ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ; ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್

Team Udayavani, Mar 29, 2017, 2:17 AM IST

SSLC-30th.jpg

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಮಾ. 30ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಬೆಳಗ್ಗೆ 9.15ರಿಂದ 9.30ರ ಸಮಯದೊಳಗೆ ಪರೀಕ್ಷಾ ಕೊಠಡಿಗೆ ಹಾಜರಾಗಲು ಸಮಯ ನಿಗದಿಪಡಿಸಲಾಗಿದೆ. 15 ನಿಮಿಷಗಳ ವಿನಾಯಿತಿ ನೀಡಲಾಗಿದ್ದು 9.45ರವರೆಗೆ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅನುಮತಿ ಇರಲಿದೆ. ಈ ಹಿಂದೆ ಬೆಳಗ್ಗೆ 9.30ಕ್ಕೆ ಪರೀಕ್ಷೆ ಪ್ರಾರಂಭವಾದ ಅನಂತರ ತಡವಾಗಿ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಯ ಪ್ರವೇಶವನ್ನು ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 15 ನಿಮಿಷ ವಿನಾಯಿತಿ ನೀಡಲಾಗಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆಯುಕ್ತೆ ಸೌಜನ್ಯಾ, ರಾಜ್ಯಾದ್ಯಂತ ಒಟ್ಟು 8,77,174 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ರಾಜ್ಯದ 2,770 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಾಲಕರು 4,69,835 ಮತ್ತು ಬಾಲಕಿಯರು 4,07,339 ಸೇರಿದಂತೆ ಒಟ್ಟು 8,77,174 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದ ಅವರು, 72 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 17 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಗತ್ಯ ಬಂದೋಬಸ್ತ್ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಿ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ 226, ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ 564, ಅನುದಾನ ರಹಿತ ಕೇಂದ್ರಗಳಲ್ಲಿ 364 ಹೀಗೆ ಒಟ್ಟು 1,184 ಸಿಸಿ ಟಿವಿ ಕೆಮರಾಗಳನ್ನು ಅಳವಡಿಸಲಾಗಿದೆ.

ಜತೆಗೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಕೊಠಡಿಗಳಲ್ಲಿ, ಸರಕಾರಿ ಕೇಂದ್ರಗಳಲ್ಲಿ 233, ಅನುದಾನಿತ ಕೇಂದ್ರಗಳಲ್ಲಿ 659 ಹಾಗೂ ಅನುದಾನ ರಹಿತ ಕೇಂದ್ರಗಳಲ್ಲಿ 469 ಹೀಗೆ ಒಟ್ಟು 1,361 ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ನೋಂದಣಿಯಾಗಿರುವ ಪ್ರೌಢಶಾಲೆಗಳಲ್ಲಿ ಸರಕಾರಿ 5,163, ಅನುದಾನಿತ 3,301, ಅನುದಾನ ರಹಿತ 5,834 ಪ್ರೌಢಶಾಲೆಗಳ ಸಹಿತ ಒಟ್ಟು 14,298 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ವಿವರಿಸಿದರು.

ಪಿಯು ಮಾದರಿ ಉತ್ತರ ಪತ್ರಿಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಉತ್ತರ ಪತ್ರಿಕೆಗಳನ್ನು ಇಲಾಖಾ ವೆಬ್‌ಸೈಟ್‌: www.pue.kar.nic.inನಲ್ಲಿ ಬಿಟ್ಟಿದೆ. ವಿದ್ಯಾರ್ಥಿಗಳು ಮತ್ತು ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ಕನ್ನಡ, ಇಂಗ್ಲಿಷ್‌, ಹಿಂದಿ ಸಹಿತ 34 ವಿಷಯಗಳ ಮಾದರಿ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಬಹುದು ಎಂದು ಇಲಾಖೆ ನಿರ್ದೇಶಕಿ ಸಿ. ಶಿಖಾ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

SOMANNA-2

Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.