ಮಾತಿನ ಮತ, ಸಂದರ್ಶನ
Team Udayavani, Mar 21, 2018, 3:35 PM IST
ದುಪ್ಪಟ್ಟು ಅಂತರದಿಂದ ಗೆಲ್ಲಿಸುವ ಉತ್ಸಾಹದಲ್ಲಿದ್ದಾರೆ ಕಾರ್ಯಕರ್ತರು
ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಗ್ಗೆ ?
ಮಂಗಳೂರು ವಿಧಾನಸಭಾ ಕ್ಷೇತ್ರ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಲ್ಲಿದೆ. ರಸ್ತೆ ಅಭಿವೃದ್ಧಿಯೊಂದಿಗೆ ಮೂಲಸೌಕರ್ಯಗಳಲ್ಲಿ ಮುಂಚೂಣಿಯಲ್ಲಿದೆ. ಮುಖ್ಯವಾಗಿ ಉಳ್ಳಾಲ ವ್ಯಾಪ್ತಿಯಲ್ಲಿ ಕಡಲ್ಕೊರೆತ ಸಮಸ್ಯೆ, ಸುಸಜ್ಜಿತ ಆಸ್ಪತ್ರೆ, ರಸ್ತೆ ಅಭಿವೃದ್ಧಿಯಿಂದ ಮಂಗಳೂರು ನಗರಕ್ಕೆ ಅನುಗುಣವಾಗಿ ಇಲ್ಲಿ ಅಭಿವೃದ್ಧಿಯನ್ನು ಕಂಡಿದೆ.
ಕ್ಷೇತ್ರದ ಅಭ್ಯರ್ಥಿ ಯು.ಟಿ. ಖಾದರ್ ಕುರಿತು ?
ಮಾನವೀಯ ಮೌಲ್ಯದೊಂದಿಗೆ ಜಾತ್ಯತೀತವಾಗಿ ಕೆಲಸ ಮಾಡುವ ಓರ್ವ ಯುವ ಉತ್ಸಾಹಿ ನಾಯಕ. ಸಚಿವರಾಗಿದ್ದುಕೊಂಡು, ಸಾಮಾನ್ಯ ಜನರೊಂದಿಗೆ ಬೆರೆಯುವ ಗುಣ, ಅಭಿವೃದ್ಧಿಶೀಲ ಚಿಂತನೆಯಿಂದ ಈ ಪ್ರದೇಶದ ಎಲ್ಲ ಧರ್ಮದ ಜನರು ಖಾದರ್ ಅವರನ್ನು ಬೆಂಬಲಿಸುವುದರಲ್ಲಿ ಸಂದೇಹವಿಲ್ಲ. ಕ್ಷೇತ್ರದ ಅಬಿವೃದ್ಧಿ ಅವರಿಗೆ ಶ್ರೀರಕ್ಷೆಯಾಗಿದೆ.
ಕ್ಷೇತ್ರದಲ್ಲಿ ಸಂಚರಿಸಿ ಪ್ರಚಾರ ಕಾರ್ಯ ತಂತ್ರದ ಬಗ್ಗೆ ಯೋಜನೆ ರೂಪಿಸಿದ್ದೀರಾ ?
ಮಂಗಳೂರು ಕ್ಷೇತ್ರದ ಒಂದು ಹೋಬಳಿಯಾಗಿರುವ ಉಳ್ಳಾಲ ಬ್ಲಾಕ್‌ನ ಉಸ್ತುವಾರಿಯನ್ನು ನನಗೆ ನೀಡಲಾಗಿದೆ. ಈಗಾಗಲೇ ಬೂತ್‌ಮಟ್ಟದಲ್ಲಿ ಸಭೆಗಳು ನಡೆದಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ವಾರದ ನಡುವೆಯೂ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕಳೆದ ಚುನಾವಣೆಯಲ್ಲಿ ಪಡೆದ ಮತಗಳ ಅಂತರದಿಂದ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟು ಅಂತರದಲ್ಲಿ ಗೆಲ್ಲಿಸುವ ಉತ್ಸಾಹದಲ್ಲಿ ಕಾರ್ಯಕರ್ತರಿದ್ದಾರೆ. ಮನೆ ಮನೆ ಭೇಟಿಯ ಮೂಲಕ ಜನರನ್ನು ತಲುಪುವ ಕಾರ್ಯದಲ್ಲಿ ಕಾರ್ಯಕರ್ತರು ಚುನಾವಣಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಸ್ಥಳೀಯ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪ್ರಚಾರದ ದೃಷ್ಟಿಯಲ್ಲಿ ಹೇಗೆ ಸಂಘಟಿಸುತ್ತಿದ್ದೀರಿ?
ಉಳ್ಳಾಲ ಬ್ಲಾಕ್‌ನಲ್ಲಿ ಅತ್ಯುತ್ತಮ ನಾಯಕರಿದ್ದಾರೆ. ಸ್ಥಳೀಯ ಹಿರಿಯ ಕಾಂಗ್ರೆಸ್ ನಾಯಕರು, ಉಳ್ಳಾಲ ಬ್ಲಾಕ್ ಅಧ್ಯಕ್ಷರಿಂದ ಹಿಡಿದು ಗ್ರಾಮ ಮಟ್ಟದ ನಾಯಕರು ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಹಿಳಾ ಕಾಂಗ್ರೆಸ್ ಮತ್ತು ಇತರ ವಿಭಾಗಗಳು ಬಲಿಷ್ಠವಾಗಿರುವುದರಿಂದ ಚುನಾವಣಾ ಪ್ರಚಾರದಲ್ಲಿ ಯುವ ಪಡೆಯೇ ಸಿದ್ಧವಾಗಿದ್ದು, ಪ್ರಚಾರ ಕಾರ್ಯದಲ್ಲಿ ಸಹಕಾರಿಯಾಗಲಿದ್ದು, ಯು.ಟಿ. ಖಾದರ್ ಕಳೆದ ಬಾರಿಗಿಂತ ಎರಡು ಪಟ್ಟು ಅಂತರದಲ್ಲಿ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ.
ವಸಂತ ಕೊಣಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.