ಮಾತೃವಿಯೋಗದ ದುಃಖದ ನಡುವೆ ಪರೀಕ್ಷೆ ಬರೆದ ಧೀರೆ
Team Udayavani, Mar 29, 2019, 6:25 AM IST
ಸಾಂದರ್ಭಿಕ ಚಿತ್ರ.
ಉಳ್ಳಾಲ: ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಅಲ್ ಮದೀನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ತನ್ನ ತಾಯಿಯ ಸಾವಿನ ದುಃಖದ ನಡುವೆಯೂ ಬುಧವಾರ ಪರೀಕ್ಷೆ ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದು ಮೊಂಟೆಪದವು ಸರಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದ ವಿಶೇಷ ಕೊಠಡಿಯಲ್ಲಿ ಪರೀಕ್ಷಾ ಮೇಲ್ವಿಚಾರಕರು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದರು.
ನರಿಂಗಾನ ಗ್ರಾಮದ ಕೊಡಂಚಿಲ್ ಅಬ್ಟಾಸ್ ಮತ್ತು ಸೆಫಿಯಾ ದಂಪತಿ ಪುತ್ರಿ ಶೈಬಾ ಮಾತೃವಿಯೋಗದ ದುಃಖ ತಾಳಿಕೊಂಡೇ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದಲ್ಲಿದ್ದ ಶೈಬಾ ಅವರ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ನಡುವೆ ಕನ್ನಡ ಪರೀಕ್ಷೆಗೆ ತಯಾರಿಯಲ್ಲಿದ್ದ ಶೈಬಾಳಿಗೆ ದುಃಖದ ನಡುವೆಯೇ ಪರೀಕ್ಷೆ ಬರೆಯಲು ಆಕೆಯ ಸಂಬಂಧಿಕರು, ಕುಟುಂಬದ ಸದಸ್ಯರು ಧೈರ್ಯ ನೀಡಿದ್ದರು.
ಈ ವಿಚಾರವನ್ನು ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಮೊಂಟೆಪದವು ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಅವರ ಮಾರ್ಗದರ್ಶನದಲ್ಲಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಮಾನಸಿಕವಾಗಿ ಧೈರ್ಯ ನೀಡುವ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರು ಸಹಕರಿಸಿದರು. ಪರೀಕ್ಷೆ ಮುಗಿದ ಬಳಿಕ ತಾಯಿಯ ಅಂತ್ಯ ಸಂಸ್ಕಾರದಲ್ಲಿ ವಿದ್ಯಾರ್ಥಿನಿ ಭಾಗವಹಿಸಿದಳು. ಶೋಕದ ನಡುವೆಯೇ ವಿದ್ಯಾರ್ಥಿನಿ ಶುಕ್ರವಾರ ನಡೆಯುವ ಸಮಾಜ ವಿಜ್ಞಾನ ಪರೀಕ್ಷೆಯ ತಯಾರಿ ನಡೆಸಿದ್ದು, ಪರೀಕ್ಷೆಗೆ ಹಾಜರಾಗಲಿದ್ದಾಳೆ ಎಂದು ಆಕೆಯ ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.