ಪಾಠದಂತೆ ಕ್ರೀಡೆಗೂ ಆದ್ಯತೆ ನೀಡಿ: ವಸಂತ ಬಂಗೇರ
Team Udayavani, Aug 23, 2017, 8:15 AM IST
ಬೆಳ್ತಂಗಡಿ: ಪಾಠಕ್ಕೆ ಆದ್ಯತೆ ನೀಡಿದಂತೆ ಕ್ರೀಡೆಗೂ ಪ್ರಾಮುಖ್ಯ ನೀಡಬೇಕು. ಸೂಕ್ತ ತರಬೇತಿ ಪಡೆದು ಹಠದಿಂದ ಗುರಿ ಮುಟ್ಟುವ ಸಾಧನೆ ಮಾಡಬೇಕು ಎಂದು ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು. ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಧಕರಿಗೆ ಅಭಿನಂದನೆ
ರಾಷ್ಟ್ರೀಯ ಕ್ರೀಡಾಪಟುಗಳಾಗಿ ಚಿನ್ನದ ಪದಕ ಪಡೆದ ಶಕುಬಾಯಿ ಮತ್ತು ಸಾಲಿಯತ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತಾ ಕೆ., ಲಾೖಲ ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ನಾರಾವಿ ಸದಸ್ಯ ಪಿ. ಧರಣೇಂದ್ರ ಕುಮಾರ್, ಕಬಡ್ಡಿ ಆ್ಯತ್ಲೆಟಿಕ್ ಫೆಡರೇಶನ್‌ನ ಪ್ರಭಾಕರ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು. ಜಯಾನಂದ ಲಾೖಲ ಕಾರ್ಯಕ್ರಮ ನಿರ್ವಹಿಸಿ, ತಾಲೂಕು ಪಂಚಾಯತ್ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಪ್ರಭಾಕರ ನಾರಾವಿ ಸ್ವಾಗತಿಸಿದರು. ಇತ್ತೀಚೆಗೆ ನಿಧನಹೊಂದಿದ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಜೆ. ಕೊಕ್ರಾಡಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಕ್ರೀಡೆಯಲ್ಲಿ ಸಾಧನೆಗೆ ಪ್ರಯತ್ನಿಸಿ
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮುಖ್ಯ. ಅಂತೆಯೇ ಕ್ರೀಡಾಳುಗಳು ವಿದ್ಯಾವಂತರಾಗಿ, ಬುದ್ಧಿವಂತರಾಗಿ ಬೆಳೆಯಲು ಸಾಧ್ಯ. ಕ್ರೀಡಾಪಟುಗಳು ತಾಲೂಕು, ವಿಭಾಗ, ಜಿಲ್ಲೆ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೆ ಪ್ರಯತ್ನ ಮಾಡಬೇಕು.
– ಕೆ. ವಸಂತ ಬಂಗೇರ, ಶಾಸಕ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.