ರಾಜ್ಯ ಸರಕಾರ ಕೋಮಾದಲ್ಲಿದೆ: ದಿನೇಶ್‌


Team Udayavani, Oct 26, 2019, 3:57 AM IST

a-86

ಮಂಗಳೂರು: ರಾಜ್ಯದಲ್ಲಿ ಯಾವುದೇ ಜನಪರ ಕಾರ್ಯಕ್ರಮಗಳು ಅನುಷ್ಠಾನವಾಗುತ್ತಿಲ್ಲ. ಸರಕಾರ ಇನ್ನೂ ಟೆಕಾಫ್‌ ಆಗಿಲ್ಲ. ಸಚಿವ ಸಂಪುಟದಲ್ಲಿ ಟೀಂವರ್ಕ್‌ ಇಲ್ಲ. ಉಸ್ತುವಾರಿ ಸಚಿವರು, ಸಚಿವರು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿಲ್ಲ. ಒಟ್ಟಾರೆಯಾಗಿ ರಾಜ್ಯ ಸರಕಾರ ಕೋಮಾಸ್ಥಿತಿಯಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆಯಿಂದ ಲಕ್ಷಾಂತರ ಮಂದಿ ಮನೆ, ಆಸ್ತಿ-ಪಾಸ್ತಿ, ಕೃಷಿ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ರಾಜ್ಯ ಸರಕಾರದಿಂದ ಆಗುತ್ತಿಲ್ಲ. ನೆರವಿಗೆ ಬರಬೇಕಾದ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ. ಮೋದಿ ಜತೆ ಮಾತನಾಡುವ ಧೈರ್ಯವಿಲ್ಲದ ಯಡಿಯೂರಪ್ಪ ಅವರ ಅಸಹಾಯಕ ಸ್ಥಿತಿ ನೋಡಿ ನಮಗೆ ಕನಿಕರ ಹುಟ್ಟುತ್ತಿದೆ ಎಂದರು. 2009ರಲ್ಲಿ ನೆರೆ ಪರಿಸ್ಥಿತಿ ವೇಳೆ ಆಗಿನ ಪ್ರಧಾನಿ ಡಾ| ಮನಮೋಹನ ಸಿಂಗ್‌ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ 1500 ಕೋ.ರೂ. ಮಂಜೂರು ಮಾಡಿಸಿದ್ದರು ಎಂದವರು ಹೇಳಿದರು.

ಮರಳಿ ಸೇರ್ಪಡೆ ಇಲ್ಲ
ಅನರ್ಹ ಶಾಸಕರಲ್ಲಿ ಕೆಲವು ಮಂದಿ ಮರಳಿ ಕಾಂಗ್ರೆಸ್‌ ಸೇರಲು ಉತ್ಸುಕತೆ ತೋರ್ಪಡಿಸುತ್ತಿದ್ದಾರೆ. ಪಕ್ಷಕ್ಕೆ ದ್ರೋಹವೆಸಗಿದವರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಗೊಳಿಸುವ ಪ್ರಶ್ನೆಯೇ ಇಲ್ಲ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ, ಕೆಪಿಸಿಸಿ ವೀಕ್ಷಕರಾದ ವಿ.ಆರ್‌. ಸುದರ್ಶನ್‌, ಸೂರಜ್‌ ಹೆಗ್ಡೆ, ಎಐಸಿಸಿ ಕಾರ್ಯ ದರ್ಶಿ ವಿಷ್ಣುನಾಥನ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಶಾಸಕರಾದ  ವಿಜಯ ಕುಮಾರ್‌ ಶೆಟ್ಟಿ , ಜೆ.ಆರ್‌.ಲೋಬೋ, ಶಕುಂತಳಾ ಶೆಟ್ಟಿ, ಡಿಸಿಸಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌, ಮುಖಂಡರಾದ ಕಳ್ಳಿಗೆ ತಾರನಾಥ ಶೆಟ್ಟಿ , ಮೋಹನ್‌ ಪಿ.ವಿ., ಮಿಥುನ್‌ ರೈ, ಧನಂಜಯ ಅಡ³ಂಗಾಯ, ಶಾಲೆಟ್‌ ಪಿಂಟೋ, ಶಶಿಧರ ಹೆಗ್ಡೆ, ನವೀನ್‌ ಡಿ’ಸೋಜಾ, ಪ್ರಸಾದ್‌ ರಾಜ್‌ ಕಾಂಚನ್‌, ಟಿ.ಕೆ.ಸುಧೀರ್‌, ನಜೀರ್‌ ಬಜಾಲ್‌ ಮತ್ತಿತರರು ಉಪಸ್ಥಿತರಿದ್ದರು.

ಬುಧವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಬುಧವಾರ ಪ್ರಕಟಿಸಲಾಗುವುದು. ಹಿಂದಿನ ಸಿದ್ಧರಾಮಯ್ಯ ಸರಕಾರ ಮಂಗಳೂರಿಗೆ ಸಾಕಷ್ಟು ಅನುದಾನ ನೀಡಿದೆ. ಕಳೆದ 5 ವರ್ಷಗಳಲ್ಲಿ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಪಕ್ಷ ಒಗ್ಗಟ್ಟಿನಿಂದ, ಆತ್ಮವಿಶ್ವಾಸದಿಂದ ಚುನಾ ವಣೆಗೆ ಎದುರಿಸುತ್ತಿದ್ದು ಕಳೆದ ಸಾಲಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ದಿನೇಶ್‌ ಗುಂಡೂರಾವ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.