ಆಡಿದ್ದನ್ನು ಮಾಡಿ ತೋರಿಸಿದ ಗಟ್ಟಿಗ ಶ್ರೀಕೃಷ್ಣ ಶರ್ಮ

Team Udayavani, Apr 16, 2019, 6:15 AM IST

1504VTL-Shrikrishna-Sharma1

ವಿಟ್ಲ: ಪರೀಕ್ಷೆಯ ಅಂತಿಮ ಹಂತದಲ್ಲಿಯೇ ರಾಜ್ಯ ಮಟ್ಟದಲ್ಲಿ ರ್‍ಯಾಂಕ್‌ ನಿರೀಕ್ಷಿಸಿದ್ದೆ. ಪ್ರಥಮ ರ್‍ಯಾಂಕ್‌ ಬಂದಿರುವುದು ಸಂತಸವಾಗಿದೆ. ಮುಂದೆ ಬಿಕಾಂ ಜತೆಯಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದು ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಶ್ರೀಕೃಷ್ಣ ಶರ್ಮ ತಿಳಿಸಿದರು.

ಅವರು ಉದಯವಾಣಿ ಪ್ರತಿನಿಧಿ ಜತೆ ಮಾತನಾಡಿ, ಅಳಿಕೆ ಸಂಸ್ಥೆಯ ಉಪನ್ಯಾಸಕ ವೃಂದದ ಉತ್ತಮ ಬೋಧನೆ, ಸಂಪೂರ್ಣ ತೊಡಗಿಸುವಿಕೆ ಮತ್ತು ಅತ್ಯುತ್ತಮ ಮಾರ್ಗದರ್ಶನದಿಂದ ಹಾಗೂ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಹೆತ್ತವರ ಹಾಗೂ ಹಿರಿಯರೆಲ್ಲರ ಆಶೀರ್ವಾದದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ಅಳಿಕೆಯಲ್ಲಿ ಕಲಿತ ವಿಷಯಗಳನ್ನು ಮಾತ್ರ ಓದಿದ್ದೇನೆ. ಯಾವುದೇ ವಿಶೇಷ ತರಬೇತಿಗಳನ್ನಾಗಲಿ ಟ್ಯೂಷನ್‌ ಆಗಲಿ ಪಡೆದಿಲ್ಲ. ರಾಜ್ಯದಲ್ಲಿ ಪ್ರಥಮ ಸ್ಥಾನ ಬಂದುದಕ್ಕೆ ಅತೀವ ಸಂತಸವಾಗಿದೆ ಎಂದು ಹೇಳಿದರು.

ಶ್ರೀಕೃಷ್ಣ ಶರ್ಮ ಅವರು ಬದಿಯಡ್ಕ ಸಮೀಪದ ಪೆರಡಾಲ ಗ್ರಾಮದ ಕಡಪ್ಪು ನಿವಾಸಿ, ಕೃಷಿಕ ಸುಬ್ರಹ್ಮಣ್ಯ ಭಟ್‌ ಮತ್ತು ಗೃಹಿಣಿ ಶಾರದಾ ದಂಪತಿಯ ಏಕಮಾತ್ರ ಪುತ್ರ. ಶ್ರೀಕೃಷ್ಣ ಶರ್ಮ ಅವರು ಮನೆಯಿಂದಲೇ ಪ್ರತಿದಿನ ಅಳಿಕೆ ಕಾಲೇಜಿಗೆ ತೆರಳಿ ವಾಪಸಾಗುತ್ತಿದ್ದರು. ಮನೆಯಿಂದ ಬಸ್‌ ನಿಲ್ದಾಣಕ್ಕೆ ಒಂದು ಕಿ.ಮೀ. ದೂರ. ಸರಿಯಾದ ಸಮಯಕ್ಕೆ ಬಸ್‌ ಬಂದರೆ 5.45ಕ್ಕೆ ಮನೆಗೆ ತಲುಪುತ್ತಿದ್ದರು. ಇಲ್ಲವಾದಲ್ಲಿ 7 ಗಂಟೆಯಾಗುತ್ತಿತ್ತು.

ತಂದೆ ಸುಬ್ರಹ್ಮಣ್ಯ ಭಟ್‌ ಮಾತನಾಡಿ, ಪುತ್ರ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿ ರುವುದು ಅತ್ಯಂತ ಸಂತಸವಾಗಿದೆ. ಅವನ ಭವಿಷ್ಯ ಉತ್ತಮವಾಗಿ ರೂಪು ಗೊಳ್ಳುವುದಕ್ಕೆ ಅವನೇ ಮಾರ್ಗ ಕಂಡು ಕೊಂಡಿದ್ದಾನೆ ಎಂದರು.

ಮುಂದಿನ ವರ್ಷ ನನ್ನ ಫೋಟೋ ಬರಲಿದೆ ಎಂದಿದ್ದ ಮಗ ತಾಯಿ ಶಾರದಾ ಮಾತನಾಡಿ, ಅವನುಎಸೆಸೆಲ್ಸಿಯಲ್ಲಿ ರ್‍ಯಾಂಕ್‌ ಪಡೆಯಬೇಕಿತ್ತು. ಬಂದಿರಲಿಲ್ಲ. ಪಿಯುಸಿಯಲ್ಲಾ ದರೂ ಗಳಿಸಲೇಬೇಕು ಎಂಬ ಛಲ ಆತನಲ್ಲಿತ್ತು. ಅದನ್ನೀಗ ಸಾಧಿಸಿ ತೋರಿಸಿದ್ದಾನೆ. ಕಳೆದ ವರ್ಷ ಅಳಿಕೆಯ ಸಾಧಕ ವಿದ್ಯಾರ್ಥಿ ಸಮರ್ಥ್ ಅವರ ಫೋಟೋವನ್ನು ಪತ್ರಿಕೆಯಲ್ಲಿ ತೋರಿಸಿ, ಮುಂದಿನ ವರ್ಷ ಇದೇ ರೀತಿ ನನ್ನ ಫೋಟೋ ನೋಡಬಹುದಮ್ಮ ಎಂದಿದ್ದ. ಹಾಗೇ ಆಯಿತು. ಅತೀವ ಆನಂದವಾಗಿದೆ ಎಂದರು.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.