“ಪರೀಕ್ಷೆ ಎದುರಿಸಲು ಅರ್ಥಶಾಸ್ತ್ರದ ಜ್ಞಾನ ಬೇಕು’
Team Udayavani, May 5, 2019, 6:00 AM IST
ದರ್ಬೆ: ಭಾರತೀಯ ಆಡಳಿತಾತ್ಮಕ ಸೇವೆಗೆ ನೇಮಕಾತಿ ಸಂದರ್ಭದಲ್ಲಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅರ್ಥಶಾಸ್ತ್ರದಂತಹ ಕಲಾ ವಿಭಾಗಕ್ಕೆ ಸಂಬಂಧಪಟ್ಟ ವಿಷಯದ ಕುರಿತು ಪರಿಪೂರ್ಣ ಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದಲ್ಲಿ ಎರಡು ವರ್ಷಗಳ ಸ್ನಾತಕೋತ್ತರ ಅಧ್ಯಯನವನ್ನು ಪೂರೈಸಿ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿದಾಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಭಾಷಾ ಜ್ಞಾನವೂ ಅಗತ್ಯ
ಮಾನವನು ತನ್ನ ಸಾಮರ್ಥ್ಯದ ಕುರಿತು ಸ್ವವಿಮರ್ಶೆ ಮಾಡಿಕೊಳ್ಳುವ ಮನಃಸ್ಥಿತಿಯನ್ನು ಹೊಂದಿರಬೇಕು. ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ಕೇವಲ ಜ್ಞಾನ ಸಂಪಾದನೆಯೊಂದೇ ಸಾಲದು. ಉತ್ತಮ ನಡತೆ ಮತ್ತು ನೈತಿಕತೆಯೂ ವೃತ್ತಿ ಬದುಕಿನ ಯೋಗ್ಯತೆಯನ್ನು ನಿರ್ಧರಿಸುತ್ತದೆ. ಭಾವನೆಗಳನ್ನು ಇತರರಿಗೆ ತಲುಪಿಸಲು ಪರಿಣಾಮಕಾರಿಯಾದ ಭಾಷಾ ಜ್ಞಾನವೂ ಅತಿ ಅಗತ್ಯ ಎಂದರು.
ಸಾಮರ್ಥ್ಯವನ್ನೂ ವೃದ್ಧಿಸಿಕೊಳ್ಳಿ
ವಿಭಾಗದ ಸಂಯೋಜಕ ಪ್ರೊ| ದಿನಕರ ರಾವ್ ಮಾತನಾಡಿ, ಶಿಕ್ಷಣ ಸಂಸ್ಥೆಯ ಏಳಿಗೆಯಲ್ಲಿ ಅಧ್ಯಯನಾಸಕ್ತ ವಿದ್ಯಾರ್ಥಿ ಸಮುದಾಯ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವ ಶಿಕ್ಷಕ ವೃಂದ ನಿರ್ಣಾಯಕ ಪಾತ್ರ ವಹಿಸುತ್ತದೆ. ಜ್ಞಾನದ ಮಟ್ಟವನ್ನು ಉನ್ನತೀಕರಿಸುವ ಜತೆಯಲ್ಲಿ ಸ್ಪರ್ಧೆಯನ್ನು ಎದುರಿಸಲು ಅಗತ್ಯವಿರುವ ಸಾಮರ್ಥ್ಯವನ್ನೂ ವೃದ್ಧಿಸಿಕೊಳ್ಳಬೇಕು ಎಂದು ಹೇಳಿ, ಶುಭ ಹಾರೈಸಿದರು.
ಕೆಸೆಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿನಿ ಶಬಾನ ಪಿ. ಅವರನ್ನು ಸಮ್ಮಾನಿಸಲಾಯಿತು. ಸ್ಟೂಡೆಂಟ್ ಫೇಕಲ್ಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ ಶೃತಿ ಬಿ.ಎಸ್., ಅಶ್ವಿನಿ ಸಿ.ಎಸ್., ಬಿ.ಓ. ಸೌಮ್ಯಾ, ಶಬಾನಾ ಪಿ., ಅಕ್ಷತಾ ಎಸ್., ಪಲ್ಲವಿ ಅವರಿಗೆ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಯಿತು. ಪ್ರಾಡಕ್ಟ್ ಲಾಂಚ್ ಸ್ಪರ್ಧೆಯ ವಿಜೇತರಾದ ಮೋಹಿನಿ (ಪ್ರ), ಶೃತಿ ಬಿ.ಎಸ್. (ದ್ವಿ), ಅಕ್ಷತಾ ಮತ್ತು ಬಿ.ಟಿ. ಸೌಮ್ಯಾ (ತೃ) ಅವರನ್ನು ಅಭಿನಂದಿಸಲಾಯಿತು. ಇಕೊನೊಮಿಕ್ಸ್ ಫೆಸ್ಟ್‌ನಲ್ಲಿ ಸಮಗ್ರವಾಗಿ ಸಹಕರಿಸಿದ ಪವಿತ್ರಾ ಜಿ. ಹಾಗೂ ವಾಲ್ ಬೋರ್ಡ್ ಮ್ಯಾಗಸಿನ್ ಅನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಅಮೃತಾ, ಸರಸ್ವತಿ ಮತ್ತು ಸ್ವಾತಿ ಅವರನ್ನು ಗೌರವಿಸಲಾಯಿತು. ನ್ಪೋಕನ್ ಇಂಗ್ಲಿಷ್ ಸರ್ಟಿಫಿಕೇಟ್ ಕೋರ್ಸ್ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ವಿಭಾಗದ ಹಿರಿಯ ಪ್ರಾಧ್ಯಾಪಕಿ ಡಾ| ಮಂಜುಳಾ ಬಿ.ಸಿ. ಉಪಸ್ಥಿತರಿದ್ದರು. ಪವಿತ್ರಾ ಸ್ವಾಗತಿಸಿ, ಮಿಸ್ರಿಯಾ ವಂದಿಸಿದರು. ಶ್ವೇತಾ ಕುಮಾರಿ ನಿರೂಪಿಸಿದರು. ಅನಂತರ ವಿದ್ಯಾರ್ಥಿಗಳು ಮನರಂಜನ ಸ್ಪರ್ಧೆ ಸಂಯೋಜಿಸಿದರು.
ಸತತ ಪ್ರಯತ್ನವಿರಲಿ
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ ಮಾತನಾಡಿ, ಅರ್ಥಶಾಸ್ತ್ರದ ವಿದ್ಯಾರ್ಥಿಗಳು ವಿಶ್ವವಿಖ್ಯಾತ ಅರ್ಥಶಾಸ್ತ್ರಜ್ಞರ ಸಾಧನೆಗಳನ್ನು ಅಧ್ಯಯನಕ್ಕೆ ಮಾದರಿಯಾಗಿ ಪರಿಗಣಿಸಬೇಕು. ಸಾರ್ಥಕತೆಗೆ ಸತತ ಪ್ರಯತ್ನವೇ ಮೂಲಮಂತ್ರ. ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.