ಫೆ. 23: ಅಮ್ಮ ಮಂಗಳೂರಿನಲ್ಲಿ: ಸಹಸ್ರಾರು ಭಕ್ತರಿಗೆ ವೈಯಕ್ತಿಕ ದರ್ಶನ

Team Udayavani, Feb 21, 2017, 2:35 PM IST

matha.jpg

ಮಂಗಳೂರು: ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರಲ್ಲೋರ್ವರಾದ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರು ಫೆ. 23ರಂದು ಮಂಗಳೂರಿಗೆ ಆಗಮಿಸಲಿದ್ದು, ಅಂದು ಸಂಜೆ 6ಕ್ಕೆ ನಗರದ ಬೋಳೂರು ಅಮೃತ ವಿದ್ಯಾಲಯಮ್‌ ವಠಾರದಲ್ಲಿ ನಡೆಯುವ ಅಮೃತ ಸಂಗಮ-2017 ಕಾರ್ಯಕ್ರಮದಲ್ಲಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.
ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಗೌರವಾಧ್ಯಕ್ಷ ವಾಮನ ಕಾಮತ್‌ ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರೇಮ, ತ್ಯಾಗ ಹಾಗೂ ಕಾರುಣ್ಯಭರಿತ ಹೃದಯ ವಾತ್ಸಲ್ಯದ ಸೇವೆಯ ಮೂಲಕ ಹಲವಾರು ಸಮಾಜಮುಖೀ ಯೋಜನೆಗಳೊಂದಿಗೆ ಹಗಲಿರುಳೆನ್ನದೆ ಶ್ರಮಿಸುವ ಅಮ್ಮ ಜನತೆಯ ಪಾಲಿಗೆ ಮಮತೆಯ ಮಾತೆಯಾಗಿದ್ದಾರೆ ಎಂದರು.

ಸಂಜೆ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಶ್ರೀಪಾದ್‌ ಯಸೊÕà ನಾೖಕ್‌, ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ, ಗೌರವ ಅತಿಥಿಗಳಾಗಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ. ಖಾದರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಜೆ.ಆರ್‌. ಲೋಬೊ, ವಿಧಾನ ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ, ವಿಪಕ್ಷದ ಮುಖ್ಯಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಮೇಯರ್‌ ಹರಿನಾಥ್‌ ಭಾಗವಹಿಸಲಿದ್ದಾರೆ ಎಂದರು.

ಸೇವಾ ಕಾರ್ಯಗಳು ಸಮಿತಿಯ ಮತ್ತೋರ್ವ ಗೌರವಾಧ್ಯಕ್ಷ ಡಾ| ಜೀವರಾಜ್‌ ಸೊರಕೆ ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ವಿವಿಧ ಸೇವಾ ಕಾರ್ಯಗಳು ನಡೆಯಲಿದ್ದು, ಅಂಗವಿಕಲರಿಗೆ ಗಾಲಿ ಕುರ್ಚಿ, ಅಮಲ ಭಾರತದ ಅಂಗವಾಗಿ ಕಸದ ಬುಟ್ಟಿ, ವಿದ್ಯಾರ್ಥಿವೇತನ, ಪಿಂಚಣಿ ಸೌಲಭ್ಯ ಹಾಗೂ ಹಿರಿಯ ನಾಗರಿಕರಿಗೆ ಅಮೃತ ಆಯುಷ್‌ ಕಿಟ್‌ ವಿತರಣೆ ನಡೆಯಲಿದೆ ಎಂದರು. 

ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಅಮೃತಶ್ರೀ ಮಹಿಳಾ ಸಶಕ್ತೀಕರಣ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಯೋಜನೆಯಲ್ಲಿ ಈಗಾಗಲೇ 5,000 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ಅಮಲ ಭಾರತ ಯೋಜನೆಯಲ್ಲಿ ಸ್ವತ್ಛತಾ ಕಾರ್ಯಕ್ರಮ ನಡೆಯುತ್ತಿದ್ದು, ಅದನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲಾಗುವುದು ಎಂದು ತಿಳಿಸಿದರು.

20,000 ಮಂದಿ ನಿರೀಕ್ಷೆ
ಈ ಬಾರಿ ಅಮ್ಮ ಮಂಗಳೂರಿನಲ್ಲಿ ಒಂದು ದಿನ ಮಾತ್ರ ದರ್ಶನ ನೀಡಲಿದ್ದು, ಸುಮಾರು 20,000 ಮಂದಿ
ಭಾಗವಹಿಸುವ ನಿರೀಕ್ಷೆ ಇದೆ. ಫೆ. 25ರಂದು ಉಡುಪಿಯ ಕಾರ್ಯ ಕ್ರಮದಲ್ಲಿ ಅಮ್ಮ ಭಾಗವಹಿಸಲಿದ್ದಾರೆ. 
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ವೈಯಕ್ತಿಕ ದರ್ಶನ ನೀಡಲಿದ್ದು, ಅದಕ್ಕಾಗಿ ಪ್ರತಿಯೊಬ್ಬರಿಗೂ ಸ್ಥಳದಲ್ಲೇ ಉಚಿತ ಟೋಕನ್‌ ನೀಡ ಲಾಗುತ್ತದೆ. ಬಳಿಕ ಅನ್ನಸಂತರ್ಪಣೆಯ ವ್ಯವಸ್ಥೆ ಇರುತ್ತದೆ. ಜತೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಕ್ಯಾಂಟೀನ್‌ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ, ನಗರದ ಬಸ್‌, ರೈಲು ನಿಲ್ದಾಣದಿಂದ ಸಾರಿಗೆ ವ್ಯವಸ್ಥೆ, ದೂರದ ಭಕ್ತರಿಗೆ ವಸತಿ ವ್ಯವಸ್ಥೆಯೂ ಇರುತ್ತದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷೆ ಶ್ರುತಿ ಸನತ್‌ ಹೆಗ್ಡೆ, ಕಾರ್ಯದರ್ಶಿ ಡಾ| ಅಶೋಕ್‌ ಶೆಣೈ, ಸ್ವಾಗತ ಸಮಿತಿಯ ಬದ್ರಿನಾಥ್‌ ಕಾಮತ್‌, ಮಾಧ್ಯಮ ಸಂಚಾಲಕ ಮಾಧವ ಸುವರ್ಣ ಉಪಸ್ಥಿತರಿದ್ದರು.

ದಿನಪೂರ್ತಿ ಕಾರ್ಯಕ್ರಮ
ಫೆ. 22ರಂದು ರಾತ್ರಿ ಅಮ್ಮ ಮಂಗಳೂರಿಗೆ ಆಗಮಿಸಲಿದ್ದು, ಫೆ. 23ರಂದು ಸಂಜೆ 6ರಿಂದ ಸತ್ಸಂಗ- ಭಜನೆ, ಪ್ರವಚನ, ಮಾನಸ ಪೂಜೆ, ಧ್ಯಾನ ಮತ್ತು ವೈಯಕ್ತಿಕ ದರ್ಶನ ನೀಡಲಿದ್ದಾರೆ. ಕಾರ್ಯಕ್ರಮದ ಅಂಗ ವಾಗಿ ಬ್ರಹ್ಮಸ್ಥಾನದಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದ್ದು, ಮಹಾಗಣಪತಿ ಹೋಮ, ನವಗ್ರಹ ಶಾಂತಿ ಹೋಮ, ಭಗವತಿ ಸೇವೆ, ಮಹಾಸುದರ್ಶನ ಹೋಮ, ಅಲಂಕಾರ ಪೂಜೆ ನಡೆಯಲಿದೆ.

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.