ಶ್ರೀ ಕಾರಿಂಜೇಶ್ವರ ದೇವಸ್ಥಾನ: ಸೌರಮಾನ ಯುಗಾದಿ ಉತ್ಸವ
Team Udayavani, Apr 16, 2018, 3:06 PM IST
ಪುಂಜಾಲಕಟ್ಟೆ: ಭೂ ಕೈಲಾಸ ಪ್ರತೀತಿಯ ಕಾವಳ ಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಉತ್ಸವ ರವಿವಾರ ನಡೆಯಿತು.
ಬೆಳಗ್ಗೆ ಶ್ರೀ ಕಾರಿಂಜೇಶ್ವರ ಸನ್ನಿಧಿಯಿಂದ ಶ್ರೀ ಪರಮೇಶ್ವರ ದೇವರು ಇಳಿದು ಶ್ರೀ ಪಾರ್ವತಿ ಸನ್ನಿಧಿಗೆ ಆಗಮಿಸಿ ವಸಂತಕಟ್ಟೆಯಲ್ಲಿ ವಸಂತೋತ್ಸವ ನಡೆಯಿತು. ಶ್ರೀ ಕಾರಿಂಜೇಶ್ವರ ಮತ್ತು ಶ್ರೀ ಪಾರ್ವತಿ ಸನ್ನಿಧಿಯಲ್ಲಿ ಪ್ರಧಾನಅರ್ಚಕ ವೇ|ಮೂ| ನಟರಾಜ ಉಪಾಧ್ಯಾಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ಶ್ರೀ ಪಾರ್ವತಿ ಸನ್ನಿಧಿಯಲ್ಲಿ ರಥೋತ್ಸವ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳಿಗೆ ಫಲಾಹಾರ, ಪಾನೀಯ ವ್ಯವಸ್ಥೆಗೊಳಿಸಲಾಗಿತ್ತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ. ಜಿನರಾಜ ಆರಿಗ ಪಚ್ಚಾಜೆ ಗುತ್ತು, ಪ್ರಮುಖರಾದ ಗಣಪತಿ ಮುಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ, ಗ್ರಾಮಣಿ ವೆಂಕಟರಾಜ ಎಳಚಿತ್ತಾಯ, ಸದಸ್ಯರಾದ ಜನಾರ್ದನ ಆಚಾರ್ಯ ಬಾಳ್ತಬೈಲ್, ಸದಾಶಿವ ಪ್ರಭು, ಕೃಷ್ಣಪ್ಪ ಗೌಡ ತಾಳಿತ್ತೂಟ್ಟು, ವಿಶ್ವನಾಥ ಪೂಜಾರಿ ಪೀರ್ಯ, ವೆಂಕಪ್ಪ ನಾಯ್ಕ ಕಾರಿಂಜಬೈಲ್, ಸುಜಲಾ ಶೆಟ್ಟಿ, ಸವಿತಾ, ವ್ಯವಸ್ಥಾಪಕ ಸತೀಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.