ಮೊ| ಪತ್ರಾವೊ ಕಾರ್ಯ ಶ್ರೇಷ್ಠ: ಸಂಸದ ನಳಿನ್
Team Udayavani, Jan 25, 2019, 5:56 AM IST
ಪುತ್ತೂರು: ಸಮಾಜದ ಬೆಳಕಿನ ಬಿಂದುವಾಗಿ ಶ್ರೇಷ್ಠ ಕಾರ್ಯ ಮಾಡಿ ದವರು ಮೊ| ಪತ್ರಾವೊ. ಈಗ ಶಿಕ್ಷಣ ಕಾಶಿಯಾಗಿ ಬೆಳೆದಿರುವ ದ.ಕ. ಜಿಲ್ಲೆಯಲ್ಲಿ ಮಡಿಕೇರಿಯಿಂದ ಮಂಗಳೂರು ತನಕದ ಸಾವಿರಾರು ಮಂದಿಗೆ ಕಾಲೇಜು ಶಿಕ್ಷಣದ ಅವಕಾಶ ಒದಗಿಸಿದ ಮೊ| ಪತ್ರಾವೊ ಅವರು ಶೈಕ್ಷಣಿಕ ಹರಿಕಾರ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನಲ್ಲಿ ಗುರುವಾರ ನಡೆದ ವಜ್ರಮಹೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯವಾಗಲಿ
ಸಂತ ಫಿಲೋಮಿನಾ ಕಾಲೇಜು ಡೊನೇಶನ್ ಮತ್ತು ಟ್ಯೂಶನ್‌ಗಳ ಮಧ್ಯೆ ಸಿಲುಕಿಕೊಳ್ಳದೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಗ್ರಾಮೀಣ ಭಾಗ ದವರೂ ಸುಶಿಕ್ಷಿತರಾಗುವಂತೆ ಮಾಡಿರುವುದು ಹೆಮ್ಮೆಯ ಸಂಗತಿ. ಹತ್ತಾರು ಕ್ರೀಡಾಳುಗಳು, ವೈದ್ಯರು, ಕಲಾವಿದರು, ರಾಜಕೀಯ ವ್ಯಕ್ತಿ ಗಳನ್ನು ನಾಡಿಗೆ ಪರಿಚಯಿಸಿ, ಮೌಲ್ಯ ಯುತವಾಗಿ ಮುನ್ನುಗುತ್ತಿದೆ. 60 ಸಂವತ್ಸರಗಳನ್ನು ಪೂರೈಸಿರುವ ಈ ಸಂಸ್ಥೆ ವಿಶ್ವವಿದ್ಯಾನಿಲಯವಾಗಿ ಪರಿ ವರ್ತನೆ ಗೊಂಡು ಶತಮಾನಗಳಾಚೆಗೂ ಪಸರಿಸಲಿ ಎಂದರು.
ಶ್ರೇಷ್ಠ ಮನ್ನಣೆ
ರಾಜ್ಯದ ಉನ್ನತ ಶಿಕ್ಷಣ ಸಚಿವರ ಪ್ರತಿನಿಧಿಯಾಗಿ ಭಾಗವಹಿಸಿದ್ದ ಉದ್ಯಮಿ ಎಂ.ಬಿ. ಸದಾಶಿವ ಮಾತನಾಡಿ, ಶಿಸ್ತು, ಬದ್ಧತೆ, ಪ್ರಾಮಾಣಿಕತೆ ಮೊದಲಾದ ಆದರ್ಶ, ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಂಡಾಗ ಸಂಸ್ಥೆಯು ಶ್ರೇಷ್ಠ ಮನ್ನಣೆಯನ್ನು ಗಳಿಸಲು ಸಾಧ್ಯ ಎಂದರು.
ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ| ಆ್ಯಂಟನಿ ಸೆರಾ ಮಾತನಾಡಿ, ಶೈಕ್ಷಣಿಕ ರಂಗದಲ್ಲಿ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿಗಳು, ಇತರ ಚಟು ವಟಿಕೆಗಳಲ್ಲಿ ಹೆಸರು ಗಳಿಸಿದವರು, ಜತೆಗೆ ಎಲ್ಲ ವಿದ್ಯಾರ್ಥಿಗಳು ಯಶಸ್ಸಿನ ಉತ್ತುಂಗಕ್ಕೇರಲಿ ಎಂದು ಹಾರೈಸಿದರು.
ಸಮ್ಮಾನ
2018ರಲ್ಲಿ ಧರ್ಮಾಧ್ಯಕ್ಷರಾಗಿ ನೇಮಕಗೊಂಡು ಮೊದಲ ಬಾರಿಗೆ ಕಾಲೇಜಿಗೆ ಆಗಮಿಸಿದ ಡಾ| ಪೀಟರ್ ಪೌಲ್ ಸಲ್ಡಾನ್ಹಾ, ವಿಜಿಎಸ್‌ಟಿ ಪ್ರಶಸ್ತಿ ವಿಜೇತ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ಮಂಗಳೂರು ವಿವಿ ಸಿಂಡಿಕೇಟ್‌ಗೆ ನಾಮನಿರ್ದೇಶನಗೊಂಡ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ, ಪಿಎಚ್‌ಡಿ ಪದವಿ ಗಳಿಸಿದ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕೆ. ಚಂದ್ರಶೇಖರ ಮತ್ತು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಮಾಲಿನಿ ಕೆ. ಅವರನ್ನು ಸಮ್ಮಾನಿಸಲಾಯಿತು.
ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಎಲ್ವಿರಾ ಫಿಲೋ ಮಿನಾ, ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಮೈಕಲ್ ಡಿ’ಸೋಜಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೈರಾಜ್ ಭಂಡಾರಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಒಲಿವೆರ, ಪ.ಪೂ. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ರೈ, ಮಾೖದೆ ದೇವುಸ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್ ಉಪಸ್ಥಿತರಿದ್ದರು.
ಕಾಲೇಜಿನ ಸಂಚಾಲಕ ವಂ| ಅಲ್ಫ್ರೆಡ್ ಜೆ. ಪಿಂಟೊ ಸ್ವಾಗತಿಸಿ, ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ ಕಾಲೇಜಿನ ಆರು ದಶಕಗಳ ಸಾಧನೆಗಳ ವರದಿ ಮಂಡಿಸಿದರು. ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್ ಲೋಬೊ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭಾರತಿ ಎಸ್. ರೈ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ ನಿರಂತರ ಪ್ರಕ್ರಿಯೆ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ| ಡಾ| ಪೀಟರ್ ಪೌಲ್ ಸಲ್ಡಾನ್ಹಾ ಮಾತನಾಡಿ, ನಾವು ವಸ್ತುಸ್ಥಿತಿಯನ್ನು ಅವಲೋಕಿಸುವಾಗ ಸಾಧಕ-ಬಾಧಕಗಳೆರಡನ್ನೂ ಸಮಾನವಾಗಿ ಪರಿಗಣಿಸಬೇಕು. ಆಗ ಮಾತ್ರ ಬೆಳವಣಿಗೆ ಸಾಧ್ಯ. ಶಿಕ್ಷಣವು ನಿರಂತರ ಪ್ರಕ್ರಿಯೆ. ಅದು ಕಾಲೇಜಿನ ಚೌಕಟ್ಟನ್ನು ಮೀರಿದ ಬೆಳವಣಿಗೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.