ಹಕ್ಕೊತ್ತಾಯ ಈಡೇರಿಕೆಗೆ ಇದು ಸಕಾಲ

ತುಳುವಿಗೆ ರಾಜ್ಯ ಭಾಷೆ ಮಾನ್ಯತೆ, ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ

Team Udayavani, Dec 17, 2019, 5:02 AM IST

Untitled-1

ಮಂಗಳೂರು: ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ತುಳುವರ ಹಕ್ಕೊತ್ತಾಯಕ್ಕೆ ಮತ್ತೆ ಜೀವ ಬಂದಿದೆ.

ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಈ ಸಂಬಂಧ ಕರಾವಳಿಯ ಎಲ್ಲ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಗಳ ಭೇಟಿಗೆ ಉದ್ದೇಶಿಸಿದೆ. ದ.ಕ.ಮತ್ತು ಉಡುಪಿ ಜಿಲ್ಲೆಯ ಒಟ್ಟು 13 ವಿಧಾನಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಶಾಸಕರಿದ್ದು, ಬಿಜೆಪಿ ರಾಜ್ಯಾಧ್ಯಕ್ಷ,ಸಂಸದ ನಳಿನ್‌, ಸಂಸದೆ ಶೋಭಾ, ಕೇಂದ್ರ ಸಚಿವ ಸದಾನಂದ ಗೌಡ ಕೂಡ ತುಳುವರೇ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವೇ ಆಡಳಿತದಲ್ಲಿದೆ. ಕರಾವಳಿಗರ ಆಶೋತ್ತರ ಈಡೇರಿಸಲು ಇದಕ್ಕಿಂತ ಸಕಾಲ ಇನ್ನೊಂದು ಸಿಗದು ಎನ್ನುವುದೇ ಅಕಾಡೆಮಿ ಪ್ರಯತ್ನವನ್ನು ಮತ್ತೆ ಮುಂಚೂಣಿಗೆ ತರಲು ಕಾರಣ.

ಅಲ್ಲದೆ “ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಗಳಲ್ಲೊಂದು ಎಂದು ಘೋಷಿಸಲು ಸರಕಾರ ಸಿದ್ಧ’ ಎಂದು ಸರಿಯಾಗಿ ಹತ್ತು ವರ್ಷಗಳ ಹಿಂದೆ 2009ರ ಡಿ. 10ರಂದು ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಹೇಳಿಕೆ ನೀಡಿದ್ದರು.

ಹತ್ತು ವರ್ಷಗಳಲ್ಲಿ ಈಡೇರದ ಬೇಡಿಕೆ
ತುಳುವನ್ನು ರಾಜ್ಯಭಾಷೆ ಮಾಡಲಾಗುವುದು ಎಂದು ಯಡಿಯೂ ರಪ್ಪ ಹೇಳಿ ಹತ್ತು ವರ್ಷಗಳು ಸಂದಿವೆ. ರಾಜ್ಯ ಸಭೆ, ಲೋಕಸಭೆಯಲ್ಲಿಯೂ ತುಳುವಿಗೆ ಸ್ಥಾನಮಾನದ ಬಗ್ಗೆ ಮಾತುಕತೆ ನಡೆದಿದೆ. ಸುಮಾರು 50ಕ್ಕೂ ಮಿಕ್ಕಿ ಪ್ರಶ್ನೆಗಳನ್ನೂ ಕೇಳಲಾಗಿದೆ. ಡಾ| ಡಿ. ವೀರೇಂದ್ರ ಹೆಗ್ಗಡೆ, ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಎ.ಸಿ. ಭಂಡಾರಿ ಒಳಗೊಂಡಂತೆ ನಿಯೋಗವೊಂದು 2016ರಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಕಳೆದ ವರ್ಷ ಪ್ರಧಾನಿ ಮೋದಿ ಉಜಿರೆಗೆ ಆಗಮಿಸಿದ್ದಾಗಲೂ ಡಾ| ಹೆಗ್ಗಡೆಯವರ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿತ್ತು. ತುಳು ಸಂಘಟನೆಗಳು ಟ್ವಿಟರ್‌ ಅಭಿಯಾನ ನಡೆಸಿದ್ದವು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಕ್ಕೊತ್ತಾಯ ಸಭೆ ನಡೆದಿತ್ತು.

ಸಮಿತಿಗೂ ಮುನ್ನ ಸೇರ್ಪಡೆ
ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಬೇಕು ಎಂಬ ಒತ್ತಾಯ ಅನೇಕ ಭಾಷೆಗಳಿಂದ ಬಂದ ಹಿನ್ನೆಲೆಯಲ್ಲಿ 1998ರಲ್ಲಿ ಎನ್‌ಡಿಎ ಸರಕಾರ ಆಡಳಿತದಲ್ಲಿರುವಾಗ ಅಂದಿನ ಗೃಹ ಸಚಿವ ಎಲ್‌.ಕೆ. ಆಡ್ವಾಣಿ ಅವರು ಸೀತಾಕಾಂತ ಮಹಾಪಾತ್ರ ಅವರ ನೇತೃತ್ವದಲ್ಲಿ ಸಮಿತಿಯೊಂದರ ರಚನೆಗೆ ಸೂಚಿಸಿದ್ದರು.

ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಲು ಭಾಷೆಗಳಿಗೆ ಯಾವೆಲ್ಲ ಮಾನದಂಡಗಳು ಇರಬೇಕು ಎನ್ನುವುದನ್ನು ನಿರ್ಧರಿಸುವುದಕ್ಕಾಗಿ ಇದನ್ನು ರಚಿಸಲಾಗಿತ್ತು. ಆದರೆ ಕಮಿಟಿಯ ವರದಿ ಈವರೆಗೂ ಬಹಿರಂಗವಾಗಿಲ್ಲ. ಹೀಗಿರುವಾಗಲೇ ವಾಜಪೇಯಿ ಪ್ರಧಾನಿಯಾಗಿದ್ದಾಗ ಡೋಗ್ರಿ, ಬೋಡೊ, ಸಂಥಾಲಿ, ಮೈಥಿಲಿ ಭಾಷೆಗಳು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿದ್ದವು.

ತುಳು ಭಾಷೆ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಬೇಕು ಎನ್ನುವುದು ಕರಾವಳಿಗರ ಅನೇಕ ವರ್ಷಗಳ ಬೇಡಿಕೆ. ಇಂಥ ಬೇಡಿಕೆ 30ಕ್ಕೂ ಹೆಚ್ಚು ಭಾಷೆಗಳಿಂದ ಇದೆ. ಇದೇ ಕಾರಣಕ್ಕೆ ಕೇಂದ್ರ ಸರಕಾರ ಜಾಣ ನಡೆ ಅನುಸರಿಸುತ್ತಿದೆ. ತುಳುವಿಗೆ ಖಂಡಿತವಾಗಿಯೂ ಮಾನ್ಯತೆ ಸಿಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರುತ್ತದೆ.
– ಬಿ.ಎ. ವಿವೇಕ ರೈ, ಹಿರಿಯ ವಿದ್ವಾಂಸ

8ನೇ ಪರಿಚ್ಛೇದಕ್ಕೆ ಸೇರ್ಪಡೆಗೂ ಮುನ್ನ ತುಳು ರಾಜ್ಯದ ಅಧಿಕೃತ ಭಾಷೆಯಾಗಬೇಕು. ಆ ನಿಟ್ಟಿನಲ್ಲಿ ಕರಾವಳಿಯ ಎಲ್ಲ ಶಾಸಕರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿಗಳ ಭೇಟಿ ನಡೆಸಲಿದೆ. ಜತೆಗೆ ತುಳುನಾಡಿನ ಇತಿಹಾಸ ಸೇರಿದಂತೆ ಮತ್ತಷ್ಟು ಪೂರಕ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
– ದಯಾನಂದ ಕತ್ತಲಸಾರ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ರಾಜ್ಯದ ಅಧಿಕೃತ ಭಾಷೆಯನ್ನಾಗಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಚರ್ಚಿಸಿದ್ದಾರೆ. ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸಾಧಕ-ಬಾಧಕಗಳ ಚರ್ಚೆ ನಡೆಸಲಾಗುವುದು.
– ಸಿ.ಟಿ. ರವಿ, ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಸಚಿವ

ಟಾಪ್ ನ್ಯೂಸ್

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.