ಶ್ರೀ ಕಾರಿಂಜೇಶ್ವರ ದೇವಸ್ಥಾನ: ಆಟಿ ಅಮಾವಾಸ್ಯೆ ತೀರ್ಥಸ್ನಾನ
Team Udayavani, Jul 24, 2017, 5:05 AM IST
ಪುಂಜಾಲಕಟ್ಟೆ : ಬಂಟ್ವಾಳ ತಾ| ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ರವಿವಾರ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ , ವಿಶೇಷ ಉತ್ಸವ ಜರಗಿತು.
ಭಕ್ತರು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು ತೀರ್ಥಗಳೆಂಬ ಕೆರೆಗಳಲ್ಲಿ ತೀರ್ಥ
ಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತಿ-ಪರಮೇಶ್ವರರ ದರ್ಶನ ಮಾಡಿದರು. ನವದಂಪತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ಪುಣ್ಯಸ್ನಾನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ ನಟರಾಜ
ಉಪಾಧ್ಯಾಯ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರಗಿದವು. ಮುಂಜಾನೆ ಸುಮಾರು 3 ಗಂಟೆಯಿಂದ ದೇವರ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಮಳೆ ಬಿಟ್ಟ ಕಾರಣ ದೂರದ ಊರುಗಳಿಂದ ಭಕ್ತರು ಆಗಮಿಸಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.
ಶ್ರೀ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಜಿನರಾಜ ಆರಿಗ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸದಾಶಿವ ಪ್ರಭು, ಪಿ. ವಿಶ್ವನಾಥ ಪೂಜಾರಿ, ಕೃಷ್ಣಪ್ಪ ಗೌಡ, ಜನಾರ್ದನ ಆಚಾರ್ಯ, ವೆಂಕಪ್ಪ ನಾಯ್ಕ, ಸುಜಲಾ ವಿ. ಶೆಟ್ಟಿ, ಸವಿತಾ ಚಂದ್ರಶೇಖರ ಮತ್ತು ಸಿಬಂದಿ ಸಹಕರಿಸಿದ್ದರು. ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ತಾಲೂಕು ಅಕ್ರಮ -ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಮಾಜಿ ಅಧ್ಯಕ್ಷ ಮಾಣಿಕ್ಯರಾಜ್ ಜೈನ್, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಗ್ರಾ.ಪಂ. ಸದಸ್ಯ ಚಂದ್ರಶೇಖರ ಕರ್ಣ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.