ಎಸೆಸೆಲ್ಸಿ ಪರೀಕ್ಷೆ: ಹೆಚ್ಚಿನ ಅಭ್ಯಾಸಕ್ಕೆ ಅಗತ್ಯ ಕ್ರಮ: ದ.ಕ. ಜಿಲ್ಲಾಧಿಕಾರಿ
Team Udayavani, Feb 25, 2022, 6:28 AM IST
ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷಾ ಪೂರ್ವ ಅಭ್ಯಾಸ ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳ ಪರಿಶೀಲನೆ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಕಳಪೆ ಸಾಧನೆಯ ಶಾಲೆಗಳ ಮಾಹಿತಿ ನೀಡಿ :
ಎಸೆಸೆಲ್ಸಿ ಪರೀಕ್ಷೆಯಲ್ಲಿ ಈ ಹಿಂದೆ ಕಳಪೆ ಸಾಧನೆ ಮಾಡಿದ ಶಾಲೆಗಳ ಪಟ್ಟಿ ಹಾಗೂ ಪ್ರಸಕ್ತ ಸಾಲಿನಲ್ಲಿ 10ನೇ ತರಗತಿಯಲ್ಲಿ ಗೈರು ಹಾಜರಾಗುತ್ತಿರುವ ಮಕ್ಕಳ ಶಾಲಾವಾರು ಪಟ್ಟಿ ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಯವರು, ಪ್ರತೀ ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವಲಯದಲ್ಲಿ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗೆ ಪೂರಕವಾಗುವ ವಿಶೇಷ ಚಟುವಟಿಕೆಯ ಮೂಲಕ ಅಭ್ಯಾಸ ಮಾಡಲು ಅಥವಾ ಸಾಹಿತ್ಯ ಅಭಿವೃದ್ಧಿ ಪಡಿಸುವುದಾದರೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಬರವಣಿಗೆ ಅಭ್ಯಾಸ ಮಾಡಲು ಬಫರ್ ಶೀಟ್ ಒದಗಿಸಲು ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಬಫರ್ ಶೀಟ್‌ಗಳ ಸಂಖ್ಯೆ ಹಾಗೂ ಅದಕ್ಕೆ ಬೇಕಾಗುವ ಅನುದಾನದ ಮೊತ್ತದ ಬೇಡಿಕೆ ಸಲ್ಲಿಸುವಂತೆಯೂ ಡಿಡಿಪಿಐಗೆ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಪುತ್ತೂರು ತಾಲೂಕಿನಲ್ಲಿ ಮೌಲ್ಯಮಾಪನ ಕೇಂದ್ರ ತೆರೆಯುವ ಬೇಡಿಕೆಗೆ ಎಸೆಸೆಲ್ಸಿ ಬೋರ್ಡ್ ಒಪ್ಪಿಗೆ ನೀಡಿದೆ. ಇದರಿಂದಾಗಿ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 274 ಖಾಸಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಕಲಿಕೆಗೆ ಸ್ಥಳಾವಕಾಶ :
ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಬೇಕು, ಕಲಿಕೆಯನ್ನು ಪ್ರೋತ್ಸಾಹಿಸಲು ಅವರ ವಾಸಸ್ಥಾನದ ಸಮೀಪವಿರುವ ಸಮುದಾಯ ಭವನ ಅಥವಾ ಗ್ರಾಮ ಪಂಚಾಯತ್‌ನ ಸಭಾಂಗಣದಲ್ಲಿ ಒಬ್ಬರು ಜವಾಬ್ದಾರಿಯುತ ಅಧಿಕಾರಿ ಅಥವಾ ನಿವೃತ್ತ ಶಿಕ್ಷಕರ ನೇತೃತ್ವದಲ್ಲಿ ಹೆಚ್ಚಿನ ಪರೀಕ್ಷಾ ಭ್ಯಾಸಗಳನ್ನು ಆಯೋಜಿಸುವುದಾದಲ್ಲಿ ಅದಕ್ಕೆ ಸೂಕ್ತ ಅವಕಾಶ ಮಾಡಿ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಲೆ ಕಟ್ಟಡ ದುರಸ್ತಿ :
1.50 ಲಕ್ಷ ರೂ. ಒಳಗೆ, 1.50ರಿಂದ 5 ಲಕ್ಷ ರೂ. ಹಾಗೂ 5 ಲಕ್ಷ ರೂ. ಮೇಲ್ಪಟ್ಟು ದುರಸ್ತಿಗೆ ಅಗತ್ಯವಿರುವ ಶಾಲೆಗಳ ಪಟ್ಟಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ಪ್ರತೀ ತಾಲೂಕಿನಲ್ಲಿ ಅತ್ಯಂತ ನಾದುರಸ್ತಿಯಲ್ಲಿರುವ 5 ಶಾಲೆಗಳ ವಿವರವಾದ ಮಾಹಿತಿಯನ್ನು ಮಾ. 2ರೊಳಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.