಯ ಎಂದಲ್ಲ. ಆದರೆ, ಕೆಲವು ಕಡೆಗಳಲ್ಲಿ ಅಪಾಯವಿದೆ. 

ವಿಶೇಷ ವರದಿ

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.