ಗ್ರಾ. ಯೋಜನೆ ಅಧ್ಯಯನಕ್ಕೆ ಶ್ರೀಲಂಕಾ ತಂಡ
Team Udayavani, Jul 21, 2018, 2:37 PM IST
ಬೆಳ್ತಂಗಡಿ: ಶ್ರೀಲಂಕಾದ ಸನಸ ಸಹಕಾರ ಸಂಸ್ಥೆಯ 23 ಪ್ರತಿನಿಧಿಗಳು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಅಧ್ಯಯನ ನಡೆಸಲು ಮಂಗಳೂರು ಬರ್ಡ್ ಸಂಸ್ಥೆಯ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಮಲೆಬೆಟ್ಟು ಗ್ರಾಮದ ಮಾಂಜಲು ಪ್ರಗತಿಬಂಧು ತಂಡ ಹಾಗೂ ಸ್ವರ್ಣ ಸ್ವಸಹಾಯ ಸಂಘಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ತಂಡವು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆದಿದೆ. ಜತೆಗೆ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಹರ್ಷ ವ್ಯಕ್ತಪಡಿಸಿದೆ.
ಸ್ವರ್ಣ ಸ್ವಸಹಾಯ ಸಂಘದ ಸದಸ್ಯರು ನಡೆಸುವ ವಾರದ ಸಭೆ ಕುರಿತು ಪ್ರಾತ್ಯಕ್ಷಿಕೆ, ಸಂಘವು 18 ವರ್ಷಗಳಲ್ಲಿ ಕಂಡುಕೊಂಡ ಅಭಿವೃದ್ಧಿ ಕುರಿತು 10 ಮಂದಿ ಸದಸ್ಯರು ತಂಡದ ಮುಂದೆ ಅಭಿಪ್ರಾಯ ವ್ಯಕ್ತಪಡಿಸಿದರು. ಜತೆಗೆ ಗಾಂಜಲು ಪ್ರಗತಿ ಬಂಧು ಸಂಘದ 7 ಮಂದಿ ಸದಸ್ಯರು 25 ವರ್ಷಗಳಲ್ಲಿ ಪಡೆದುಕೊಂಡ ಪ್ರಯೋಜನಗಳ ಕುರಿತು ತಿಳಿಸಿದರು. ಇವರ ಸಾಧನೆಗೆ ಶ್ರೀಲಂಕಾ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ.
ಅಧ್ಯಯನ ಸಂದರ್ಭ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ರಾವ್, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಉಪನ್ಯಾಸಕ ಬಾಲಕೃಷ್ಣ ಮತ್ತು ನಬಾರ್ಡ್ ಸಂಸ್ಥೆ ಮಂಗಳೂರಿನ ಡಿಜಿಎಂ ಶ್ರೀಪತಿ ಕಲ್ಕರು, ಸರಸ್ವತಿ, ಮಲೆಬೆಟ್ಟು ಗ್ರಾಮದ ಸೇವಾ ಪ್ರತಿನಿಧಿ ಲೀಲಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.